“ಮೈಚಳಿ ಬಿಟ್ಟು ಕೆಲಸ ಮಾಡಿ”

ಕ್ಷೇತ್ರ ಮುಖಂಡರಿಗೆ ಮಾಜಿ ಹೆಚ್.ಡಿ. ಕುಮಾರಸ್ವಾಮಿ ಸಿಎಂ ಕರೆ

ವಿಧಾನಸಭಾ ಚುನಾವಣೆ ಇನ್ನೇನು ಕೆಲಸವೇ ದಿನಗಳಲ್ಲಿ ಘೋಷಣೆ ಮಾಡಲಿದ್ದು ಜಾತ್ಯಾತೀತ ಜನತಾದಳ ರಾಜ್ಯಕ್ಕೆ ನೀಡಿರುವ ಕೊಡುಗೆಗಳನ್ನು ಜನರ ಮುಂದಿಟ್ಟು ಜನಾಭಿಪ್ರಾಯ ರೂಪಿಸಿದ ಎಂದು ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಇತ್ತೀಚೆಗೆ ಹೊಡಿಯಾಳದಲ್ಲಿ ತಾಲ್ಲೂಕು ಅಧ್ಯಕ್ಷ ಕುಣಜೆ ಕಿರಣ್‌, ಜಿಲ್ಲಾ ಕಾರ್ಯಾಧ್ಯಕ್ಷ ರಾಮಕೃಷ್ಣ ಮತ್ತು ತಾಲ್ಲೂಕು ಯುವ ಜನತಾದಳ ಅಧ್ಯಕ್ಷ ತಲಬಿ ರಾಘವೇಂದ್ರರಿಗೆ ಸೂಚಿಸಿದ್ದಾರೆ.

ಶೃಂಗೇರಿಗೆ ಪಂಚರತ್ನ ಸಾಗುವ ಮಾರ್ಗದಲ್ಲಿ ಇವರುಗಳ ಜೊತೆಗೆ ಆತ್ಮೀಯವಾಗಿ ಮಾತನಾಡಿದ ಅವರು ತೀರ್ಥಹಳ್ಳಿ ಕ್ಷೇತ್ರದಲ್ಲಿ ಜೆಡಿಎಸ್‌ ಇಂದಿಗೂ ಭದ್ರ ಭುನಾದಿ ಹೊಂದಿದೆ. ನಿಷ್ಟಾವಂತ ಕಾರ್ಯಕರ್ತರು ಹಾಗೂ ಹಳೆಯ ಮುಖಂಡರಿಗೆ ಆತ್ಮವಿಶ್ವಾಸವನ್ನು ತುಂಬಿ ಮರಳಿ ಪಕ್ಷದ ಸಂಘಟನೆಗೆ ಕರೆತರಬೇಕಿದೆ. ತಾಲ್ಲೂಕಿನ ಜ್ವಲಂತ ಸಮಸ್ಯೆಗಳನ್ನು ಮುಂದಿಟ್ಟು ಮುನ್ನುಗ್ಗಬೇಕು ಎಂಬ ಹಿತವಚನವನ್ನು ಹೆಚ್.ಡಿ. ಕುಮಾರಸ್ವಾಮಿ ನೀಡಿದ್ದಾರೆ ಎಂದು ತಲಬಿ ರಾಘವೇಂದ್ರ ಪ್ರಕಟಣೆಯಲ್ಲಿ ಹೇಳಿದ್ದಾರೆ.

ತೀರ್ಥಹಳ್ಳಿ ಕ್ಷೇತ್ರದಲ್ಲಿ ಪಂಚರತ್ನ ಯಾತ್ರೆಗೆ ಸಿಕ್ಕ ಸ್ವಾಗತ, ಕಾರ್ಯಕರ್ತರ ಉತ್ಸಾಹ, ಬೃಹತ್‌ ಅಡಿಕೆ ಹಾರ ಎಲ್ಲವನ್ನು ಮೆಲುಕು ಹಾಕಿ ಸಂತೋಷ ವ್ಯಕ್ತಪಡಿಸಿದ ಕುಮಾರಸ್ವಾಮಿ ಈ ಯಶಸ್ಸಿಗಾಗಿ ತೀರ್ಥಹಳ್ಳಿಯ ಪ್ರಜ್ಞಾವಂತ ಜನತೆಗೆ ಕೃತಜ್ಞತೆ ಹೇಳಿದ್ದಾರೆ ಅಲ್ಲದೇ ತಾಲ್ಲೂಕು ಅಧ್ಯಕ್ಷ ಕಿರಣ್‌ ಪ್ರಭಾಕರ್‌, ನಿಯೋಜಿತ ವಿಧಾನಸಭಾ ಅಭ್ಯರ್ಥಿ ರಾಜಾರಾಮ್‌ ಯಡೂರು, ಜಿಲ್ಲಾ ಮುಖಂಡ ಹೆದ್ದೂರು ನಟರಾಜ್‌ ಸೇರಿದಂತೆ ಪಕ್ಷದ ಎಲ್ಲರಿಗೂ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post