ಗೃಹಸಚಿವರ ಕ್ಷೇತ್ರದಲ್ಲಿ ಇದೇನು ಕಥೆ..!

ಹಣಗೆರೆಕಟ್ಟೆಯಲ್ಲಿ ಕೈಕಟ್ಟಿ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿತ
ಸಿಸಿಟಿವಿ ಕ್ಯಾಮರಾದಲ್ಲಿ ಘಟನೆ ದೃಶ್ಯ ಸೆರೆ..?
ಪ್ರಕರಣ ನಡೆದು ವಾರ ಕಳೆದರು ಸಿಗದ ಆರೋಪಿಗಳು
ಸಾಕ್ಷಿ ನಾಶ ಆರೋಪ ಪೊಲೀಸರ ಸುತ್ತ
ಮುಂಗೀಸರ ಓಂಕಾರ

ರ್ವ ವ್ಯಕ್ತಿಗೆ ಸುಮಾರು 20 ರಿಂದ 30 ಜನರ ಗುಂಪೊಂದು ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗ ಥಳಿಸಿದ ಘಟನೆಯೊಂದು ಹಣಗೆರೆಕಟ್ಟೆ ಗ್ರಾಮದಲ್ಲಿ ನಡೆದಿದೆ.

ಮುಂಗೀಸರ ಓಂಕಾರ (35) ಎಂಬ ಯುವಕನ ಮೇಲೆ ಗ್ರಾಮದ ಗುಂಪೊಂದು ತೀವ್ರ ಹಲ್ಲೆ ನಡೆಸಿದೆ. ಥಳಿತದಿಂದಾಗಿ ಗಂಭೀರ ಗಾಯಗೊಂಡ ಓಂಕಾರ ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜೆಸಿ ಆಸ್ಪತ್ರೆಯಲ್ಲಿ ಹೆಚ್ಎಂಆರ್. ವರದಿ ನೀಡಲಾಗಿದ್ದು ಮಾಳೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಅಲ್ಲದೇ ಘಟನೆ ಸ್ಥಳದಲ್ಲಿ ಖಾಸಗಿ ವ್ಯಕ್ತಿಯೊಬ್ಬರ ಸಿಸಿಟಿವಿ ಕ್ಯಾಮರದಲ್ಲಿ ಘಟನೆಯ ಪೂರ್ಣ ಚಿತ್ರಣ ದಾಖಲಾಗಿದೆ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ. ಇದೀಗ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು ಪ್ರಕರಣಕ್ಕೆ ಸಾಕ್ಷಿಯಾಗಿರುವ ಸಿಸಿಟಿವಿ ದೃಶ್ಯವನ್ನು ನಾಶ ಮಾಡಿದವರು ಯಾರೆಂಬ ಪ್ರಶ್ನೆ ಎದುರಾಗಿದೆ. ಈ ಬಗ್ಗೆ ಅನುಮಾನದ ಸುಳಿ ಪೊಲೀಸರ ಕಡೆಗೆ ಹರಿದಾಡುತ್ತಿದೆ.

ಪ್ರಕರಣ ಪೊಲೀಸರ ವಿರುದ್ದ ತಿರುಗುವ ಮೊದಲು ಗೃಹಸಚಿವ ಆರಗ ಜ್ಞಾನೇಂದ್ರ ಮತ್ತು ಜಿಲ್ಲಾ ರಕ್ಷಣಾಧಿಕಾರಿಗಳು ಎಚ್ಚರವಹಿಸಬೇಕಾಗಿದೆ. ಗೃಹಸಚಿವರ ಕ್ಷೇತ್ರದಲ್ಲಿ ನಿರಂತರವಾಗಿ ಕ್ರಿಮಿನಲ್‌ ಪ್ರಕರಣ ಹೆಚ್ಚಾಗುತ್ತಿದ್ದು ರಾಜಕೀಯವಾಗಿಯೂ ಸಚಿವರಿಗೆ ಇರಿಸುಮುರಿಸಿಗೆ ಕಾರಣವಾಗಿದ್ದು ಹಣಗೆರೆ ಘಟನೆ ಕ್ಷೇತ್ರದ ಘನತೆಗೆ ಅಗೌರವ ತಂದಂತಿದೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post