ನವೆಂಬರ್‌ 30: ತೂದೂರು ಗ್ರಾ.ಪಂ.ನಲ್ಲಿ ವೈಭವದ ಕನ್ನಡ ರಾಜ್ಯೋತ್ಸವ

ʼಕುವೆಂಪು ಸಭಾಂಗಣʼ ಮತ್ತು ಎಸ್‌. ಬಂಗಾರಪ್ಪ ವೇದಿಕೆ ಲೋಕಾರ್ಪಣೆ
ಸರ್ವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ ಅಧ್ಯಕ್ಷ ಮಧುರಾಜ್‌ ಹೆಗ್ಡೆ

ಗ್ರಾಮ ಪಂಚಾಯಿತಿ ಹಮ್ಮಿಕೊಂಡಿರುವ ಕನ್ನಡ ರಾಜ್ಯೋತ್ಸವದ ವಿಶಿಷ್ಠವಾಗಿದೆ. ಕಾರ್ಯಕ್ರಮದಲ್ಲಿ ಪಂಚಾಯಿತಿ ವ್ಯಾಪ್ತಿಯಲ್ಲಿ ಶೈಕ್ಷಣಿಕವಾಗಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳುತ್ತಿದೆ. 2022ರ ಕನ್ನಡ ರಾಜ್ಯೋತ್ಸವ ಸ್ಮರಣಿಕೆಯಲ್ಲಿ ಉಳಿಯಬೇಕು ಎಂಬ ಉದ್ದೇಶದಿಂದ ಸಭಾಂಗಣ ಉದ್ಘಾಟನೆ ಮಾಡುವ ಮೂಲಕ ವಿಭಿನ್ನವಾಗಿ ಕಾರ್ಯಕ್ರಮ ಆಯೋಜಿಸಿದೆ.

ತೂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಶಾಲಾ ಆವರಣದಲ್ಲಿ ನವೆಂಬರ್‌ 30ರ ಬುಧವಾರ ಕನ್ನಡ ರಾಜೋತ್ಸವ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಅಂಗವಾಗಿ ಸಂಜೆ 4 ಗಂಟೆಗೆ ಗೃಹಸಚಿವ ಆರಗ ಜ್ಞಾನೇಂದ್ರ ತೂದೂರು ಶಾಲೆಯ ಮುಂಭಾಗ ನಿರ್ಮಿಸಿರುವ ನೂತನ ಕುವೆಂಪು ಸಭಾಂಗಣ ಮತ್ತು ಎಸ್‌ ಬಂಗಾರಪ್ಪ ವೇದಿಕೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಸಂಜೆ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ. ಈ ಎಲ್ಲಾ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಿ ಎಂದು ತೂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಧುರಾಜ್‌ ಹಗ್ಡೆ ಕೋರಿದ್ದಾರೆ.

ಬೆಳಿಗ್ಗೆ 9ಕ್ಕೆ ಶಾಲೆಯ ಅವರಣದಲ್ಲಿ ಧ್ವಜಾರೋಹಣ ನಡೆಯಲಿದೆ. ಮಧ್ಯಾಹ್ನ ವಿವಿಧ ವೇಷಭೂಷಣ ಮತ್ತು ಶಾಲಾ ಮಕ್ಕಳೊಂದಿಗೆ ಕನ್ನಡಾಂಬೆಯ ರಾಜಬೀದಿ ಉತ್ಸವ ನಡೆಯಲಿದೆ. ವೇದಿಕೆ ಕಾರ್ಯಕ್ರಮದಲ್ಲಿ ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್‌, ತಹಶೀಲ್ದಾರ್‌ ಅಮೃತ್‌ ಅತ್ರೇಶ್‌, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶೈಲಾ ಎನ್‌, ಡಿವೈಎಸ್ಪಿ ಶಾಂತವೀರ ಈ, ಕ್ಷೇತ್ರ ಶಿಕ್ಷಣಾಧಿಕಾರಿ ಆನಂದಕುಮಾರ್‌, ಕರ್ನಾಟಕ ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶಕ ಆರ್‌. ಮದನ್‌, ಕಾಂಪೋಸ್ಟ್‌ ನಿಗಮ ಉಪಾಧ್ಯಕ್ಷ ಬೇಗುವಳ್ಳಿ ಸತೀಶ್‌, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶಶಿಕಲಾ ದೇವರಾಜ್‌, ಸದಸ್ಯರಾದ ಎಂ.ಡಿ. ಅರವಿಂದ್‌, ಟಿ.ಎಸ್‌ ರಾಜೇಶ್‌, ಆರ್.ಎಸ್.‌ ಭುಜಂಗ, ಶರತ್‌ ಕುಮಾರ್, ಮಿತ್ರ, ನೂತನ, ರಕ್ಷಿತಾ, ಭಾಗ್ಯ, ಅಶ್ವಿನಿ ಭಾಗವಹಿಸಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್‌, ತೂದೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಆರ್.ಆರ್.‌ ಚಂದ್ರಪ್ಪ, ಪ್ರೌಢಶಾಲೆ ಎಸ್‌ಡಿಎಂಸಿ ಅಧ್ಯಕ್ಷ ಕವಿರಾಜ್‌ ಎಸ್.ಪಿ., ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಸ್‌ಡಿಎಂಸಿ ಅಧ್ಯಕ್ಷ ಕೆ.ಬಿ. ಜಲೀಲ್‌, ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯ ಬಿ.ವಿ.‌, ಕವಿರಾಜ್ ಮುಂತಾದವರು ಉಪಸ್ಥಿತಿ ಇರಲಿದ್ದಾರೆ ಎಂದು ಮಧುರಾಜ್‌ ಹೆಗ್ಡೆ ತಿಳಿಸಿದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post