ದೋಡ್ಡಹಕ್ಲು ಸಮೀಪ ಅನುಮಾನಾಸ್ಪದ ಸಾವು

ಸ್ಕೂಟಿ ಅಪಘಾತದಿಂದ ವ್ಯಕ್ತಿ ಮರಣ...?
ಅಕ್ರಮ ಮರಳು ದಂಧೆ ಮುಳುವಾಯಿತೇ...!

ಕೋಣಂದೂರು ಸಮೀಪದ ಹೊಸಕೇರಿ ಗ್ರಾಮದ ದೋಡ್ಡಹಕ್ಲು ಗ್ರಾಮದಲ್ಲಿ ತಡರಾತ್ರಿ ರಸ್ತೆ ಅಪಘಾತದಲ್ಲಿ ವ್ಯಕ್ತಿಯೋರ್ವ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ನೊಣಬೂರು ಗ್ರಾಮದ ಚಂದವಳ್ಳಿ ಪ್ರದೀಪ್ (34) ಎಂದು ಗುರುತಿಸಲಾಗಿದೆ.
ರಾತ್ರಿ ಸುಮಾರು 12 ಗಂಟೆಯಾದರು ಪ್ರದೀಪ್ ಮನೆಗೆ ಬಾರದಿದ್ದಾಗ ಕುಟುಂಬದ ಸದಸ್ಯರು ಆತಂಕದಲ್ಲಿ ಹುಡುಕಲು ಆರಂಭಿಸಿದ್ದಾರೆ. ರಸ್ತೆ ಮಧ್ಯೆ ಸ್ಕೂಟಿಯಿಂದ ಕೆಳಗೆ ಬಿದ್ದಿದ್ದ ಪ್ರದೀಪ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರಿಗೆ ತೆರಚಿದ ಗಾಯ ಹಾಗೂ ತಲೆಗೆ ಸಣ್ಣ ಪೆಟ್ಟಾಗಿದ್ದು ಅನುಮಾನಕ್ಕೆ ಕಾರಣವಾಗಿದೆ.
ಕಳೆದ ಮೂರು ತಿಂಗಳ ಹಿಂದೆ ಮರಳನ್ನು ಕಡಿಮೆ ದರದಲ್ಲಿ ಸರಬರಾಜು ಮಾಡುತ್ತಿದ್ದ ಎಂಬ ಕಾರಣಕ್ಕೆ ಕೆಲವರೊಂದಿಗೆ ಕಿತ್ತಾಟ ನಡೆದಿತ್ತು. ಹೀಗಾಗಿ ಪ್ರದೀಪ್ ಮೇಲೆ ದೊಡ್ಡ ಪಿತೂರಿ ನಡೆದಿತ್ತು ಎಂಬ ಗುಮಾನಿ ಗ್ರಾಮದಲ್ಲಿ ವ್ಯಕ್ತವಾಗುತ್ತಿದೆ.
ಅಕ್ರಮ ಮರಳು ಸಾಗಣೆ ವಿವಿಧ ಗಲಾಟೆಗೆ ಕಾರಣವಾಗುತ್ತಿದೆ. ಆರಗ ಗ್ರಾಮದಲ್ಲಿ ವಾರದ ಹಿಂದೆ ಗಲಾಟೆ ಮಾಡುವುದಾಗಿ ಪೊಲೀಸರಿಗೆ ಮಾಹಿತಿ ನೀಡಿ ದೊಂಬಿ ನಡೆದಿತ್ತು. ಆರೋಪಿಗಳು ಗರ್ಭಿಣಿ ಮತ್ತು ಮಹಿಳೆಯರ ಮುಂದೆಯೇ ಬಿಯರ್ ಬಾಟಲ್ ಗಳನ್ನು ಒಡೆದು ರಂಪಾಟ ನಡೆಸಿದ್ದರು. ಅಲ್ಲದೆ ಹಲ್ಲೆಯನ್ನು ಮಾಡಿದ ಪ್ರಕರಣ ಮಾಸುವ ಮುನ್ನವೇ ಇಂತಹದ್ದೊಂದು ಅಪಘಾತ ಸುದ್ದಿ ವರದಿಯಾಗಿದೆ. ಪೊಲೀಸ್ ಇಲಾಖೆ ಜಾಣ ಕುರುಡುತನ ಪ್ರದರ್ಶಿಸುತ್ತಿದ್ದು ಮರಳು ಅಕ್ರಮ ವಹಿವಾಟಿಗೆ ಕಡಿವಾಣ ಹಾಕಬೇಕಾಗಿದೆ. ಇಲಾಖೆಗೆ ಮಾಹಿತಿ ಇದ್ದರು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂಬ ದೂರು ಸಾರ್ವಜನಿಕರಿಂದ ಕೇಳಿ ಬರುತ್ತಿದೆ‌.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post