ನಾಳೆ ಕಿಮ್ಮನೆಯಿಂದ ಮತ್ತೊಂದು ಪಾದಯಾತ್ರೆ

ಮೇಗರವಳ್ಳಿ ಅರಣ್ಯ ಇಲಾಖೆ ಮುಂಭಾಗದಿಂದ ಬೃಹತ್‌ ಹೋರಾಟ ಆರಂಭ
ಕೇಂದ್ರ, ರಾಜ್ಯ ಸರ್ಕಾರದ ನಿಷ್ಕ್ರೀಯತೆ ವಿರುದ್ಧ ತೀವ್ರ ಪ್ರತಿಭಟನೆ

ನವೆಂಬರ್‌ 19ರ ಶನಿವಾರ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್‌ ಮತ್ತೊಂದು ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ತಾಲ್ಲೂಕಿನ ಜ್ವಲಂತ ಸಮಸ್ಯೆಯನ್ನು ಬಹುತೇಕ ಪಾದಯಾತ್ರೆ ಮೂಲಕವೇ ಚರ್ಚೆಗೊಳಪಡಿಸಿರುವ ಕಿಮ್ಮನೆ ಈ ಬಾರಿ ಬಹುತೇಕ ಇಡೀ ಮಲೆನಾಡನ್ನೇ ತಲ್ಲಣಗೊಳಿಸುತ್ತಿರುವ ಅಡಿಕೆ ಎಲೆಚುಕ್ಕಿ ರೋಗದ ವಿರುದ್ಧ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಯಾವುದೇ ರೀತಿ ಪರಿಣಾಮ ಕಾರ್ಯ ಕೈಗೊಂಡಿಲ್ಲ ಎಂದು ಬೀದಿಗಿಳಿಯುತ್ತಿದ್ದಾರೆ.

ನಾಳೆ ಶನಿವಾರ ಬೆಳಿಗ್ಗೆ ಮೇಗರವಳ್ಳಿಯಿಂದ ತೀರ್ಥಹಳ್ಳಿಯ ವರೆಗೆ ಈ ಪಾದಯಾತ್ರೆ ನಡೆಯಲಿದ್ದು ಪಕ್ಷದ ಎಲ್ಲ ಹಿರಿಯ ಹಾಗೂ ಕಿರಿಯ ನಾಯಕರುಗಳು ಭಾಗವಹಿಸುತ್ತಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಪಾದಯಾತ್ರೆ ಮೇಗರವಳ್ಳಿ ಅರಣ್ಯ ಇಲಾಖೆ ಮುಂಭಾಗದಿಂದ ಬೆಳಿಗ್ಗೆ 8.30ಕ್ಕೆ ಆರಂಭಗೊಂಡು ತೀರ್ಥಹಳ್ಳಿ ತೋಟಗಾರಿಕಾ ಕಚೇರಿ ಮುಂಭಾಗ ಮುಕ್ತಾಯಗೊಳ್ಳಲಿದೆ.

ಪಾದಯಾತ್ರೆಗೆ ರೈತರು ಪಕ್ಷದ ಕಾರ್ಯಕರ್ತರು ಅಭಿಮಾನಿಗಳು ಹಾಗೂ ಸಮಾನಮನಸ್ಕ ಮಿತ್ರರು ಭಾಗವಹಿಸಬೇಕು ಎಂದು ಮಾಜಿ ಸಚಿವ, ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್, ಕೆಪಿಸಿಸಿ ಸದಸ್ಯ ಜಿ ಎಸ್ ನಾರಾಯಣ ರಾವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆಸ್ತೂರ್ ಮಂಜುನಾಥ್, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಮುಡುಬ ರಾಘವೇಂದ್ರ ಕೋರಿದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post