ಗುಜರಾತ್‌ ಪ್ರವಾಸ ಮಿನಿಟ್‌ ಟು ಮಿನಿಟ್‌ ಪಾರದರ್ಶಕ

ಬೆಂಗಳೂರು: ಪಿಂಪ್‌ ಹಣಕ್ಕಿಂತ ಆತ್ಮಹತ್ಯೆ ಮೇಲು
ಮಲೆನಾಡು ಮಿತ್ರವೃಂದ ಕ್ರೀಡಾಕೂಟದಲ್ಲಿ ಆರಗ ಬೇಸರ

ಸ್ವಚ್ಚ ರಾಜಕಾರಣದಲ್ಲಿ ಬದ್ಧತೆ ಹೊಂದಿರುವ ನಾನು, ಸಮಾಜ ಧ್ರೋಹಿಗಳೂ ಮತ್ತು ಪೀಡಕರಿಂದ ಅಕ್ರಮವಾಗಿ ಹಣ ಗಳಿಸಬೇಕಾದ ಸಂದರ್ಭ ಬಂದರೆ, ಬದುಕಲು ಇಚ್ಛಿಸುವುದಿಲ್ಲ. ಸ್ಯಾಂಟ್ರೊ ರವಿಯಂತಹ ಪಿಂಪ್‌ ಹಣಕ್ಕಿಂತ ಆತ್ಮಹತ್ಯೆ ಮೇಲು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಭಾನುವಾರ ರಾತ್ರಿ ಬೆಂಗಳೂರಿನಲ್ಲಿ ಮಲೆನಾಡು ಮಿತ್ರವೃಂದ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಗುಜರಾತ್ ಪ್ರವಾಸಕ್ಕೂ, ಸ್ಯಾಂಟ್ರೋ ರವಿ ಬಂಧನಕ್ಕೂ ಥಳುಕು ಹಾಕುವ ಕೆಲವು ನಾಯಕರು,  ನನ್ನ ಗುಜರಾತ್ ಪ್ರವಾಸ ಬಹಳ ಹಿಂದೆಯೇ ನಿಗದಿಯಾಗಿತ್ತು. ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ನಿಯೋಗದ ನೇತೃತ್ವ ವಹಿಸಿದ್ದ ನನ್ನ ಗುಜರಾತ್ ಭೇಟಿ ಹಾಗೂ ಕಾರ್ಯಕ್ರಮಗಳು, ಪಾರದರ್ಶಕವಾಗಿವೆ ಎಂದು ಭಾವುಕರಾದರು.

ಗುಜರಾತ್ ಪ್ರವಾಸದ ಸಂದರ್ಭದಲ್ಲಿ, ರಾಜ್ಯದಲ್ಲಿ ವಿಧಿ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು, ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ, ಉಪ ಕುಲಪತಿಗಳು ಹಾಗೂ ಇತರ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ. ಇದರ ಮುಂದುವರಿದ ಭಾಗವಾಗಿ ಶೀಘ್ರದಲ್ಲಿಯೇ ವಿಶ್ವವಿದ್ಯಾಲಯದ ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನಲೆಯಲ್ಲಿ ಗುಜರಾತ್ ಮುಖ್ಯಮಂತ್ರಿ ಭೂಪೆಂದ್ರ ಪಟೇಲ್ ಅವರನ್ನು ಸೌಜನ್ಯ ಭೇಟಿ ನಡೆಸಿದ್ದೇನೆ. ಎಲ್ಲವೂ ತೆರದ ಪುಸ್ತಕದಂತೆ ಇದೆ. ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದ ವ್ಯಕ್ತಿಯೊಬ್ಬರು, ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು ಸಚಿವರು ಹೇಳಿದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post