ಇಂದು ವಿಹಂಗಮದ ಜಂಗಮ ಗೌರವ ಗ್ರಂಥ ಬಿಡುಗಡೆ

ಕಡಿದಾಳು ದಯಾನಂದರ ಸಾಧನೆಯ ಹೆಜ್ಜೆ ಆಧರಿಸಿದ ಪುಸ್ತಕ

ಕೃಷಿ, ಶೈಕ್ಷಣಿಕ, ಮಾರುಕಟ್ಟೆ, ಸಾಮಾಜಿಕ ಕ್ಷೇತ್ರದಲ್ಲಿ ಕಠಿಣ ಪರಿಶ್ರಮದ ಮೂಲಕ ಕಡಿದಾಳು ದಯಾನಂದ ಸಾಧನೆ ಸ್ಮರಣೀಯ. 75 ವರ್ಷಗಳನ್ನು ಪೂರೈಸುತ್ತಿರುವ ಶುಭ ಸಂದರ್ಭದಲ್ಲಿ ಅವರ ಕುರಿತ ವಿಹಂಗಮದ ಜಂಗಮ ಗೌರವ ಗ್ರಂಥ ಬಿಡುಗಡೆ ಸಮಾರಂಭ ಶನಿವಾರ ಸಂಜೆ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ನಡೆಯಲಿದೆ.

ವಿವಿಧ ಕ್ಷೇತ್ರದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ಯಶಸ್ವಿಗೊಳಿಸಿದ ಸಾಧಕ. ಪಟ್ಟು ಹಿಡಿದು ತಾನು ತೆಗೆದುಕೊಂಡ ಸವಾಲನ್ನು ಪೂರ್ಣಗೊಳಿಸಿ ನಂಬಿದವರಿಗೆ ಧೈರ್ಯ ತುಂಬುವ ಸ್ವಭಾವ ಅವರದ್ದಾಗಿದೆ. ಓರ್ವ ಸಾಮಾನ್ಯ ಕೃಷಿಕನಾಗಿ ವಿದೇಶಗಳ ಪ್ರವಾಸ ಕೈಗೊಂಡಿದ್ದಾರೆ. ಅಲ್ಲಿನ ಕೃಷಿ ತಂತ್ರಗಾರಿಕೆಯನ್ನು ಗ್ರಾಮೀಣ ಪ್ರದೇಶಕ್ಕೆ ಹೇಗೆ ಅಳವಡಿಸಿಕೊಳ್ಳಬೇಕು ಎಂಬ ಸಾಕ್ಷಿ ಪ್ರಜ್ಞೆಯಾಗಿ ಉಳಿದಿದ್ದಾರೆ.

ಸೊಪ್ಪುಗುಡ್ಡೆಯ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಫೆಬ್ರವರಿ 11ರ ಶನಿವಾರ ವಿಹಂಗಮದ ಜಂಗಮ ಕೃತಿಯನ್ನು ಕರ್ನಾಟಕದ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.‌ ನಾಗಮೋಹನ ದಾಸ್‌ ಬಿಡುಗಡೆ ಮಾಡಲಿದ್ದಾರೆ. ದಯಾನಂದರ ಕುರಿತು ಬೆಂಗಳೂರು ಲಾಲ್‌ಬಾಗ್‌ ಸಸ್ಯತೋಟದ ಉಪನಿರ್ದೇಶಕಿ ಜಿ.ಕುಸುಮ ಮಾತನಾಡುತ್ತಾರೆ. ಮುಖ್ಯ ಅತಿಥಿಯಾಗಿ ಗೃಹಸಚಿವ ಆರಗ ಜ್ಞಾನೇಂದ್ರ, ಮಾಜಿ ಸಚಿವ ಕಿಮ್ಮನೆ ರತ್ನಾಕರ ಭಾಗವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಗೌರವಗ್ರಂಥ ಸಮಿತಿಯ ಗೌರವಾಧ್ಯಕ್ಷ ಶ್ರೀಕಂಠ ಕೂಡಿಗೆ ವಹಿಸಲಿದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post