ಜನರಿಗೆ ರಾಷ್ಟ್ರ ಚಿಂತನೆಯ ಉಪದೇಶ

ತೀರ್ಥಹಳ್ಳಿ ಬಿಜೆಪಿ ಕಚೇರಿಯಲ್ಲಿ ಬೆಳಿಗ್ಗಿನಿಂದ ಹಾರದ ರಾಷ್ಟ್ರಧ್ವಜ
ಸುದ್ದಿ ಭಯದಲ್ಲಿ ತಕ್ಷಣ ಎಚ್ಚೆತ್ತ ಮುಖಂಡ ಕಾಸರವಳ್ಳಿ ಶ್ರೀನಿವಾಸ್
ಬಿಇಓ ಕಚೇರಿಯಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ

ರಾಷ್ಟ್ರಾಧ್ಯಂತ ಸ್ವಾತಂತ್ರ್ಯದ 75ನೇ ವರ್ಷಾಚರಣೆ ಹಿನ್ನಲೆಯಲ್ಲಿ ಮೂರು ದಿನ ರಾಷ್ಟ್ರಧ್ವಜ ಹಾರಿಸಬೇಕೆಂಬ ಕುರಿತು ಹರ್‌ ಘರ್‌ ತಿರಂಗ ಅಭಿಯಾನ ಜೋರಾಗಿದೆ. ಈ ನಡುವೆ ಪಟ್ಟಣದ ಕೊಪ್ಪ ಸರ್ಕಲ್‌ನಲ್ಲಿರುವ ಬಿಜೆಪಿ ಪಕ್ಷದ ಕಚೇರಿಯಲ್ಲಿ ಶನಿವಾರ ರಾಷ್ಟ್ರಧ್ವಜ ಹಾರಿಸಿಲ್ಲ. ಮಧ್ಯಾಹ್ನ 12 ಗಂಟೆಯ ವರೆಗೂ ಕಚೇರಿಯಲ್ಲಿ  ರಾಷ್ಟ್ರಧ್ವಜ ಆರೋಹಣ ಮಾಡಿಲ್ಲ. ರಾಷ್ಟ್ರಧ್ವಜ ಹಾರಿಸುವಲ್ಲಿ ಅತಿ ಉತ್ಸಾಹ ತೋರಿಸುವ ಬಿಜೆಪಿ ಪಕ್ಷದ ಕಚೇರಿಯಲ್ಲಿ ತ್ರಿವರ್ಣ ಧ್ವಜಕ್ಕೆ ಆರೋಹಣಕ್ಕೆ ಕಾಲ ಕೂಡಿ ಬಾರದಿರುವುದು ಸಾರ್ವಜನಿಕವಾಗಿ ಹಾಸ್ಯಾಸ್ಪದದ ವಿಷಯದಂತಿದೆ.

ಸುದ್ದಿ ಭಯದಲ್ಲಿ ತಕ್ಷಣ ಎಚ್ಚೆತ್ತ ಮುಖಂಡ ಕಾಸರವಳ್ಳಿ ಶ್ರೀನಿವಾಸ್

ತೀರ್ಥಹಳ್ಳಿ ಬಿಜೆಪಿ ಕಚೇರಿಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸದ ಛಾಯಚಿತ್ರ ತೆಗೆಯುವ ಸಂದರ್ಭ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ಬಿಜೆಪಿ ಮುಖಂಡ ಕಾಸರವಳ್ಳಿ ಶ್ರೀನಿವಾಸ್‌ ನೆಲದ ಧ್ವನಿಗೆ ಎದುರಾಗಿದ್ದರು. ಈ ಸಂದರ್ಭ ಅವರು ಮಾತನಾಡಿ, ಮೂರು ದಿನದದಲ್ಲಿ ಯಾವಾಗ ಬೇಕಾದರೂ ರಾಷ್ಟ್ರಧ್ವಜ ಹಾರಿಸಬಹುದು. ಅದಕ್ಕೆ ಸಮಯದ ಮಿತಿ ಇಲ್ಲ ಎಂಬ ಸ್ಪಷ್ಟನೆ ನೀಡಿದರು. ಬಿಜೆಪಿ ಕಚೇರಿಯಲ್ಲಿ ರಾಷ್ಟ್ರಧ್ವಜ ಹಾರಿಸದ ಸಂಗತಿ ಸುದ್ದಿಯಾಗಿ ಪ್ರಕಟವಾಗುತ್ತದೆ ಎಂಬ ವಿಷಯ ಖಚಿತವಾಗುತ್ತಿದ್ದಂತೆ ಎಚ್ಚೆತ್ತ ಬಿಜೆಪಿ ಜಿಲ್ಲಾ ಎಸ್‌ಸಿ, ಎಸ್‌ಟಿ ಮೋರ್ಚಾ ಅಧ್ಯಕ್ಷ ಕಾಸರವಳ್ಳಿ ಶ್ರೀನಿವಾಸ್ ಬಿಜೆಪಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ದೇವಂಗಿಯ ಕಾರ್ಯಕ್ರಮವೊಂದರಲ್ಲಿ ನಿರತರಾಗಿದ್ದು ಅವರ ಅನುಪಸ್ಥಿತಿಯಲ್ಲಿ ರಾಷ್ಟ್ರಧ್ವಜವನ್ನು ತಕ್ಷಣ ಕಚೇರಿ ಮೇಲೆ ಹಾರಿಸಿ ರಾಷ್ಟ್ರಪ್ರೇಮ ಮೆರೆದಿದ್ದಾರೆ.

ರಾಷ್ಟ್ರಧ್ವಜ ನೀತಿ ಸಂಹಿತೆ ನಿಯಮಗಳನ್ನ ಉಲ್ಲಂಘಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಟ್ಟಡದಲ್ಲಿ ರಾಷ್ಟ್ರಧ್ವಜ ಹಾರಿಸಿದ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ. ಗೃಹಸಚಿವ ಆರಗ ಜ್ಞಾನೇಂದ್ರ ಸ್ವಕ್ಷೇತ್ರದಲ್ಲಿ ರಾಷ್ಟ್ರಧ್ವಜಕ್ಕೆ ಗೆಜೆಟೆಡ್‌ ಹುದ್ದೆಯ ಸ್ಥಾನಮಾನ ಹೊಂದಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಅವಮಾನಕಾರಿಯಾಗಿ ನಡವಳಿಕೆ ತೋರಿರುವುದು ಆಡಳಿತಕ್ಕೆ ಮುಜುಗರ ತಂದಿದೆ.

ಸ್ವಾತಂತ್ರ್ಯದ 75ನೇ ವರ್ಷದ ಆಚರಣೆ ಹಿನ್ನಲೆಯಲ್ಲಿ ಪ್ರತಿ ಮನೆ, ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರಧ್ವಜ ಹಾರಿಸಿ ಸಂಭ್ರಮದಲ್ಲಿ ಪಾಲ್ಗೊಳ್ಳಬೇಕೆಂಬ ಕಾರಣಕ್ಕೆ ಹರ್‌ ಘರ್‌ ತಿರಂಗ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ರಾಷ್ಟ್ರಧ್ವಜವನ್ನು ಕೇವಲ ಮೂರು ಅಡಿ ಎತ್ತರದಲ್ಲಿ ಹಾರಿಸಿ ಧ್ವಜಕ್ಕೆ ಅವಮಾನ ಮಾಡಲಾಗಿದೆ. ಈ ವಿಷಯ ಬಹಿರಂಗವಾಗುತ್ತಿದ್ದಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಮೌನಕ್ಕೆ ಜಾರಿದ್ದಾರೆ.

ಶಿಕ್ಷಣಾಧಿಕಾರಿ ಕಚೇರಿ ಕಟ್ಟಡ ನೂತನವಾಗಿ ನಿರ್ಮಾಣಗೊಂಡಿದ್ದು ಧ್ವಜಸ್ತಂಬ ಇಲ್ಲವಾಗಿದೆ. ಕಟ್ಟಡದ ಮೇಲ್ಛಾವಣಿಯ ಮೊಂಡು ಪಿಲ್ಲರ್ಗೆ ಮೂರಡಿ ಉದ್ದದ ಕೋಲು ಕಟ್ಟಿ ರಾಷ್ಟ್ರಧ್ವಜ ಹಾರಿಸಿರುವ ಬೇಜಾವಾಬ್ದಾರಿ ಈಗ ಸಾರ್ವಜನಿಕವಾಗಿ ಆಕ್ರೋಶಕ್ಕೆ ಗುರಿಯಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿ ವಿರುದ್ಧ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕೆಂಬ ಆಗ್ರಹ ಸಾರ್ವಜನಿಕವಾಗಿ ಕೇಳಿ ಬಂದಿದೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post