ಮೈಸೂರು ವಿವಿ ಉಪ ಕುಲಪತಿಯಾಗಿ ಪ್ರೊ. ಲೋಕನಾಥ್‌

ಕುವೆಂಪು ಬಳಿಕ ಉನ್ನತ ಹುದ್ದೆಗೇರಿದ ಕೀರ್ತಿ
ತೀರ್ಥಹಳ್ಳಿ ತಾಲ್ಲೂಕಿಗೆ ಮತ್ತೊಂದು ಪ್ರತಿಷ್ಠೆಯ ಗರಿ

ತೀರ್ಥಹಳ್ಳಿ ತಾಲ್ಲೂಕಿನ ನೆರಟೂರು ಗ್ರಾಮದ ಪ್ರೊ. ಲೋಕನಾಥ್‌ ರಾಜ್ಯದ ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾಲಯದ ನೂತನ ಉಪಕುಲಪತಿಗಳಾಗಿ ಆಯ್ಕೆಯಾಗಿದ್ದಾರೆ. ಮೂಲತಃ ಭೌತಶಾಸ್ತ್ರದ ಪ್ರೊಪೇಸರ್‌ ಹಾಗೂ ವಿಜ್ಞಾನಿಯಾಗಿ 2014ರಲ್ಲಿ ಕರ್ನಾಟಕ ಸರ್ಕಾರದ ಸರ್.ಸಿ.ವಿ. ರಾಮನ್‌ ಯುವ ವಿಜ್ಞಾನಿ ರಾಜ್ಯ ಪ್ರಶಸ್ತಿಯನ್ನು ಕೂಡ ಪಡೆದಿದ್ದಾರೆ. ಅಲ್ಲದೇ ದೇಶ ವಿದೇಶದಲ್ಲಿ ಹತ್ತು ಹಲವು ವಿಚಾರ ಸಂಕಿರಣಗಳು ಹಾಗೂ ಉಪನ್ಯಾಸಗಳಲ್ಲಿ ಪಾಲ್ಗೊಂಡಿದ್ದಾರೆ.

ಈ ಮೊದಲು ತೀರ್ಥಹಳ್ಳಿಯವರೇ ಆದ ಮೇರು ಸಾಹಿತಿ, ಕನ್ನಡಕ್ಕೆ ಮೊದಲ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಕುವೆಂಪು ಅವರು ಮೈಸೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ಕಾರ್ಯ ನಿರ್ವಹಿಸಿದ್ದರಲ್ಲದೇ ಕ್ಯಾಂಪಸ್ಸಿಗೆ ಮಾನಸ ಗಂಗೋತ್ರಿ ಎಂಬ ಹೆಸರು ಬರಲು ಕೂಡ ಕಾರಣರಾಗಿದ್ದರು.

ಕುವೆಂಪು ಬಳಿಕ ತೀರ್ಥಹಳ್ಳಿ ತಾಲ್ಲೂಕಿನವರಾಗಿ ಈ ಉನ್ನತ ಹುದ್ದೆಗೆ ಏರಿದ ಕೀರ್ತಿಗೆ ಪ್ರೊ. ಲೋಕನಾಥ್‌ ಭಾಜನರಾಗಿದ್ದಾರೆ. ಅವರು ನೆರಟೂರು ಗ್ರಾಮದ ಕೃಷ್ಣಪ್ಪಗೌಡ ದಂಪತಿಗಳ ಪುತ್ರ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post