13 ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ

ಆರೋಪಿ ಮೊಹಮ್ಮದ್‌ ಮಕ್ಸೂದ್‌ ಎಂ.ಹೆಚ್‌. ಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ
ಕಲಂ 6 ಫೋಕ್ಸೊ ಕಾಯ್ದೆಯಡಿ ಪ್ರಕರಣ ದೃಢ

ಆರೋಪಿ ಮೊಹಮ್ಮದ್‌ ಮಕ್ಸೂದ್ ಎಂ.ಹೆಚ್.

ನೆಲದಧ್ವನಿ ಸುದ್ದಿ

ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ‌ ಎಸಗಿರುವುದು ಕಲಂ 6 ಪೋಕ್ಸೋ ಕಾಯ್ದೆಯಡಿ ಪ್ರಕರಣ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿ ಮೊಹಮ್ಮದ್‌ ಮಕ್ಸೂದ್‌ ಎಂ.ಹೆಚ್‌.(23)ಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 60,000 ದಂಡ ವಿಧಿಸಿದ್ದು, ದಂಡ ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 06 ತಿಂಗಳು ಸಾದಾ ಕಾರಗೃಹವಾಸ ಶಿಕ್ಷೆ ಬುಧವಾರ ವಿಧಿಸಿ ಆದೇಶ ಹೊರಡಿಸಲಾಗಿದೆ.

2021ರ ಜೂನ್ 29ರ ಸಂಜೆ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಲೈಂಗಿಕ ದೌರ್ಜನ್ಯವೆಸಗಿರುತ್ತಾನೆಂದು ನೀಡಿದ ದೂರಿನ ಮೇರೆಗೆ ಅಂದಿನ ತನಿಖಾಧಿಕಾರಿ ತೀರ್ಥಹಳ್ಳಿ ವೃತ್ತದ ಸಿಪಿಐ ಪ್ರವೀಣ್ ನೀಲಮ್ಮನವರ್ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು.

ಸರ್ಕಾರಿ ಅಭಿಯೋಜಕ ಹರಿಪ್ರಸಾದ್ ವಾದ ಮಂಡಿಸಿದ್ದು, ಶಿವಮೊಗ್ಗ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಎಫ್ ಟಿಎಸ್ ಸಿ-2 (ಫೋಕ್ಸೊ) ವಿಚಾರಣೆ ಆಲಿಸಿ ನ್ಯಾಯಾಧೀಶ ಮೋಹನ ಜೆ.ಎಸ್ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post