ಪಟ್ಟಣ ಪಂಚಾಯಿತಿ ವತಿಯಿಂದ ಅದ್ದೂರಿ ಸ್ವಾತಂತ್ರ್ಯ ಅಮೃತ ಮಹೋತ್ಸವ

ಆಗಸ್ಟ್‌ 11 ರಿಂದ 15ರ ವರೆಗೆ ಸರಣಿ ಕಾರ್ಯಕ್ರಮ
ಗೃಹಸಚಿವ ಆರಗ ಜ್ಞಾನೇಂದ್ರರಿಂದ ಉಪಸ್ಥಿತಿ - ಶಬನಮ್

ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದೆ. ಆಗಸ್ಟ್‌ 11 ರಂದು ಗುರುವಾರ ಬೆಳಿಗ್ಗೆ 11 ಗಂಟೆಗೆ ಗೃಹಸಚಿವ ಆರಗ ಜ್ಞಾನೇಂದ್ರ ಹರ್‌ ಘರ್‌ ತಿರಂಗ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಶಬನಮ್‌ ವಹಿಸಲಿದ್ದಾರೆ. ಕಾರ್ಯಕ್ರಮದ ಕುರಿತು ವಿವರಣೆ ನೀಡಿದ ಶಬನಮ್‌ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಅದ್ದೂರಿಯಾಗಿ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಆಚರಿಸಲಾಗುತ್ತಿದೆ. ಪ್ರತಿ ಮನೆಗಳಲ್ಲೂ ರಾಷ್ಟ್ರಧ್ವಜವನ್ನು ಹಾರಿಸಲು ವಿನಂತಿಸಲಾಗಿದೆ. ಅಂಗಡಿ ಮುಂಗಟ್ಟುಗಳ ಎದುರು ವಿದ್ಯುತ್‌ ದೀಪಾಲಂಕಾರ ಮಾಡಲು ಕರೆ ನೀಡಿದರು. ಆಗಸ್ಟ್‌ 12ರ ಶುಕ್ರವಾರದಂದು ಸಂಜೆ 6.30ರಿಂದ ಸ್ವಾತಂತ್ರ್ಯ ಚಳುವಳಿ ಕುರಿತ ಈಸೂರ ಕೊಡೆವು ಹಾಗೂ ಹತ್ಯಾಕಾಂಡ ಎಂಬ ನಾಟಕಗಳನ್ನು ಏರ್ಪಡಿಸಲಾಗಿದೆ. ಆಗಸ್ಟ್‌ 13ರ ಶನಿವಾರ ಸಂಜೆ 6.30ಕ್ಕೆ ಖ್ಯಾತ ಗಾಯಕಿ ಸುರೇಖ ಹೆಗಡೆ ಅವರಿಂದ ದೇಶಭಕ್ತಿ ಸುಗಮ ಸಂಗೀತ ಏರ್ಪಡಿಸಲಾಗಿದೆ. ಆಗಸ್ಟ್‌ 15ರ ಸೋಮವಾರ ಬೆಳಿಗ್ಗೆ 7.30ಕ್ಕೆ ಪಟ್ಟಣ ಪಂಚಾಯಿತಿ ಆವರಣದಲ್ಲಿ ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದೆ. ಸಂಜೆ 5.30ಕ್ಕೆ ಪಟ್ಟಣದ ಆಗುಂಬೆ ಬಸ್‌ ನಿಲ್ದಾಣದ ಬಳಿ ಪಟ್ಟಣ ಪಂಚಾಯಿತಿ ವತಿಯಿಂದ ಗಾಂಧಿ ಸ್ಮಾರಕ ಅನಾವರಣಗೊಳ್ಳಲಿದೆ. ಹಾಗೂ ಸಂಜೆ  6.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು.

ರಾಷ್ಟ್ರಧ್ವಜದ ಕುರಿತು ಬದ್ದತೆ ಇರಲಿ ಎಂಬ ಕಾರಣಕ್ಕೆ ಹಣ ಸಂಗ್ರಹ – ಸಂದೇಶ ಜವಳಿ

ಅಮೃತ ಮಹೋತ್ಸವದ ಸಂಭ್ರಮದಲ್ಲಿ ಪಟ್ಟಣ ವ್ಯಾಪ್ತಿಯ ಮನೆಯಿಂದ ಪ್ರತಿ ಭಾವುಟಕ್ಕೆ ಸಾರ್ವಜನಿಕರಿಂದಲೇ 22 ರೂಪಾಯಿಗಳನ್ನು ಸಂಗ್ರಹಿಸುವುದು ಸರಿಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸದಸ್ಯ ಸಂದೇಶ ಜವಳಿ ಹಣಕೊಟ್ಟು ಭಾವುಟವನ್ನು ಪಡೆದುಕೊಂಡಾಗ ಬದ್ದತೆ ಮತ್ತು ಜವಾಬ್ದಾರಿ ಹೆಚ್ಚಿರುತ್ತದೆ. ಹಾಗಾಗಿ ಹಣ ಸಂಗ್ರಹ ಮಾಡಲಾಗುತ್ತಿದೆ. ಎಲ್ಲರೂ ಕೊಡುತ್ತಾರೆ ಎಂದು ನಿರೀಕ್ಷೆ ಮಾಡಲಾಗುವುದಿಲ್ಲ ಕೊಡದಿದ್ದರೆ ಅದನ್ನು ಪಟ್ಟಣ ಪಂಚಾಯಿತಿ ಭರಿಸುತ್ತದೆ ಎಂದರು. 1994ರಲ್ಲಿ ಸ್ವಾತಂತ್ರ್ಯದ 50ನೇ ವರ್ಷಾಚರಣೆ ಸಂದರ್ಭದಲ್ಲಿ ಸರ್ಕಾರವೇ ಪ್ರತಿ ಮನೆಗೆ ಸಿಹಿ ಹಂಚಲು ಪ್ರತಿಯೊಂದು ಗ್ರಾಮ ಪಂಚಾಯಿತಿಗೆ 5000 ರೂಪಾಯಿ ಅನುದಾನ ಬಿಡುಗಡೆ ಮಾಡಿತ್ತು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಂತಹ ಅನುದಾನ ಬಿಡುಗಡೆ ಮಾಡಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಅಂತಹ ಯಾವುದೇ ಸೂಚನೆ ಬಂದಿಲ್ಲ. ಆದರೂ ಪಟ್ಟಣ ಪಂಚಾಯಿತಿ ವತಿಯಿಂದ ಶಾಲಾ ಮಕ್ಕಳಿಗೆ ಸಿಹಿ ಹಂಚಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಉಪಾಧ್ಯಕ್ಷ ಜಯಪ್ರಕಾಶ್‌ ಶೆಟ್ಟಿ, ಸ್ಥಾಯಿ ಸಮಿತಿ ಸದಸ್ಯ ರತ್ನಾಕರ್‌ ಶೆಟ್ಟಿ, ಸದಸ್ಯರಾದ ಸೊಪ್ಪುಗುಡ್ಡೆ ರಾಘವೇಂದ್ರ, ಸುಶೀಲ ಶೆಟ್ಟಿ, ಗೀತಾ ರಮೇಶ್‌, ಜ್ಯೋತಿ ಗಣೇಶ್‌, ಜ್ಯೋತಿ ಮೋಹನ್‌, ವಿನೂತ್‌ ಗೌಡ ಮುಖ್ಯಾಧಿಕಾರಿ ಕುರಿಯಾ ಕೋಸ್‌ ಉಪಸ್ಥಿತರಿದ್ದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post