ಅಂಬುತೀರ್ಥ ಎ.ಎಸ್.ಪರಮೇಶ್ವರ ಭಟ್ಟರು ನಿಧನ

ಶಾಂತವೇರಿ ಗೋಪಾಲಗೌಡರ ನಿಕಟವರ್ತಿ
ಶಾಂತವೇರಿ ಗೋಪಾಲ ಗೌಡರ ನಿಕಟವರ್ತಿ ಅಂಬುತೀರ್ಥ  ಎ.ಎಸ್. ಪರಮೇಶ್ವರ ಭಟ್ಟರು (96) ಬುಧವಾರ ರಾತ್ರಿ 9:30ಕ್ಕೆ ತಮ್ಮ ಸ್ವಗೃಹದಲ್ಲಿ ನಿಧನರಾದರು.
ಇತ್ತೀಚಿನ ದಿನಗಳವರೆಗೂ ಆರೋಗ್ಯವಾಗಿದ್ದ ಪರಮೇಶ್ವರ ಭಟ್ಟರು ಅಲ್ಪಕಾಲದ ಅನಾರೋಗ್ಯ ತುತ್ತಾಗಿದ್ದರು. ಶಾಂತವೇರಿ ಗೋಪಾಲ ಗೌಡರೊಂದಿಗೆ ಹಲವಾರು ಚಳವಳಿಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು ಸರಳ ಜೀವನ ನಡೆಸಿದ್ದರು. ಅನೇಕ ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಭಟ್ಟರು ಒಬ್ಬ ಮಗ ಮತ್ತು ಐವರು ಹೆಣ್ಣು ಮಕ್ಕಳು, ಅನೇಕ ಮೊಮ್ಮಕ್ಕಳು ಮತ್ತು ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅಗಲಿದ್ದಾರೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post