ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೇಕೇರಿಗೆ ಸಮಗ್ರ ಪ್ರಶಸ್ತಿ

ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಅತ್ಯುತ್ತಮ ಸಾಧನೆ
ವಿದ್ಯಾರ್ಥಿಳಿಗೆ, ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿದ ಹಸಿರುಮನೆ ನಂದನ್‌

ತೀರ್ಥಹಳ್ಳಿ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೇಕೇರಿ ವಿದ್ಯಾರ್ಥಿಗಳಿಗೆ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಹಸಿರುಮನೆ ನಂದನ್ ಅಭಿನಂದನೆ ಸಲ್ಲಿಸಿದ್ದಾರೆ.

ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ, ಬಾಲಕಿಯರ ಕ್ರೀಡಾಕೂಟದಲ್ಲಿ ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೇಕೇರಿ ಅಥ್ಲೆಟಿಕ್ಸ್ ಸಮಗ್ರ ಚಾಂಪಿಯನ್ಶಿಪ್ ,  ತಾಲೂಕು ಬಾಲಕಿಯರ ಅಥ್ಲೆಟಿಕ್ ಸಮಗ್ರ ಪ್ರಶಸ್ತಿ ಮತ್ತು ತಾಲೂಕು ಮಟ್ಟದ ವೈಯಕ್ತಿಕ ಚಾಂಪಿಯನ್ಸ್ ಬಂದಿರುತ್ತದೆ.


ವೈಯಕ್ತಿಕ ಚಾಂಪಿಯನ್ ಪಡೆದುಕೊಂಡ ಸಹ 1500ಮೀ X 800ಮೀ  ಹಾಗೂ 200ಮೀ ರನ್ನಿಂಗ್ನಲ್ಲಿ, ತಾಲೂಕು ಚಾಂಪಿಯನ್ ಆದ  ನಿತ್ಯ ಟಿ.ಸಿ. ಹಾಗೂ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಬಾಲಕಿಯರ 4X100  ರಿಲೇ ತಂಡಕ್ಕೂ ಮತ್ತು ಸಾಧನೆಗೆ ಕಾರಣರಾದ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ದೈಹಿಕ ಶಿಕ್ಷಕರು, ಪೋಷಕರಿಗೆ ಹಸಿರುಮನೆ ನಂದನ್ ಅಭಿನಂದಿಸಿದ್ದಾರೆ.





ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post