ತಾಲ್ಲೂಕು ಕಸಾಪ ಚಟುವಟಿಕೆಗಳ ಪರಿಶೀಲನೆ

ಮಾರ್ಗದರ್ಶನ ನೀಡಿದ ಜಿಲ್ಲಾ ಕಸಾಪ ಅಧ್ಯಕ್ಷ ಡಿ.ಮಂಜುನಾಥ್

ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಹಾಗೂ ಕರ್ನಾಟಕ ಜಾನಪದ ಪರಿಷತ್ ಜಿಲ್ಲಾಧ್ಯಕ್ಷರಾದ ಡಿ.ಮಂಜುನಾಥ್ ಅಕ್ಟೋಬರ್‌ 19 ರಂದು ತೀರ್ಥಹಳ್ಳಿಗೆ ಆಗಮಿಸಿ ಮೂರೂ ತಾಲೂಕು ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರ ಜೊತೆ ಸಭೆ ನಡೆಸಿದರು. ತಾಲೂಕು ಸಂಘಟನೆಗಳು ಈತನಕ ನಡೆಸಿರುವ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಿ ಮುಂದೆ ಕೈಗೊಳ್ಳಬಹುದಾದ ಕಾರ್ಯ ಚಟುವಟಿಕೆಗಳ ಕುರಿತು ವಿವರವಾಗಿ ಚರ್ಚಿಸಿದರು.

ಸಭಾ ನಡಾವಳಿಗಳನ್ನು ದಾಖಲಿಸಿರುವುದು, ಲೆಕ್ಕಪತ್ರ ಎಲ್ಲವನ್ನೂ ಪರಿಶೀಲಿಸಿದ ಮಂಜುನಾಥ್,  ಮೇಲಿನ ಮೂರೂ ಸಂಘಟನೆಗಳ ಹೋಬಳಿ ಘಟಕಗಳ ರಚನೆ, ದತ್ತಿ ಕಾರ್ಯಕ್ರಮಗಳನ್ನು ಆಯೋಜನೆ ಮುಂತಾದ ವಿಷಯಗಳ ಕುರಿತು ಮಾರ್ಗದರ್ಶನ ಮಾಡಿದರು. ಮಂಜುನಾಥ್ ಅವರು ಕಳೆದ ಒಂದು ವಾರದಿಂದ ಎಲ್ಲಾ ತಾಲೂಕುಗಳಿಗೆ ಭೇಟಿ ನೀಡಿ ಸಂಘಟನೆಗಳ ಸದಸ್ಯರ ಜೊತೆ ಸಭೆ ನಡೆಸುತ್ತಿದ್ದಾರೆ.

ಸಭೆಯಲ್ಲಿ ತಾಲೂಕು ಕಸಾಪ ಕೋಶಾಧ್ಯಕ್ಷ ಹಾಲಿಗೆ ನಾಗರಾಜ್,  ಕಾರ್ಯದರ್ಶಿಗಳಾದ ಗಾಯತ್ರಿ ಶೇಷಗಿರಿ, ಸೌಳಿ ನಾಗರಾಜ್, ಹಿರಿಯ ಸದಸ್ಯೆ ಪ್ರಭಾವತಿ ಶಾಮಣ್ಣ, ತಾಲೂಕು ಜಾನಪದ ಪರಿಷತ್ತು ಅಧ್ಯಕ್ಷ ಶಿರುಪತಿ ಮಂಜುನಾಥ್, ಕಾರ್ಯದರ್ಶಿ ಲೀಲಾ ಜಯಶೀಲಾ, ತಾಲೂಕು ಸಾ.ಸಾಂ.ವೇ.ನ ಕಾರ್ಯದರ್ಶಿ ನಿಶ್ಚಲ್ ಜಾದೂಗಾರ್, ಕೋಣಂದೂರು ಹೋಬಳಿ ಕಸಾಪ ಘಟಕದ ಅಧ್ಯಕ್ಷ ಶ್ರೀಪತಿ ಹಳಗುಂದ, ಕೋಣಂದೂರು ಹೋಬಳಿ ಜಾನಪದ ಪರಿಷತ್ತು ಅಧ್ಯಕ್ಷ ಕೆ.ಎಂ. ಸುಧಾಕರ್, ಕೋಣಂದೂರು ಹೋಬಳಿ ಕನ್ನಡ  ಸಾಹಿತ್ಯ ಮತ್ತು  ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಕೋಳಿಗೆ ಪ್ರಕಾಶ್, ಕೋಣಂದೂರು ಶಿವಪ್ಪ, ಜಿಲ್ಲಾ ಕಸಾಪ ಕೋಶಾಧ್ಯಕ್ಷ ನವೀನ್ ಕುಮಾರ್, ಜಿಲ್ಲಾ ಕಸಾಪದ ತಿಮ್ಮಪ್ಪ, ಮಂಜಪ್ಪ,‌ ಶರ್ಮಿಳಾ ಮಂಜುನಾಥ್, ಲತಾ ರಾಜಕುಮಾರ್, ಟಿ.ಜಿ.ಸೋಮಶೇಖರ್ ಮುಂತಾದವರು ಭಾಗವಹಿಸಿದ್ದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post