ಶಿವಮೊಗ್ಗ ಸ್ಮಾರ್ಟ್‌ ಸಿಟಿ ಟ್ಯಾಬ್ಲೋಗೆ ಪ್ರಥಮ ಸ್ಥಾನ

ಜಿಲ್ಲಾಧಿಕಾರಿ ಗಮನದ ಸೆಳೆದ ತೀರ್ಥಹಳ್ಳಿ ಹುಡುಗರು
ಮೆಚ್ಚುಗೆಯೊಂದಿಗೆ ಪ್ರಥಮ ಸ್ಥಾನಕ್ಕೆ ಆಯ್ಕೆ
ಎದುರಾಳಿಗಳಿಂದಲೂ ಅಭಿನಂದನೆ

ಕುರುವಳ್ಳಿಯ ಶಿಲ್ಪಕಲಾ ಕೇಂದ್ರ ಹಾಗೂ ಉತ್ಸಾಹಿ ಯುವಕರ ತಂಡ ನಿರ್ಮಾಣ ಮಾಡಿರುವ ಶಿವಮೊಗ್ಗ ಸ್ಮಾರ್ಟ್‌ ಸಿಟಿ ಸ್ಥಬ್ದಚಿತ್ರಕ್ಕೆ ಪ್ರಥಮ ಸ್ಥಾನ ದೊರೆತಿದೆ. ಈ ಸ್ಪರ್ಧೆಯಲ್ಲಿ ಪ್ರವಾಸೋದ್ಯಮ ಇಲಾಖೆ, ಸ್ವಚ್ಚ ಭಾರತ್‌ ಮಿಷನ್‌, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಪಂಚಾಯಿತಿ, ಶಿವಮೊಗ್ಗ ಮಹಾನಗರ ಪಾಲಿಕೆ, ಕೆಎಸ್‌ಆರ್‌ಟಿಸಿ, ಅರಣ್ಯ ಇಲಾಖೆ ಮುಂತಾದ ಇಲಾಖೆಗಳಿಂದ 13ಕ್ಕೂ ಹೆಚ್ಚು ಸ್ಥಬ್ದಚಿತ್ರಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದವು.

ತೀರ್ಥಹಳ್ಳಿ ಕುರುವಳ್ಳಿ ಶಿಲ್ಪಕಲಾ ಕೇಂದ್ರದ ಶಿಲ್ಪಿ ಜಗದೀಶ್‌ ಎಂ.ಬಿ., ಮಣಿಕಂಠ, ಪತ್ರಕರ್ತ ನಿರಂಜನ ವಿ, ಚಿತ್ರಕಲಾವಿದರಾದ ಸುಭಾಷ್‌ ಕುಲಾಲ್‌, ಭರತ್‌ ಕೆ ಹೂಗಾರ್‌ ಸೇರಿಕೊಂಡು ಅತ್ಯಂತ ಆಕರ್ಷಕ ಹಾಗೂ ಕಲಾತ್ಮಕವಾಗಿ ವಿನ್ಯಾಸಗೊಳಿಸಿದ ಶಿವಮೊಗ್ಗ ಸ್ಮಾರ್ಟ್‌ ಸಿಟಿ ಸ್ಥಬ್ದಚಿತ್ರ ಎಲ್ಲರ ಮೆಚ್ಚುಗೆಯೊಂದಿಗೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಇದರಲ್ಲಿ ಶಿವಮೊಗ್ಗದ ಶಿವಪ್ಪನಾಯಕ ಅರಮನೆ, ಮೈನ್‌ ಮಿಡಲ್‌ ಸ್ಕೂಲ್‌, ಸೈನಿಕ ಪಾರ್ಕ್‌, ಸ್ಮಾರ್ಟ್‌ ಕ್ಲಾಸ್‌, ಐಸಿಸಿಸಿ, ಸ್ಮಾರ್ಟ್‌ ರಸ್ತೆ, ಸ್ಮಾರ್ಟ್‌ ಪೋಲ್‌ ಹಾಗೂ ಸಿಸಿಟಿವಿ ಅಂಶಗಳನ್ನು ವಿಶೇಷ ಆಸಕ್ತಿಯಿಂದ ಗಮನಿಸಿದ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅಂತಿಮವಾಗಿ ಮೊದಲ ಸ್ಥಾನಕ್ಕೆ ಆರಿಸಿದ್ದಾರಲ್ಲದೇ ಈ ಯುವ ಕಲಾವಿದರನ್ನು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ಈ ಸ್ಥಬ್ದಚಿತ್ರವನ್ನು ಶಿವಪ್ಪನಾಯಕ ಅರಮನೆಯಲ್ಲಿ ಸಾರ್ವಜನಿಕರ ಪ್ರದರ್ಶನಕ್ಕೆ ಇಡಲಾಗುವುದು ಎಂದು ತಿಳಿದು ಬಂದಿದೆ.






ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post