ತೀರ್ಥಹಳ್ಳಿ ಡಿವೈಎಸ್ಪಿ ಕಚೇರಿ ಮುಂಭಾಗ ಅಹೋರಾತ್ರಿ ಪ್ರತಿಭಟನೆ

ಎಸ್ಪಿ, ಡಿವೈಎಸ್ಪಿ ವಾಗ್ದಾನ - ಪ್ರತಿಭಟನೆ ಬೆಳಿಗ್ಗೆ ವಾಪಾಸ್
'ಬಿ' ರಿಪೋರ್ಟ್ ಹಾಕದಿದ್ದರೆ ಸೋಮವಾರದಿಂದ ಉಪವಾಸ ಸತ್ಯಾಗ್ರಹ -ಕಿಮ್ಮನೆ ಎಚ್ಚರಿಕೆ

"ಗೃಹಸಚಿವರು ಅಸಮರ್ಥರು‌ ಅಂತ ಇಡೀ ರಾಜ್ಯದ ಜನ ಹೇಳುತ್ತಿದ್ದಾರೆ. ಸ್ವತಃ ಬಿಜೆಪಿಯರೇ ಬದಲಾವಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಗೃಹ ಇಲಾಖೆ ಅಲ್ಲ ಯಾವ ಇಲಾಖೆಯೂ ಇವರುಗೆ ಆಗಲ್ಲ. ಕ್ಷೇತ್ರದಲ್ಲಿ ಬೇಡದ ಕೆಲಸಗಳನ್ನು ಮಾಡಿಕೊಂಡು ಸೆಕ್ಯುರಿಟಿಯಾಗಲು ಮಾತ್ರ ಸಾಧ್ಯ" ಎಂದು ಕಿಮ್ಮನೆ ದೂರಿದರು.

ಮಂಗಳವಾರ ರಾತ್ರಿ ತೀರ್ಥಹಳ್ಳಿ ಪಟ್ಟಣದ ಹೋಟೆಲ್ ನಲ್ಲಿ ಐದು ಜನರ ನಡುವೆ ಮಾರಾಮಾರಿ ನಡೆದಿತ್ತು. ಬುಧವಾರ 8 ಜನರ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು. ಇದರಲ್ಲಿ ಮೂವರು ಅಪರಾಧ ಪ್ರಕರಣದಲ್ಲಿ ಭಾಗಿಯಾಗಿಲ್ಲ.‌ ಅವರ ಮೇಲೆ ಸುಳ್ಳು ಕೇಸ್ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಸತ್ಯಾಸತ್ಯತೆ ತಿಳಿಯದೆ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಆರೋಪಿಸಿ ಬುಧವಾರ ರಾತ್ರಿ‌ 8 ಗಂಟೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತೀರ್ಥಹಳ್ಳಿ ಡಿವೈಎಸ್ಪಿ ಕಚೇರಿ ಮುಂದೆ ಪ್ರತಿಭಟನೆ ಆರಂಭಿಸಿದರು.

ರಾತ್ರಿ ಸುಮಾರು 12.30 ರ ವರೆಗೆ ಡಿವೈಎಸ್ಪಿ ತಪ್ಪು ಸರಿಪಡಿಸುತ್ತೇವೆ ಎಂಬ ವಾದ ಮುಂದಿಟ್ಟು ನಿರ್ದೋಶಿಗಳಿಗೆ 'ಬಿ' ರಿಪೋರ್ಟ್ ಹಾಕುತ್ತೇವೆ. ಯಾವುದೇ ಕಾರಣಕ್ಕೂ ಅನ್ಯಾಯಕ್ಕೆ ಅವಕಾಶ ನೀಡುವುದಿಲ್ಲ ಎಂದು ಸಂದಾನ ಮಾತುಕತೆ ನಡೆಸಿದರು. ಆದರು 'ಬಿ' ರಿಪೋರ್ಟ್ ನೀಡುವವರೆಗೆ ಧರಣಿ ಮುಂದುವರೆಸುವುದಾಗಿ ತಿಳಿಸಿದ್ದರು. ಬೆಳಿಗ್ಗೆ 6.30ಕ್ಕೆ ಎಸ್ಪಿ ಕರೆ ಮಾಡಿ ಪ್ರಕರಣದಲ್ಲಿ ಭಾಗಿಯಾಗದವರನ್ನು ಕೈಬಿಟ್ಟು ಚಾರ್ಜ್ ಶೀಟ್ ತಯಾರಿಸುವುದಾಗಿ ಭರವಸೆ ನೀಡಿದರು. ಇದರಿಂದ ಧರಣಿ ಹಿಂಪಡೆದು ಭರವಸೆ ಈಡೇರದಿದ್ದರೆ ಸೋಮವಾರದಿಂದ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.



ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post