ಹುಂಚದಕಟ್ಟೆ ಮಾರಿಕಾಂಬಾ ದೇವಸ್ಥಾನದಲ್ಲಿ ಕಳ್ಳತನ

40 ಸಾವಿರಕ್ಕೂ ಹೆಚ್ಚು ಹಣ ಕಳ್ಳರ ಪಾಲು
ಕಾಣಿಕೆ ಹುಂಡಿ ಎಗರಿಸಿದ ಕದೀಮರು

ತಾಲ್ಲೂಕಿನ ಹುಂಚದಕಟ್ಟೆ ಮಾರಿಕಾಂಬಾ ದೇವಸ್ತಾನದಲ್ಲಿ ಶುಕ್ರವಾರ ರಾತ್ರಿ ಕಳ್ಳತನವಾಗಿದೆ. ದೇವಸ್ಥಾನದ ಒಳಗೆ ಇದ್ದ ಬಾರಿ ಗಾತ್ರದ ಕಾಣಿಕೆ ಡಬ್ಬಿಯನ್ನೇ ಹೊತ್ತೊಯ್ದಿದ್ದಾರೆ ಎಂದು ತಿಳಿದಿದೆ.

ದೇವಸ್ತಾನದ ಕಾಣಿಕೆ ಡಬ್ಬಿ ತೆರೆಯದೆ ಒಂದು ವರ್ಷಗಳು ಕಳೆದಿತ್ತು. ಹಾಗಾಗಿ ಅದರಲ್ಲಿ 
ನಲವತ್ತು ಸಾವಿರಕ್ಕೂ ಹೆಚ್ಚು ಮೌಲ್ಯದ ನಗನಾಣ್ಯ ಇದ್ದಿರಬಹುದು ಎಂದು ಊಹಿಸಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post