ಕುಡುಮಲ್ಲಿಗೆ ಶಾಲೆ ವಿದ್ಯಾರ್ಥಿಗಳ ಸಾಧನೆ

ಬಾಲಕ-ಬಾಲಕಿಯರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

2022-23ನೇ ಸಾಲಿನಲ್ಲಿ ತೀರ್ಥಹಳ್ಳಿಯಲ್ಲಿ ನಡೆದ ಬಾಲಕ-ಬಾಲಕಿಯರ ತಾಲ್ಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಕುಡುಮಲ್ಲಿಗೆ ಸರ್ಕಾರಿ ಪ್ರೌಢಶಾಲೆಯ ಬಾಲಕ ಬಾಲಕಿಯರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದಿರುತ್ತಾರೆ.

100 ಮೀಟರ್‌ ಓಟದಲ್ಲಿ ಸಾಕ್ಷಿ ಪ್ರಥಮ, ನಡಿಗೆ ಸ್ಪರ್ಧೆಯಲ್ಲಿ ಶ್ರಾವ್ಯ ಪ್ರಥಮ, 800 ಮೀಟರ್‌ ಓಟ ರಿಹಾನ್‌ ಪ್ರಥಮ, 3000 ಮೀಟರ್‌ ಓಟ ಜಾಸಿಲ್‌ ಪ್ರಥಮ, 5 ಕಿ.ಮೀ. ನಡಿಗೆ ಸ್ಪರ್ಧೆಯಲ್ಲಿ ಆದಿತ್ಯ ಪ್ರಥಮ 4x100 ಮೀಟರ್‌ ರಿಲೇಯಲ್ಲಿ ಸೃಜನ್‌, ರೋಹಿತ್‌, ಮಾಲತೇಶ್‌, ರಿಹಾನ್‌ ಇವರು ಭಾಗವಹಿಸಿ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಜಿಲ್ಲಾ ಮಟಕ್ಕೆ ಆಯ್ಕೆಯಾದ ಈ ಎಲ್ಲಾ ವಿದ್ಯಾರ್ಥಿಗಳನ್ನು ಮುಖ್ಯೋಪಾಧ್ಯಾಯರು, ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಸದಸ್ಯರು, ದೈಹಿಕ ಶಿಕ್ಷಕರು ಹಾಗೂ ಎಲ್ಲಾ ಶಿಕ್ಷಕರೂ, ಗ್ರಾಮಸ್ಥರು, ಪೋಷಕ ವರ್ಗದವರು ಅಭಿನಂದಿಸಿರುತ್ತಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post