ಗೃಹಸಚಿವರಿದ್ದ ವೇದಿಕೆಯಲ್ಲಿ ಪಲ್ಟಿಹೊಡೆದ ಅತಿಥಿಗಳು

ಗುದ್ದಲಿ ಪೂಜೆ ಮುನ್ನ ವಿದ್ಯುತ್ ಕಂಬಕ್ಕೆ ಬೆಂಕಿ

ಸೋಮವಾರ ಕೋಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಗೃಹಸಚಿವ ಆರಗ ಜ್ಞಾನೇಂದ್ರ ಚಾಲನೆ ನೀಡುವ ಮುನ್ನ ಹಲವು ಗೊಂದಲ ನಡೆದು ಹೋದವು.

ಕೋಣಂದೂರು ಚತುಷ್ಪಥ ರಸ್ತೆ ಉದ್ಘಾಟನೆ ಕಾರ್ಯಕ್ರಮಕ್ಕೆ ಗುದ್ದಲಿ ಪೂಜೆ ನಡೆಸಲು ಗೃಹಸಚಿವರು ಆಗಮಿಸುತ್ತಿದ್ದಂತೆ ವಿದ್ಯುತ್ ಕಂಬದಲ್ಲಿ ಬೆಂಕಿ ಹೊತ್ತಿಕೊಂಡು ಕೆಲ ಕಾಲ ಗೊಂದಲದ ವಾತಾವರಣ ಸೃಷ್ಟಿಯಾಯಿತು. 30 ಹಾಸಿಗೆಯ ಮಾದರಿ ಸಮುದಾಯ ಆಸ್ಪತ್ರೆ, ಹಾಗೂ ಶುದ್ಧ ಕುಡಿಯುವ ನೀರು ಘಟಕ ಉದ್ಘಾಟಿಸಿ ವೇದಿಕೆ ಕಾರ್ಯಕ್ರಮ ಇನ್ನೇನು ಆರಂಭಗೊಳ್ಳಬೇಕು ಎನ್ನುವಷ್ಟರಲ್ಲಿ ಹಿಂಬದಿ ಅತಿಥಿಗಳಿಗೆ ಹಾಕಿದ್ದ ಛೇರು ಇದ್ದಕ್ಕಿದ್ದ ಹಾಗೆ ಪಲ್ಟಿ ಹೊಡೆಯಿತು. ಛೇರು ಪಲ್ಟಿ‌ಹೊಡದ ಕಾರಣ ಅದರ ಮೇಲೆ ಕುಳಿತಿದ್ದ ಅತಿಥಿಗಳು ಕೆಳಗೆ ಬಿದ್ದು ಇನ್ನಷ್ಟು ಗೊಂದಲ ಸೃಷ್ಟಿಯಾಯಿತು. ಕೆಳಗೆ ಬಿದ್ದು ಪಲ್ಪಿಹೊಡೆದ ಅತಿಥಿಗಳನ್ನು ವೇದಿಕೆಯ ಮೇಲಿದ್ದವರು ಕೈಹಿಡಿದು ಮೇಲಕ್ಕೆತ್ತಿದರು. ಒಟ್ಟಿನಲ್ಲಿ ಕಾರ್ಯಕ್ರಮ ಆರಂಭಕ್ಕೂ ಮುನ್ನ ಹಲವು ವಿಘ್ನ ನಡೆಯಿತು.

ಗೃಹಸಚಿವರು ಭಾಗವಹಿಸುವ ಕಾರ್ಯಕ್ರಮದಲ್ಲಿ ಹಲವು ಶಿಷ್ಟಾಚಾರ ಇರುತ್ತದೆ. ವೇದಿಕೆ ಹಾಗೂ ಛೇರುಗಳನ್ನು ಪರಿಶೀಲಿಸುವ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದು ಮೇಲ್ನೋಟಕ್ಕೆ ಕಾಣಿಸುತ್ತಿತ್ತು ಎಂದು ಸಾರ್ವಜನಿಕರು ದೂರಿದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post