ಮಹಾನ್ ಸಾಧಕರಿಗೆ ಪ್ರಶಸ್ತಿಯ ಗರಿ

ಪುರುಷೋತ್ತಮ ತಲವಾಟ
ಗರ್ತಿಕೆರೆ ರಾಘಣ್ಣ
ಅವರಿಗೆ ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ
ರಂಗಕರ್ಮಿ ಪುರುಷೋತ್ತಮ ತಲವಾಟ ಮತ್ತು ಸಂಗೀತ ಕ್ಷೇತ್ರದಲ್ಲಿ ಅತಿಎತ್ತರದ ಸಾಧನೆ ಮಾಡಿದ ರಾಜ್ಯೋತ್ಸವ ಪುರಸ್ಕೃತ ಗರ್ತಿಕೆರೆ ರಾಘಣ್ಣ ಅವರು ಕೇಂದ್ರ ಸಂಗೀತ ನಾಟಕ ಅಕಾಡೆಮಿಯ 2021ನೇ ಸಾಲಿನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ₹ 1 ಲಕ್ಷ ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.
ಪುರುಷೋತ್ತಮ ಅವರು ಪ್ರಸಾದನ, ಬೆಳಕು, ರಂಗಸಜ್ಜಿಕೆ ವಿಭಾಗದಲ್ಲಿ ಸಕ್ರಿಯವಾಗಿರುವ ಅವರು ನೀನಾಸಂ, ರಂಗಾಯಣ, ಸಾಣೇಹಳ್ಳಿ ಶಿವಕುಮಾರ್ ಕಲಾಸಂಘ, ರಾಷ್ಟ್ರೀಯ ನಾಟಕ ಶಾಲೆಗಳಲ್ಲಿ ಕೆಲಸ ಮಾಡಿದ್ದಾರೆ.
ಗಿರೀಶ್ ಕಾಸರವಳ್ಳಿ ನಿರ್ದೇಶನದ ‘ದ್ವೀಪ’, ‘ಹಸೀನಾ’, ‘ಕನಸೆಂಬ ಕುದುರೆಯನ್ನೇರಿ’, ‘ಒಂದು ಕೊಲೆಯ ಸುತ್ತ’, ಪಿ.ಶೇಷಾದ್ರಿ ನಿರ್ದೇಶನದ ‘ವಿದಾಯ’ ಸೇರಿದಂತೆ ಹಲವು ಸಿನೆಮಾಗಳಲ್ಲಿ ಅವರು ನಟಿಸಿದ್ದಾರೆ.
ಸುಗಮ ಸಂಗೀತ ಕ್ಷೇತ್ರದಲ್ಲಿ ಗರ್ತಿಕೆರೆ ರಾಘಣ್ಣ ಅವರದ್ದು ಬಹುದೊಡ್ಡ ಸಾಧನೆ. ಸಾವಿರಾರು ಹಾಡುಗಳ ರಾಗ ಸಂಯೋಜನೆ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಕನ್ನಡದ ಅತ್ಯಂತ ಪ್ರಮುಖ 10 ಹಾಡುಗಳನ್ನು ಆಯ್ಕೆ ಮಾಡಿಕೊಂಡರೆ ಅದರಲ್ಲಿ ಕನಿಷ್ಠ 2 ಹಾಡುಗಳು ರಾಘಣ್ಣ ಅವರದ್ದಾಗಿರುತ್ತದೆ. ಮೈಸೂರು ಅನಂತಸ್ವಾಮಿ, ಸಿ. ಅಶ್ವತ್ಥ್, ಶಿವಮೊಗ್ಗ ಸುಬ್ಬಣ್ಣ ಸಮಕಾಲೀನರು.
ಹೊಟ್ಟೆಪಾಡಿಗಾಗಿ ಸೈಕಲ್ ಶಾಪ್ ನಡೆಸುತ್ತಿದ್ದ ರಾಘಣ್ಣ ಅವರ ಕುಂಚದಲ್ಲಿ ತಾಯೆ ನಿನ್ನ ಮಡಿಲಲಿ, ಮಾನವನೆದೆಯಲಿ ಆರದೆ ಉಳಿಯಲಿ, ಮನಸು ಸಾರದ ಕನಸು ಕಾಣದ, ಅಮ್ಮಾ ಎಂಬ ಮಾತಿಗಿಂತ ಮುಂತಾದವು ಹಾಡುಗಳು ಅರಳಿದೆ.
ಇವರ ಸಾಧನೆಗೆ ರಾಜ್ಯೋತ್ಸವ, ಸಂತ ಶಿಶುನಾಳ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಲಭಿಸಿದೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post