ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ 500 ಕೋಟಿ ಕೊಡಿ

ತೀರ್ಥಹಳ್ಳಿ: ‘ಬ್ರಹ್ಮಶ್ರೀ ನಾರಾಯಣಗುರು ನಿಗಮ ಮಂಡಳಿ ಸ್ಥಾಪಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರದ ಕಾರ್ಯ ಸ್ವಾಗತಾರ್ಹ. ಈಡಿಗ, ಬಿಲ್ಲವ ಸೇರಿದಂತೆ 26 ಜಾತಿಗಳ ಸಮಗ್ರ ಅಭಿವೃದ್ದಿಗೆ 500 ಕೋಟಿ ರೂಪಾಯಿ ಅನುದಾನ ಘೋಷಿಸಬೇಕು’ ಎಂದು ಗರ್ತಿಕೆರೆ ಬ್ರಹ್ಮಶ್ರೀ ನಾರಾಯಣಗುರು ಆಶ್ರಮದ ರೇಣುಕಾನಂದ ಸ್ವಾಮೀಜಿ ಆಗ್ರಹಿಸಿದರು.

ಬುಧವಾರ ಕೋಳಿಕಾಲುಗುಡ್ಡದ ಆರ್ಯ ಈಡಿಗರ ಸಮುದಾಯ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು.

ಶೈಕ್ಷಣಿಕ, ಔದ್ಯೋಗಿಕ, ಸಾಮಾಜಿಕ ಬದಲಾವಣೆಗಾಗಿ ಇಟ್ಟಿದ್ದ ಸುಮಾರು 10 ವರ್ಷಗಳ ಬೇಡಿಕೆ ಈಡೇರಿದೆ. 2ಎ ಪಂಗಡದಲ್ಲಿ ಧ್ವನಿಗೂಡಿಸುವ ದೊಡ್ಡ ಜಾತಿಗಳ ಸಂಖ್ಯೆ ಕಡಿಮೆ. ಸಣ್ಣಪುಟ್ಟ ಉಪಪಂಗಡಗಳನ್ನು ಒಟ್ಟುಗೂಡಿಸುವ ಪ್ರಯತ್ನ ಇನ್ನಷ್ಟು ಸದೃಢವಾಗಿ ಜಾರಿಗೊಳಿಸಲು ಕಾರ್ಯಯೋಜನೆ ತಯಾರಾಗುತ್ತಿದೆ. ನಿಗಮ ಇನ್ನಷ್ಟು ಕ್ರಿಯಾಶೀಲವಾಗಿ ಕೆಲಸ ಮಾಡಲಿದೆ ಎಂದು ತಿಳಿಸಿದರು.

ರಾಜ್ಯಕ್ಕೆ ಬೆಳಕು ನೀಡಲು ಭೂಮಿ ಕಳೆದುಕೊಂಡ ಮುಳುಗಡೆ ಸಂತ್ರಸ್ತರು ಅತಂತ್ರರಾಗಿದ್ದಾರೆ. ಶರಾವತಿ ಸಂತ್ರಸ್ತರಿಗೆ ಸರ್ಕಾರ ಅನ್ಯಾಯವಾಗದಂತೆ ಎಚ್ಚರ ವಹಿಸಬೇಕು. ಸಂತ್ರಸ್ತರಿಗೆ ಭೂಮಿ ಹಂಚಲು ಪ್ರಸ್ತುತ ಸುಮಾರು 25,000 ಎಕರೆಗೂ ಹೆಚ್ಚು ಜಮೀನಿನ ಅವಶ್ಯಕತೆ ಇದೆ. ರಾಜ್ಯಪತ್ರದಲ್ಲಿ ಪ್ರಕಟಿಸಿರುವ ಡಿನೋಟಿಫಿಕೇಷನ್‌ ರದ್ದು ಆದೇಶದಿಂದ ಸಂತ್ರಸ್ತರು ಕಂಗಾಲಾಗಿದ್ದಾರೆ. ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿ ಸದ್ಯ 9,934 ಎಕರೆ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.

ವಿಶಾಲ್‌ ಕುಮಾರ್‌, ಈಡಿಗ ಸಂಘದ ಅಧ್ಯಕ್ಷ ಮಟ್ಟಿನಮನೆ ರಾಮಚಂದ್ರ, ಮುಖಂಡರಾದ ಚಿಪ್ಪಿನಕೊಡಿಗೆ ವೆಂಕಟೇಶ್‌, ಗೀತಾ ರಾಘವೇಂದ್ರ, ಕುರುವಳ್ಳಿ ನಾಗರಾಜ್‌, ಪೂರ್ಣೇಶ್‌ ಪೂಜಾರಿ, ಲೋಕೇಶ್‌, ಅಕ್ಷಯ್‌, ನಾಗವೇಣಿ, ಹೇಮರಾಜ್‌, ಶ್ರೀಧರ್‌ ಇದ್ದರು.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post