ಭೂತಾನ್ ದೇಶದಿಂದ ಅಡಕೆ ಆಮದು

ಕೇಂದ್ರ ಸರ್ಕಾರದ ಜೊತೆಗೆ ಸತತ ಸಂಪರ್ಕ
ಆತಂಕ ಬೇಡ: ಗೃಹ ಸಚಿವ ಆರಗ ಜ್ಞಾನೇಂದ್ರ

ನೆರೆಯ ಪುಟ್ಟ ದೇಶ ಭೂತಾನ್ ನಿಂದ 17 ಸಾವಿರ ಟನ್ ಹಸಿ ಅಡಕೆ ಆಮದು ಮಾಡಿಕೊಳ್ಳಲು ಅವಕಾಶ ನೀಡಿದ ಕೇಂದ್ರದ ನಿರ್ಧಾರದಿಂದ, ದೇಶಿಯ ಅಡಕೆ ಮಾರುಕಟ್ಟೆ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಚಿವರು, ಪ್ರಸ್ತುತ ನಮ್ಮ ದೇಶದಿಂದ ಭೂತಾನ್ ದೇಶಕ್ಕೆ, ಸಂಸ್ಕರಿತ ಅಡಕೆ ಉತ್ಪನ್ನಗಳು, ಆಮದು ಪ್ರಮಾಣಕ್ಕಿಂತ ಹೆಚ್ಚು ರಫ್ತು ಆಗುತ್ತಿದ್ದು, ಭೂತಾನ್‌ನಿಂದ ಕೇವಲ ಹಸಿ ಅಡಕೆಗೆ ಮಾತ್ರ ಅನುಮತಿ ನೀಡಲಾಗಿದೆ ಎಂದರು.

ನೆರೆಯ ಭೂತಾನ್ ದೇಶವು, ಭಾರತದ ಪರಂಪರಾಗತ ಮಿತ್ರ ದೇಶವಾಗಿದ್ದು, ಉಭಯ ದೇಶಗಳ ನಡುವೆ ಉತ್ತಮ ವಾಣಿಜ್ಯ ವಹಿವಾಟು ನಡೆಸಲಾಗುತ್ತಿದೆ ಎಂದಿದ್ದಾರೆ.

ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆಗಿರುವ ಸಚಿವರು, ಅಡಿಕೆ ಮಾರುಕಟ್ಟೆಯಲ್ಲಿ, ಸ್ಥಿರತೆಯನ್ನು ಕಾಯ್ದುಕೊಳ್ಳಲು, ಕೇಂದ್ರ ಸರ್ಕಾರದ ಜೊತೆಗೆ ಸತತ ಸಂಪರ್ಕದಲ್ಲಿದ್ದೇನೆ. ಭೂತಾನ್ ಅಡಕೆ ಆಮದು ವಿಚಾರವಾಗಿಯೂ ಮಾತುಕತೆ ನಡೆಸಲಾಗುತ್ತಿದೆ.  ಬೆಳೆಗಾರರಿಗೆ, ಯಾವುದೇ ಗೊಂದಲ ಆತಂಕ ಬೇಡ, ಎಂದು ಸಚಿವರು ಅಭಯ ನೀಡಿದ್ದಾರೆ.

ಈ ವಿಚಾರ ಕುರಿತು, ಕೇಂದ್ರಕ್ಕೆ ಮನವರಿಕೆ ಮಾಡಿಕೊಡಲು, ಲೋಕಸಭಾ ಸದಸ್ಯರ ನೇತೃತ್ವದಲ್ಲಿ, ನಿಯೋಗವೊಂದನ್ನು ಕೊಂಡೊಯ್ಯಲಾಗುವುದು ಎಂದೂ ಸಚಿವರು ಹೇಳಿದರು.



ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post