ಮಾತೃ ವಾತ್ಸಲ್ಯ ಸೇವಾ ಸಂಸ್ಥೆ ಉದ್ಘಾಟನೆ

ಸಾವಿರಾರು ಮಕ್ಕಳ ಬದುಕಿಗೆ ನೆರವು
ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಅಭಿವೃದ್ದಿಗೆ ಸಹಕಾರ

ಜಿಲ್ಲಾಧಿಕಾರಿ ನೇತೃತ್ವದಲ್ಲಿ ತಕ್ಷಣ ಅಭಿವೃದ್ದಿ-ಆರಗ ಭರವಸೆ

ವಿಶೇಷ ಚೇತನ ಸಂಸ್ಥೆಗಳಿಗೆ ಸಹಕಾರ ಮಾಡದಿದ್ದರೆ ನಮ್ಮನ್ನು ಮನುಷ್ಯರು ಎಂದು ಹೇಳಲು ಸಾಧ್ಯವಿಲ್ಲ. ಈ ಶಾಲೆಗೆ ನನ್ನ ಸಂಪೂರ್ಣ ಸಹಕಾರ ನೀಡುತ್ತೇನೆ. ಜಿಲ್ಲಾಧಿಕಾರಿ ಇಲ್ಲಿಗೆ ಕರೆಸಿ ತಕ್ಷಣವೇ ಇಲ್ಲಿನ ಅಭಿವೃದ್ಧಿ ಕೆಲಸದ ಬಗ್ಗೆ ಸಂಸ್ಥೆಯೊಂದಿಗೆ ಚರ್ಚಿಸುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ವಿಕಲಚೇತನ ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸೊಪ್ಪುಗುಡ್ಡೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗಾಗಿ ಹುಟ್ಟಿಕೊಂಡಿರುವ ಮಾತೃ ವಾತ್ಸಲ್ಯ ಸೇವಾ ಸಂಸ್ಥೆ ಉದ್ಘಾಟಿಸಿ ಮಾತನಾಡಿದರು.

ಸೊಪ್ಪುಗುಡ್ಡೆ ರಾಘವೇಂದ್ರ ಮಾತನಾಡಿ ಶಾಲೆಯ ಮೇಲಿನ ಅಭಿಮಾನವನ್ನು ಶ್ಲಾಘಿಸಿದರು. ನಂತರ ರಾಷ್ಟ್ರ ಪ್ರಶಸ್ತಿ ವಿಜೇತರಾದ ಕುಮಾರ್ ಹೆಚ್.ಸಿ. ಮತ್ತು ಸಿಬ್ಬಂದಿ ವರ್ಗದವರ ಸೇವೆಯನ್ನು ಪ್ರಶಂಸಿದರು.

ಶಿಕ್ಷಕ ಕುಮಾರ್ ಅವರು ಮಾತನಾಡಿ, ಶಾಲೆಯಲ್ಲಿ ನಡೆಯುತ್ತಿರುವ ವಿಶೇಷ ಅಗತ್ಯವುಳ್ಳ ಮಕ್ಕಳ ಕಾರ್ಯವೈರಿಯ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು. ಹಾಗೂ ಇಂತಹ ಮಕ್ಕಳ ಪೋಷಕರು ಅನುಭವಿಸುತ್ತಿರುವ ನೋವು ಸಂಕಟದ ಬಗ್ಗೆ ತಿಳಿಸಿದಾಗ ಎಲ್ಲ ಕಣ್ಣಾಲಿಗಳು ತುಂಬಿ ಬಂದವು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಎಂಸಿ ಅಧ್ಯಕ್ಷೆ ಅಮೃತ ಜಿ ವಹಿಸಿದ್ದರು. ಮಾತೃ ವಾತ್ಸಲ್ಯ ಅಧ್ಯಕ್ಷರಾದ ಮೀನಾಕ್ಷಿ ತಮ್ಮ ಸಂಸ್ಥೆಗೆ ಜಾಗದ ಕೊರತೆ ಇರುವುದರಿಂದ ಜಾಗ ಕೊಡಿಸಿಕೊಡಬೇಕಾಗಿ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು. ಶಾಲಾ ಶಿಕ್ಷಕರಾದ ಶಿವಪುತ್ರ, ಗಾಯತ್ರಿ ಟಿ.ಜಿ. ಟೀಕಪ್ಪ, ಪೋಷಕರು, ಮಕ್ಕಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಮೀನಾಕ್ಷಿ, ಅಮೃತ ಜಿ, ಪದ್ಮಾವತಿ ಇದ್ದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post