ಕ್ರೀಡಾಂಗಣ ಅಭಿವೃದ್ಧಿಗೆ 6 ಕೋಟಿ ಕೇಂದ್ರಕ್ಕೆ ಪ್ರಸ್ತಾವನೆ

ತೀರ್ಥಹಳ್ಳಿಗೆ ಬರಲಿದೆ ಹೆಲಿಪ್ಯಾಡ್‌
ಒಳಾಂಗಣ ಕ್ರೀಡಾಂಗಣಕ್ಕೆ ಆರಗ ಒತ್ತು

ತೀರ್ಥಹಳ್ಳಿ ತಾಲ್ಲೂಕಿನ ಸಾರ್ವಜನಿಕ ಕ್ರೀಡಾಂಗಣದಲ್ಲಿ ಹೆಲಿಪ್ಯಾಡ್ ಮತ್ತು ಒಳಾಂಗಣ ಕ್ರೀಡಾಂಗಣಕ್ಕೆ ಜಾಗ ಗುರುತಿಸಲಾಗುತ್ತಿದೆ. ಕ್ರೀಡಾಂಗಣ ಉನ್ನತೀಕರಣಕ್ಕಾಗಿ ಕೇಂದ್ರ ಸರ್ಕಾರಕ್ಕೆ 6 ಕೋಟಿ ಅನುಮೋದನೆ ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ. ತೀರ್ಥಹಳ್ಳಿ ಸಾಂಸ್ಕೃತಿಕವಾಗಿ ಬೆಳೆದಿದ್ದರು, ಪ್ರತಿನಿತ್ಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತಿದೆ. ಅದೇ ರೀತಿ ಇನ್ನು ಮುಂದೆ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದ್ದು ಅಂತರಾಷ್ಟ್ರೀಯ ಮಾದರಿಯಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡಲು ಯೋಜನೆ ಸಿದ್ಧಪಡಿಸಲಾಗುತ್ತಿದೆ ಎಂದು ಭಾನುವಾರ ಪಟ್ಟಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 1 ಕೋಟಿ ವೆಚ್ಚದಲ್ಲಿ ಸಾರ್ವಜನಿಕ ಕ್ರೀಡಾಂಗಣದ ಸುತ್ತ ರಾಜಕಾಲುವೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಹಿಂದೆ ಪಟ್ಟಣದಲ್ಲಿ ಪ್ರೌಢಶಾಲಾ ಕ್ರೀಡಾಂಗಣ ಎಲ್ಲಾ ಕ್ರೀಡಾ ಚಟುವಟಿಕೆಗೆ ಬಳಕೆಯಾಗುತ್ತಿತ್ತು. ಸೌಂಡ್ಸ್‌ ಮತ್ತು ಗಲಾಟೆ ಗದ್ದಲದಿಂದ ಶಾಲಾ ಮಕ್ಕಳಿಗೆ ತೊಂದರೆಯಾಗಿತ್ತು. 1994ರಲ್ಲಿ ಮೊದಲ ಬಾರಿಗೆ ಶಾಸಕನಾದ ನಂತರ ಕೆರೆ ಮತ್ತು ಭೂದಾನ ಜಮೀನು ದಾಖಲೆಗಳನ್ನು ಕ್ರೀಡಾ ಇಲಾಖೆಗೆ ವರ್ಗಾಯಿಸಿ ಕ್ರೀಡಾಂಗಣ ನಿರ್ಮಾಣಕ್ಕೆ ಅವಕಾಶ ಮಾಡಿಸಿಕೊಟ್ಟಿದ್ದೇನೆ. ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಬೇಕಿದ್ದು ಅನುದಾನ ಮಂಜೂರಾತಿಗಾಗಿ ಪ್ರಯತ್ನಿಸುತ್ತಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಶೀಲ‌‌ ಶೆಟ್ಟಿ, ಉಪಾಧ್ಯಕ್ಷ ಟಿ. ರೆಹಮತ್ ಉಲ್ಲಾ ಅಸಾದಿ, ಸದಸ್ಯರಾದ ಸಂದೇಶ್ ಜವಳಿ, ಸೊಪ್ಪುಗುಡ್ಡೆ ರಾಘವೇಂದ್ರ, ಯತಿರಾಜ್, ಜ್ಯೋತಿ ಇದ್ದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post