ಎಲೆಚುಕ್ಕೆ ರೋಗ ಭಾದೆಗೆ ಉಚಿತ ಔಷಧಿ ಪೂರೈಕೆ

ಮಲೆನಾಡ ರೈತರ ಆತಂಕ ದೂರಕ್ಕೆ ಕ್ರಮ
ಆರ್ಥಿಕ ಸಹಾಯದಕ್ಕೆ ಬೇಡಿಕೆ ಸಲ್ಲಿಸಿದ ಆರಗ
ಆರಗ ಜ್ಞಾನೇಂದ್ರರಿಂದ ರೋಗ ನಿಯಂತ್ರಣಕ್ಕೆ ಸೂಚನೆ
ಅಧಿಕಾರಿಗಳಿಗೆ ನಿರ್ದೇಶಿಸಿದ ತೋಟಗಾರಿಕಾ ಸಚಿವ ಮುನಿರತ್ನ

ಮಲೆನಾಡಿನ ಕೆಲವು ಭಾಗಗಳಲ್ಲಿ ಅಡಿಕೆಗೆ ಎಲೆ ಚುಕ್ಕೆ ರೋಗ ಭಾಧೆ ಕಾಣಿಸಿಕೊಂಡಿದ್ದು, ರೈತ ಸಮುದಾಯದಲ್ಲಿ ಆತಂಕದ ಛಾಯೆ ಮೂಡಿದೆ.

ಹಿನ್ನೆಲೆಯಲ್ಲಿ ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ತೋಟಗಾರಿಕಾ ಸಚಿವ ಮುನಿರತ್ನ ಜಂಟಿಯಾಗಿ ತೋಟಗಾರಿಕಾ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ರೋಗ ನಿಯಂತ್ರಣದ ಬಗ್ಗೆ ವಿಸ್ತಾರವಾಗಿ ಚರ್ಚಿಸಿದರು.

ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ರೋಗ ಬಾಧೆಯಿಂದ ಹಾನಿ ಅನುಭವಿಸಿದ ರೈತರಿಗೆ, ಆರ್ಥಿಕ ಪರಿಹಾರ ಒದಗಿಸುವುದು, ಎಲೆಚುಕ್ಕೆ ರೋಗ ಹತೋಟಿಗೆ ತರುವ ಬಗ್ಗೆ, ರೈತರಿಗೆ ಉಚಿತವಾಗಿ ಔಷಧಿ ಹಾಗೂ ಸುಧಾರಿತ ದೋಟಿ ಒದಗಿಸುವ ಬಗ್ಗೆ ಚರ್ಚಿಸಲಾಯಿತು. ನಂತರ ತೋಟಗಾರಿಕೆ ಸಚಿವ ಮುನಿರತ್ನ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಎಷ್ಟು ಪ್ರಮಾಣದಲ್ಲಿ ಅಡಕೆ ಬೆಳೆ ಎಲೆಚುಕ್ಕೆ ರೋಗದಿಂದಾಗಿ ಹಾನಿಯಾಗಿದೆ ಎಂಬುದರ ಬಗ್ಗೆ ಸಮೀಕ್ಷಾ ಕಾರ್ಯ ನಡೆಸುವ ಬಗ್ಗೆಯೂ ನಿರ್ಧರಿಸಲಾಯಿತು.

ಎಲೆಚುಕ್ಕೆ ರೋಗ ಬಾಧೆಯ ತೀವ್ರತೆಯ ಬಗ್ಗೆ  ಪ್ರಸ್ತಾಪಿಸಿದ ಗೃಹ ಸಚಿವರು, ತಕ್ಷಣವೇ ರೋಗವನ್ನು ಹತೋಟಿಗೆ ತರಲು ಅನುಕೂಲವಾಗುವಂತೆ, ರೈತರಿಗೆ ಉಚಿತವಾಗಿ ಔಷಧಿ ಹಾಗೂ ಇತರ ಸಹಾಯವನ್ನು ಸರಕಾರದಿಂದ ನೀಡಬೇಕು ಎಂದು ತಿಳಿಸಿದ್ದಾರೆ.

ಬಂದರು ಹಾಗೂ ಮೀನುಗಾರಿಕಾ ಸಚಿವ ಅಂಗಾರ, ತೋಟಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯ, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post