ಶಿವಮೊಗ್ಗ ಟಿಎಪಿಸಿಎಂಎಸ್‌ ಚುನಾವಣೆಯಲ್ಲಿ ಆರ್‌ಎಂಎಂಗೆ ಭರ್ಜರಿ ಜಯ

ಸೋಲಿಸಲು ವ್ಯವಸ್ಥಿತ ಪ್ರಯತ್ನ ನಡೆಸಿದರೂ ಎದುರಾಳಿಗೆ ಮುಖಭಂಗ
ಸಹಕಾರಿ ರಂಗವನ್ನು ಪಕ್ಷಾತೀತವಾಗಿ ಮುನ್ನಡೆಸಿದ ಗೌಡರನ್ನು ಬಿಟ್ಟುಕೊಡದ ಮತದಾರರು

ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಮಾಜಿ ಅಧ್ಯಕ್ಷರಾದ ಡಾ. ಆರ್.ಎಂ. ಮಂಜುನಾಥ ಗೌಡ ಕಳೆದ ವಾರ ಶಿವಮೊಗ್ಗದಲ್ಲಿ ನಡೆದ ಟಿಎಪಿಸಿಎಎಂಎಸ್‌ ನಿರ್ದೇಶಕ ಸ್ಥಾನದ ಚುನಾವಣೆಯಲ್ಲಿ ತಮ್ಮ ಎದುರಾಳಿ ಕ್ಯಾತನಕೊಪ್ಪ ಚಂದ್ರಶೇಖರ್ ವಿರುದ್ಧ ನಿರೀಕ್ಷೆಗೂ ಮೀರಿದ ಭರ್ಜರಿ ಜಯ ಸಾಧಿಸಿದ್ದಾರೆ.

ಇದರೊಂದಿಗೆ ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಹಾಗೂ ರಾಜ್ಯ ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷರಾಗಿ ಸಹಕಾರಿ ರಂಗದಲ್ಲಿ ಅಚ್ಚಳಿಯದೆ ಚಾಪು ಮೂಡಿಸಿರುವ ಡಾ.ಆರ್.ಎಂ. ಮಂಜುನಾಥ ಗೌಡರನ್ನು ವ್ಯವಸ್ಥಿತ ಷಡ್ಯಂತ್ರದ ಮೂಲಕ ಸಹಕಾರಿ ರಂಗದಿಂದ ತೆರೆಮರೆಗೆ ಸರಿಸುವ ಅವರ ವಿರೋಧಿಗಳ ಪ್ರಯತ್ನಕ್ಕೆ ಹಿನ್ನಡೆಯಾಗಿದೆ ಎಂಬ ಮಾತು ಕೇಳಿ ಬಂದಿದೆ.

ಕೆಲವು ವರ್ಷಗಳ ಹಿಂದೆ ಶಿವಮೊಗ್ಗದ ಡಿಸಿಸಿ ಬ್ಯಾಂಕ್‌ ಶಾಖೆಯೊಂದರಲ್ಲಿ ನಡೆದಿದೆ ಎನ್ನಲಾದ ನಕಲಿ ಬಂಗಾರದ ಹಗರಣದಲ್ಲಿ ಆಗ ಅಧ್ಯಕ್ಷರಾಗಿದ್ದ ಮಂಜುನಾಥ ಗೌಡರೇ ಸ್ವತಃ ಹಗರಣಕ್ಕೆ ಸಂಬಂಧ ಪಟ್ಟವರ ವಿರುದ್ಧ ದೂರು ನೀಡಿದ್ದಾಗಿಯೂ ರಾಜಕೀಯ ಒತ್ತಡಗಳ ಕಾರಣ ಅವರನ್ನೇ ಹಗರಣದಲ್ಲಿ ಸಿಲುಕಿಸಲಾಗಿದೆ ಎಂಬ ಅಭಿಪ್ರಾಯ ಸಹಕಾರಿ ವಲಯದಲ್ಲಿ ಕೇಳಿ ಬಂದಿತ್ತು. ಮುಂದೆ ಇದರಲ್ಲಿ ಹುರುಳಿಲ್ಲ ಎಂಬ ತೀರ್ಪು ಬಂದಾಗಲೂ ಪಟ್ಟು ಬಿಡದ ಎದುರಾಳಿಗಳು ಅವರನ್ನು ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಹಾಗೂ ನಿರ್ದೇಶಕ ಸ್ಥಾನದಿಂದ ಕೆಳಗಿಳಿಸಿ ರಾಜಕೀಯವಾಗಿ ಅವರನ್ನು ಮುಗಿಸಿದೆವು ಎಂದು ಅಂದುಕೊಂಡಿದ್ದರು.

ಆದರೆ ಇದರ ವಿರುದ್ಧ ಮತ್ತೆ ಕೋರ್ಟ್‌ ಮೆಟ್ಟಿಲೇರಿದ್ದ ಮಂಜುನಾಥ ಗೌಡ ಪುನಃ ಅವಕಾಶ ಪಡೆದು ಟಿಎಪಿಸಿಎಂಎಸ್‌ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಕೋರ್ಟ್‌ ನಿರ್ದೇಶನದಂತೆ ಎರಡು ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ವಿಶೇಷವೆಂದರೇ ಎರಡರಲ್ಲೂ ಅವರು ಭಾರೀ ಮತಗಳನ್ನು ಪಡೆದಿದ್ದಾರೆ. ಚುನಾವಣೆಯಲ್ಲಿ ಪಾಲ್ಗೊಂಡ ಕೆಲವು ಮತದಾರರ ಪ್ರಕಾರ ಅವರ ವಿರುದ್ಧ ಶಿವಮೊಗ್ಗದ ಬಿಜೆಪಿಯ ಬಹುತೇಕ ಹೆಸರಾಂತ ನಾಯಕರು ಎಲ್ಲಾ ರೀತಿಯ ಪ್ರಯತ್ನದ ಮೂಲಕ ಸೋಲಿಸಲು ಪ್ರಯತ್ನಿಸಿದ್ದರು. ಹಣದ ಹೊಳೆಯೇ ಹರಿದಿದೆ ಎಂಬ ಆರೋಪವೂ ಕೇಳಿ ಬಂದಿತ್ತು. ಆದರೆ ಎಲ್ಲವನ್ನು ಮೀರಿ ಗೆಲ್ಲುವ ಮೂಲಕ ಮಂಜುನಾಥ ಗೌಡ ಶಿವಮೊಗ್ಗ ಜಿಲ್ಲಾ ಸಹಕಾರಿ ಕ್ಷೇತ್ರದಲ್ಲಿ ತಮ್ಮ ಪ್ರಭಾವ ಏನೆಂಬುದನ್ನು ಸಾಬೀತು ಪಡಿಸಿದ್ದಾರೆ.



ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post