ಕಾಂಗ್ರೆಸ್‌ ಸಂಘಟನೆಗೆ ಬಲವರ್ಧನೆ

ಗ್ರಾಮಾಂತರ ಬ್ಲಾಕ್‌ ಅಧ್ಯಕ್ಷರ ನೇತೃತ್ವದಲ್ಲಿ ಸಭೆ
1000ಕ್ಕೂ ಮಿಕ್ಕಿದ ಕಾರ್ಯಕರ್ತರ ಪಡೆ
ಭಾರತ್‌ ಜೋಡೋ ಯಾತ್ರೆಗೆ ಜನರ ಉತ್ಸಾಹ
ತೀರ್ಥಹಳ್ಳಿಯಲ್ಲಿ ಕಿಕ್ಕಿರಿದ ಜನಸ್ತೋಮ
ಕಿಮ್ಮನೆ, ಆರ್‌ಎಂಎಂ ಗಪ್ ಚುಪ್

ಬುಧವಾರ ತೀರ್ಥಹಳ್ಳಿಯ ಕೆಟಿಕೆ ಸಭಾಂಗಣದಲ್ಲಿ ಭಾರತ್‌ ಜೋಡೊ ಯಾತ್ರೆಯ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಎಐಸಿಸಿ ಕಾರ್ಯದರ್ಶಿ ಮಯೂರ್ ಜೈಕುಮಾರ್, ಕೆಪಿಸಿಸಿ ವೀಕ್ಷಕ ಶ್ರೀನಿವಾಸ್ ಹಾಜರಿದ್ದರು. ಈ ಹಿಂದೆ ಬದ್ಧ ವೈರಿಗಳಂತೆ ಕಿತ್ತಾಡುತ್ತಿದ್ದ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್‌, ಮಾಜಿ ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ. ಮಂಜುನಾಥ ಗೌಡ ಪರಸ್ಪರರ ಮೇಲೆ ಆರೋಪ ಮಾಡದೆ ಗಪ್‌ ಚುಪ್‌ ನೀತಿ ಅನುಸರಿಸಿದ್ದರು. ಇಬ್ಬರ ಮೌನ ಕಾರ್ಯಕರ್ತರಲ್ಲಿ ಹುಮ್ಮಸ್ಸು ಹೆಚ್ಚಿಸಿದ್ದು ಎರಡು ಬಣಗಳಲ್ಲಿ ಗುರುತಿಸಿಕೊಂಡವರು ಹಾಗೂ ಮೂಲ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಆಶಾ ಭಾವನೆ ಹೆಚ್ಚಿಸಿದೆ. ಇಬ್ಬರು ನಾಯಕರು ಒಟ್ಟಿಗೆ ಚುನಾವಣೆ ನಡೆಸಿದರೆ ಪಕ್ಷದ ಪರವಾದ ಮತ ಹೆಚ್ಚಾಗುವ ನಿರೀಕ್ಷೆ ಮೂಡಿಸಿದೆ.

ತೀರ್ಥಹಳ್ಳಿ ತಾಲ್ಲೂಕಿನಾಧ್ಯಂತ ಕಾಂಗ್ರೆಸ್‌ನಲ್ಲಿ ಉತ್ಸಾಹ ಮನೆ ಮಾಡಿದಂತಿದೆ. ರಾಹುಲ್‌ ಗಾಂಧಿ ಹಮ್ಮಿಕೊಂಡಿರುವ 3000 ಕಿಲೋ ಮೀಟರ್‌ ಬೃಹತ್‌ ಪಾದಯಾತ್ರೆ ಬಾರೀ ಸದ್ದು ಮಾಡುತ್ತಿದ್ದು ತಾಲ್ಲೂಕಿನಲ್ಲೂ ಹವಾ ಸೃಷ್ಟಿಸಿದಂತಿದೆ. ಕರ್ನಾಟಕದಲ್ಲಿ ಅಕ್ಟೋಬರ್‌ 30 ರಿಂದ ಆರಂಭಗೊಳ್ಳುತ್ತಿರುವ ಭಾರತ್‌ ಜೋಡೊ ಯಾತ್ರೆಯ ಹಿನ್ನಲೆಯಲ್ಲಿ ತಾಲ್ಲೂಕಿನಾದ್ಯಂತ ವಿವಿಧ ಸಭೆ ನಡೆಯುತ್ತಿದೆ. ಹುಂಚ, ನಗರ, ಅಗ್ರಹಾರ, ಮಂಡಗದ್ದೆ, ನಿಧಿಗೆ ಹೋಬಳಿ ಮಟ್ಟದ ಸಮಾವೇಶ ಮಂಗಳವಾರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮುಡುಬ ರಾಘವೇಂದ್ರ ಅಧ್ಯಕ್ಷತೆಯಲ್ಲಿ ಕೋಣಂದೂರಿನಲ್ಲಿ ನಡೆದಿದ್ದು ಭಾರೀ ಸಂಖ್ಯೆಯಲ್ಲಿ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದು ಸಂಘಟನೆ ಬಲವರ್ಧನೆಗೊಳ್ಳುವತ್ತ ದಾಪುಗಾಲು ಇರಿಸಿದಂತಿದೆ.

ತೀರ್ಥಹಳ್ಳಿಯಲ್ಲೂ ಸುಮಾರು 1000ಕ್ಕೂ ಹೆಚ್ಚು ಕಾರ್ಯಕರ್ತರು ಉತ್ಸಾಹದಿಂದ ಭಾಗವಹಿಸಿದ್ದು ಪಾದಯಾತ್ರೆಗೆ ಸೇರಿಕೊಳ್ಳುವ ಸಲುವಾಗಿ ವಿವಿಧ ಸಲಹೆಗಳನ್ನು ನೀಡಿದ್ದಾರೆ. ಅಂತಹ ಸಲಹೆಗಳನ್ನು ಪಕ್ಷ ಸ್ವೀಕರಿಸಿ ಮುನ್ನುಗಲಿದೆ ಎಂಬ ವಿಶ್ವಾಸವನ್ನು ಸಭೆಯಲ್ಲಿ ಭಾಗವಹಿಸಿದ ಕಾರ್ಯಕರ್ತರು ವ್ಯಕ್ತಪಡಿಸುತ್ತಿದ್ದಾರೆ. ಈ ಸಭೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿಫಲತೆಯ ಕುರಿತಂತೆ ಬಾರೀ ಚರ್ಚೆಗಳು ನಡೆದಿದೆ. ಇದೊಂದು ಮುಂದಿನ ಚುನಾವಣೆಯ ರಣತಂತ್ರವಾಗಿಯೂ ಕಾರ್ಯನಿರ್ವಹಣೆ ಮಾಡುವ ಒಮ್ಮತದ ಅಭಿಪ್ರಾಯಗಳು ಮೂಡಿಬಂತು.

ಸಭೆಯಲ್ಲಿ ಯುವಕರನ್ನು ಸೆಳೆಯುವ ತಂತ್ರವನ್ನು ಎಐಸಿಸಿ ಕಾರ್ಯದರ್ಶಿ ಮಯೂರ್ ಜೈಕುಮಾರ್, ಕೆಪಿಸಿಸಿ ವೀಕ್ಷಕ ಶ್ರೀನಿವಾಸ್ ಅನುಸರಿಸಿದರು. ಪಕ್ಷದಲ್ಲಿ ಉನ್ನತ ಹುದ್ದೆ ಅಲಂಕರಿಸಿದವರಿಗೆ ವೇದಿಕೆಯಲ್ಲಿ ಮಣೆ ಹಾಕಲಾಗಿದೆ. ಕೋಣಂದೂರಿನಲ್ಲಿ ನಡೆದ ಕೆಪಿಸಿಸಿ ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ಆಗಿರುವ ಕಲಗೋಡು ರತ್ನಾಕರ್‌, ಎನ್‌ಇಎಸ್‌ ಅಧ್ಯಕ್ಷ ಜಿ.ಎಸ್.‌ ನಾರಾಯಣ ರಾವ್‌, ರಾಷ್ಟ್ರೀಯ ಯುವ ಕಾಂಗ್ರೆಸ್‌ ವಕ್ತಾರರಾದ ಆದರ್ಶ ಹುಂಚದಕಟ್ಟೆ ಅವರನ್ನು ಗುರುತಿಸಿ ಸನ್ಮಾನಿಸಲಾಗಿದೆ.

ಸಭೆಯಲ್ಲಿ ಜಿಲ್ಲಾಧ್ಯಕ್ಷ ಹೆಚ್.ಎಸ್. ಸುಂದರೇಶ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್, ಬ್ಲಾಕ್ ಅಧ್ಯಕ್ಷ ಕೆಸ್ತೂರು ಮಂಜುನಾಥ್, ರಾಷ್ಟ್ರೀಯ ಯುವ ಕಾಂಗ್ರೆಸ್ ವಕ್ತಾರ ಆದರ್ಶ ಹುಂಚದಕಟ್ಟೆ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಮರನಾಥ ಶೆಟ್ಟಿ, ಪುಟ್ಟೋಡ್ಲು ರಾಘವೇಂದ್ರ, ಟೌನ್ ಪಂಚಾಯತ್ ಉಪಾಧ್ಯಕ್ಷ ಜಯಪ್ರಕಾಶ ಶೆಟ್ಟಿ, ಮುಖಂಡರಾದ ಅಮ್ರಪಾಲಿ ಸುರೇಶ್, ಬಾಳೆಹಳ್ಳಿ ಪ್ರಭಾಕರ್, ಬಂಡೆ ವೆಂಕಟೇಶ್, ಓಬಿಸಿ ಘಟಕದ ಬ್ಲಾಕ್ ಅಧ್ಯಕ್ಷ ಉದಯಕುಮಾರ್, ಜನಗಲ್ ರಾಮಚಂದ್ರ ಪಕ್ಷದ ಮಂಚೂಣಿ ನಾಯಕರು ಇದ್ದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post