ಟಿಪ್ಪು ಎಕ್ಸ್‌ ಪ್ರೆಸ್‌ ಗೆ ಒಡೆಯರ್‌ ಎಂದು ಮರುನಾಮಕರಣ

ಕುವೆಂಪು ಹೆಸರಿನಲ್ಲಿ ಮೈಸೂರು-ತಾಳಗುಪ್ಪ ರೈಲು
ಆದೇಶ ಹೊರಡಿಸಿದ ರೈಲ್ವೆ ಮಂಡಳಿಯ ಉಪ ನಿರ್ದೇಶಕ ರಾಜೇಶ್ ಕುಮಾರ್

ಮೈಸೂರು-ತಾಳಗುಪ್ಪ ಎಕ್ಸ್‌ ಪ್ರೆಸ್‌ ರೈಲಿ‌ನ ಹೆಸರು ಇನ್ನು ಮುಂದೆ ಕುವೆಂಪು ಎಕ್ಸ್‌ಪ್ರೆಸ್‌ ಆಗಲಿದೆ. ಇದೇ ಮೊದಲ ಬಾರಿಗೆ ಕುವೆಂಪು ಹೆಸರನ್ನು ರೈಲಿಗೆ ಇಡಲಾಗಿದೆ.ಇದೇ ವೇಳೆ ಬೆಂಗಳೂರು ಮತ್ತು ಮಂಗಳೂರು ನಡುವೆ ಸಂಚರಿಸುವ ಟಿಪ್ಪು ಎಕ್ಸ್‌ ಪ್ರೆಸ್‌ ರೈಲಿಗೆ ಒಡೆಯರ್‌ ಎಕ್ಸ್‌ ಪ್ರೆಸ್‌ ಎಂದು ರೈಲ್ವೆ ಇಲಾಖೆ ಮರುನಾಮಕರಣ ಮಾಡಿದೆ.ಮೈಸೂರು ಮತ್ತು ಕೊಡಗು ಸಂಸದ ಪ್ರತಾಪ್‌ ಸಿಂಹ ಕೇಂದ್ರ ರೈಲ್ವೆ ಸಚಿವರಿಗೆ ಮಾಡಿದ ಮನವಿ ಹಿನ್ನೆಲೆಯಲ್ಲಿ ಟಿಪ್ಪು ಎಕ್ಸ್‌ ಪ್ರೆಸ್‌ ಹೆಸರು ಬದಲಾಯಿಸಲಾಗಿದೆ.ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಜುಲೈ 25ರಂದು ಸಂಸದ ಪ್ರತಾಪ್ ಸಿಂಹ ಪತ್ರ ಬರೆದಿದ್ದರು. ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್  ಮನವಿಗೆ ಸ್ಪಂದಿಸಿದ್ದರು.
ಕುವೆಂಪು ಹೆಸರು ಸೇರಿಸಿ ಟಿಪ್ಪು ಹೆಸರು ಕೈಬಿಟ್ಟಿರುವುದು ವಿರೋಧ ಪಕ್ಷಗಳಿಗೆ ನುಂಗಲಾರದ ತುತ್ತಾಗಿದೆ. ರಾಷ್ಟ್ರಕವಿ ಕುವೆಂಪು ಹೆಸರನ್ನು ಸೇರ್ಪಡೆ ಮಾಡಲಾಗಿದ್ದರೆ, ಇನ್ನೊಂದು ಕಡೆಯಲ್ಲಿ ಓರ್ವ ಮಹಾನ್ ಕ್ರಾಂತಿಕಾರಿ, ಸಮಾಜ ಸುಧಾರಣೆಯ ಹರಿಕಾರ, ಬ್ರಿಟೀಷರಿಗೆ ಸಿಂಹಸ್ವಪ್ನವಾಗಿ‌ ಕಾಡಿದ್ದ ಟಿಪ್ಪು ಸುಲ್ತಾನ್ ಹೆಸರು ಬಿಟ್ಟಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post