ಮಹಿಷಿ ಸೇತುವೆ ಬಳಿ ಎರಡು ಮರಳು ಲಾರಿ ವಶ

ಮುಂಡೊಳ್ಳಿ ಕ್ವಾರಿಯ ಮರಳು...?
ನಿಯಂತ್ರಣ ತಪ್ಪಿದ ಮರಳು ಮಾಫಿಯಾ

ತೀರ್ಥಹಳ್ಳಿ ತಾಲ್ಲೂಕಿನಾದ್ಯಂತ ಮರಳು ಮಾಫಿಯಾ ಎದ್ವತದ್ವ ನಡೆಯುತ್ತಿದೆ. ಅನುಮತಿ ಇಲ್ಲದೆ ಅಕ್ರಮ ಮರಳು ಸಾಗಾಟ ದಿನೇದಿನೇ ಹೆಚ್ಚುತ್ತಿದೆ‌. ಗಣಿ ಇಲಾಖೆ, ಪೊಲೀಸ್ ಇಲಾಖೆ, ಅರಣ್ಯ ಇಲಾಖೆ ಕಣ್ಣುತಪ್ಪಿಸಿ ನಡೆಯುತ್ತಿರುವ ಈ ದಂಧೆಗೆ ಬ್ರೇಕ್ ಹಾಕುವವರು ಇಲ್ಲದಂತಿದೆ.

ಇಂದು ಸಂಜೆ ಮುಂಡೊಳ್ಳಿ ಕ್ವಾರಿಯಿಂದ ಹೋಗುತ್ತಿತ್ತು ಎನ್ನಲಾದ ಎರಡು ಲಾರಿಗಳನ್ನು ಮಂಡಗದ್ದೆ ಅರಣ್ಯ ಇಲಾಖೆ ಹೆದ್ದೂರು-ಮಹಿಷಿ ಹೊಸ ಸೇತುವೆ ಬಳಿ ವಶಪಡಿಸಿಕೊಂಡಿದೆ. ಪಟ್ಟಣದಲ್ಲಿ ಎಲ್ಲೆಂದರಲ್ಲಿ ಬ್ಯಾರಿಕೇಡ್ ಹಾಕಲಾಗಿದ್ದರು ಅಕ್ರಮ ಸಾಗಾಟ ಎಗ್ಗಿಲ್ಲದೆ ನಡೆಯುತ್ತಿದೆ. ನಿರಂತರ ಅಕ್ರಮ ಮರಳು ಸಾಗಾಣೆಯಾಗುತ್ತಿದ್ದರು ತಡೆಹಿಡಿಯಲು ಆಡಳಿತ ವಿಫಲವಾದಂತಿದೆ.

ಗೃಹಸಚಿವ ಆರಗ ಜ್ಞಾನೇಂದ್ರ ತವರು ಕ್ಷೇತ್ರದಲ್ಲಿ ಅಧಿಕಾರಿಗಳು ಲಜ್ಜೆ ಬಿಟ್ಟಂತೆ ವರ್ತಿಸುತ್ತಿದ್ದು, ಗೃಹಸಚಿವರ ಘನತೆ ಹಾಳುಮಾಡಲು ಪಣತೊಟ್ಟಂತಿದೆ. ಅಕ್ರಮ ಮರಳು ಸಾಗಣೆ ಅಧಿಕಾರಿಗಳ ಚಿತಾವಣೆಯಿಂದ ನಡೆಯುತ್ತಿದೆಯೇ ಎಂಬ ಅನುಮಾನ ಸಾರ್ವಜನಿಕವಾಗಿ ವ್ಯಕ್ತವಾಗುತ್ತಿದೆ. ಕೂಡಲೇ ಗೃಹಸಚಿವರು ಗಮನ ಹರಿಸಬೇಕಾಗಿದೆ. 

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post