ಕೃಷ್ಣ -ಛದ್ಮವೇಷದ ಸ್ಪರ್ಧೆಯಲ್ಲಿ ನಿರೀಕ್ಷೆಗೂ ಮೀರಿದ ಸ್ಪರ್ಧಿಗಳು

ಗಮನ ಸೆಳೆದ ಸೀಬಿನಕರೆ ಸ.ಹಿ.ಪ್ರಾ.ಶಾಲೆ
ವಿಶೇಷ ಆಸಕ್ತಿ ವಹಿಸಿ ಕಾರ್ಯಕ್ರಮದಲ್ಲಿ ಭಾಗಿಯಾದ ಆರಗ

ಶಾಲೆಗಳಲ್ಲಿ ಸಾಮರಸ್ಯದ ಭಾವನೆ ಮೂಡಲು ಉತ್ತಮವಾದ ಸಾಂಸ್ಕೃತಿಕ ವಾತಾವರಣ ಇರಬೇಕು. ಶಾಲೆಗಳು ಭವಿಷ್ಯದ ಮೆಟ್ಟಿಲುಗಳಾದ್ದರಿಂದ ಮಕ್ಕಳನ್ನು ನಮ್ಮ ದೇಶದ ಹೆಮ್ಮೆಯ ಸಂಸ್ಕೃತಿಯನ್ನು ಅರಿತುಕೊಳ್ಳುವ ನಿಟ್ಟಿನಲ್ಲಿ ಬೆಳೆಸಬೇಕು. ಸೀಬಿನಕೆರೆಯ ಸರ್ಕಾರಿ ಶಾಲೆ ಮಾದರಿ ಶಾಲೆಯಾಗಿ ರೂಪುಗೊಳ್ಳುತ್ತಿದೆ. ಇಲ್ಲಿನ ಶಾಲಾಭಿವೃದ್ದಿ ಸಮಿತಿ, ಶಿಕ್ಷಕರು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೃಷ್ಣ ವೇಷದ ಸ್ಪರ್ಧೆಯಲ್ಲಿ ನಿರೀಕ್ಷೆಗೂ ಮೀರಿದ ಪುಟಾಣಿಗಳು ಪಾಲ್ಗೊಂಡಿದ್ದಾರೆ. ವಿಶೇಷವೆಂದರೆ ಈ ಸ್ಪರ್ಧೆಯಲ್ಲಿ ಮುಸ್ಲಿಂ ಸಮುದಾಯದವರೂ ಕೂಡ ವಿಶೇಷ ಆಸಕ್ತಿವಹಿಸಿ ತಮ್ಮ ಮಕ್ಕಳನ್ನು ಸ್ಪರ್ಧೆಗೆ ಕಳಿಸಿರುವುದು ಮೆಚ್ಚಿಗೆ ಮೂಡಿಸಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು. ತಾಲ್ಲೂಕಿನ ಸೀಬಿನಕೆರೆ ಸರ್ಕಾರಿ ಹಿರಿಯ ಪ್ರಥಮಿಕ ಶಾಲೆಯಲ್ಲಿ ಅಂಗನವಾಡಿಯಿಂದ 7ನೇ ತರಗತಿವರೆಗಿನ ಮಕ್ಕಳಿಗೆ ಏರ್ಪಡಿಸಿದ್ದ ಛದ್ಮವೇಷ ಹಾಗೂ ಕೃಷ್ಣವೇಷದ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.

ಈ ಶಾಲೆಯ ಅಭಿವೃದ್ದಿಗಾಗಿ ಎಲ್ಲಾ ರೀತಿಯ ಪ್ರೋತ್ಸಾಹವನ್ನು ನೀಡಿದ್ದೇವೆ. ಅದನ್ನು ಶಾಲಾಭಿವೃದ್ದಿ ಮಂಡಳಿ ಮತ್ತು ಶಿಕ್ಷಕರು ಸದುಪಯೋಗ ಪಡಿಸಿಕೊಂಡಿರುವುದು ಮಾದರಿಯಾಗಿದೆ. ಎಲ್ಲಾ ಕಡೆ ಇದೇ ರೀತಿ ಸರ್ಕಾರಿ ಶಾಲೆ ಅಭಿವೃದ್ದಿ ಹೊಂದಿದಲ್ಲಿ ಬಡಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಲಿದೆ ಎಂದು ಹೇಳಿದರು.

ಶಾಲಾಭಿವೃದ್ದಿ ಸಮಿತಿಯ ನಾಗರಾಜ್‌ ಮತ್ತು ಮುಖ್ಯೋಪಾದ್ಯಾಯರ ನೇತೃತ್ವದಲ್ಲಿ ವಿಶೇಷ ಕಾಳಜಿ ವಹಿಸಿ ಈ ಸ್ಪರ್ಧೆಯನ್ನು ಏರ್ಪಾಡು ಮಾಡಲಾಗಿತ್ತು. ಬಹುತೇಕ ಎಲ್ಲಾ ಮಕ್ಕಳು ಈ ಸ್ಪರ್ಧೆಯಲ್ಲಿ ಉತ್ಸಾಹದಿಂದ ಭಾಗವಹಿಸಿದ್ದರು. ಅಂಗನವಾಡಿ ಎಲ್‌ಕೆಜಿ, ಯುಕೆಜಿ ಮಕ್ಕಳ ಅಚ್ಚುಕಟ್ಟಾದ ವೇಷಭೂಷಣ ಎಲ್ಲರ ಗಮನ ಸೆಳೆಯಿತು. ತೀರ್ಪುಗಾರರಾಗಿ ಪತ್ರಕರ್ತ ಮೋಹನ್‌ ಮುನ್ನೂರು ಮತ್ತು ಕಲಾವಿದ, ವಕೀಲ ಆಡಿನಸರ ಸತೀಶ್‌ ಭಾಗವಹಿಸಿದ್ದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post