ಬಗರ್‌ ಹುಕುಂ ಜಮೀನಿನವರಿಗೆ ಇನ್ನು ಮಾಲಿಕತ್ವ ಇಲ್ಲ: ಆರ್.‌ ಅಶೋಕ್‌

ಬಗರ್‌ ಹುಕುಂ ಸಾಗುವಳಿ ದಾರರಿಗೆ ಮಾಲೀಕತ್ವ ಇಲ್ಲ
ರೈತರಿಗೆ ದೊಡ್ಡ ಶಾಕ್‌
ಮಂಜೂರಾತಿ ಭರವಸೆ ಕೊಟ್ಟು ರೈತರಿಗೆ ಕೈಕೊಟ್ಟ ಬಿಜೆಪಿ ಸರ್ಕಾರ

ಬಗರ್‌ ಹುಕುಂ ಸಾಗುವಳಿ ಹೆಸರಿನಲ್ಲಿ ನಡೆಯುತ್ತಿರುವ ಸರ್ಕಾರಿ ಜಮೀನು ಕಬಳಿಕೆ ತಡೆಗೆ ಮುಂಬರುವ ಅಧಿವೇಶನದಲ್ಲೇ ಕರ್ನಾಟಕ ಭೂ ಕಂದಾಯ ಕಾಯಿದೆಗೆ ತಿದ್ದುಪಡಿ ತರಲು ವಿಧೇಯಕ ಮಂಡಿಸಲಾಗುವುದು.

ಬಗರ್‌ ಹುಕುಂ ಸಾಗುವಳಿ ಹೆಸರಿನಲ್ಲಿ ನಡೆಯುತ್ತಿರುವ ಸರ್ಕಾರಿ ಜಮೀನು ಕಬಳಿಕೆ ತಡೆಗೆ ಮುಂಬರುವ ಅಧಿವೇಶನದಲ್ಲೇ ಕರ್ನಾಟಕ ಭೂ ಕಂದಾಯ ಕಾಯಿದೆಗೆ ತಿದ್ದುಪಡಿ ತರಲು ವಿಧೇಯಕ ಮಂಡಿಸಲಾಗುವುದು. ತನ್ಮೂಲಕ ಸರ್ಕಾರಿ ಭೂ ಮಂಜೂರಾತಿಗೆ ಅರ್ಜಿ ಸಲ್ಲಿಸುವ ಸಾಗುವಳಿದಾರರಿಗೆ ಮಾಲೀಕತ್ವದ ಹಕ್ಕು ನೀಡದೆ ಕೇವಲ ಗುತ್ತಿಗೆ ಆಧಾರದ ಮೇಲೆ ಭೂಮಿ ನೀಡಲಾಗುವುದು ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಹೇಳಿದ್ದಾರೆ. ಇದರಿಂದ ಹೊಸದಾಗಿ ಸರ್ಕಾರಿ ಭೂಮಿ ಒತ್ತುವರಿಯಾಗುವುದನ್ನು ತಡೆಯಬಹುದು. 

ಜತೆಗೆ ಪ್ರಸ್ತುತ ಸಾಗುವಳಿದಾರರಿಂದ ಸಾಗುವಳಿ ಆಗುತ್ತಿರುವ ಸರ್ಕಾರಿ ಜಮೀನನ ಮಾಲೀಕತ್ವವೂ ಸರ್ಕಾರದ ಬಳಿಯೇ ಉಳಿಯಲಿದ್ದು, ಗುತ್ತಿಗೆ ಆಧಾರದ ಮೇಲೆ ಸಾಗುವಳಿಗೆ ನೀಡುವುದರಿಂದ ಆದಾಯವೂ ಬರಲಿದೆ ಎಂದು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನಿಂದಲೂ ಸರ್ಕಾರಿ ಗೋಮಾಳ, ಬೆಟ್ಟ, ಗುಡ್ಡ, ಅರಣ್ಯ ಪ್ರದೇಶದ ಜಾಗದಲ್ಲಿ ದೀರ್ಘಾವಧಿ ಕಾಲದಿಂದ ಸಾಗುವಳಿ ಮಾಡುತ್ತಿದ್ದೇವೆ ಎಂದು ಅರ್ಜಿ ಸಲ್ಲಿಸಿ ಸರ್ಕಾರ ಜಮೀನನ್ನು ಮಂಜೂರು ಮಾಡಿಸಿಕೊಳ್ಳುತ್ತಿದ್ದಾರೆ. ಇದರಲ್ಲಿ ಭೂ ರಹಿತ ರೈತರ ಜತೆಗೆ ಸರ್ಕಾರಿ ಜಮೀನು ಕಬಳಿಕೆ ಮಾಡುವ ಮಾಫಿಯಾವು ಸಕ್ರಿಯವಾಗಿ ಕೆಲಸ ಮಾಡುತ್ತಿದೆ. ಇದರಿಂದ ಬಹುತೇಕ ಜಿಲ್ಲೆಗಳಲ್ಲಿ ಸರ್ಕಾರಿ ಜಮೀನುಗಳೇ ಖಾಲಿಯಾಗುವ ಸ್ಥಿತಿ ಬಂದಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಜು.16ರಿಂದ ಪೌತಿಖಾತೆ ಅಭಿಯಾನ:‌ ಕಂದಾಯ ಸಚಿವ‌ ಆರ್ ಅಶೋಕ್

ಈಗಾಗಲೇ ಬಗರ್‌ಹುಕುಂ ಸಾಗುವಳಿ ಅಡಿ ಕುಮ್ಕಿ, ಕಾನು, ಬೆಟ್ಟ, ಸೊಪ್ಪಿನಬೆಟ್ಟ, ಜುಮ್ಮ-ಬಾನೆ ಇತರೆ ವರ್ಗಗಳ ಜಮೀನು ಮಂಜೂರಾತಿಗೆ 2010ರಲ್ಲೇ ನಿರ್ಬಂಧ ವಿಧಿಸಲಾಗಿದೆ. ಒಂದು ವೇಳೆ ನಿರ್ಬಂಧಿತ ಜಮೀನು ಒತ್ತುವರಿ ಮಾಡಿದರೆ 192 (ಎ) ನಿಯಮದಡಿ 3 ವರ್ಷ ಜೈಲು ಶಿಕ್ಷೆ, ದಂಡ ಶುಲ್ಕ ವಿಧಿಸುವ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಅವಕಾಶವಿದೆ. ಭೂ ಕಬಳಿಕೆ ಪ್ರಕರಣದ ವಿಚಾರಣೆಗೆ ಸರಕಾರ ಬೆಂಗಳೂರಿನಲ್ಲಿ ವಿಶೇಷ ನ್ಯಾಯಾಲಯ ಸ್ಥಾಪಿಸಲಾಗಿದೆ. ಇದೀಗ ಈ ಕಾಯಿದೆ ಜಾರಿಯಾದರೆ ಸರ್ಕಾರಿ ಭೂ ಕಬಳಿಕೆ ತಕ್ಕ ಮಟ್ಟಿಗೆ ನಿಯಂತ್ರಣಕ್ಕೆ ಬರಬಹುದು ಎಂದು ಕಂದಾಯ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post