ಗಮನ ಹರಿಸದ ಆಡಳಿತ

ಮಲಾಪಹಾರಿ ನೀರು ಪೋಲು
ಆಗುಂಬೆ ಗ್ರಾಮದಲ್ಲಿ ಕುಡಿಯುವ ನೀರು ರಸ್ತೆ ಪಾಲು

ದಕ್ಷಿಣದ ಚಿರಾಪುಂಜಿ ಆಗುಂಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಒಂದು ವರ್ಷದಿಂದ ಕುಡಿಯುವ ನೀರು ರಸ್ತೆ ಪಾಲಾಗುತ್ತಿದೆ. ಅತೀ ಹೆಚ್ಚು ಮಳೆ ಸುರಿಯುವ ಪ್ರದೇಶವಾಗಿದ್ದರು ಹಲವು ಮಜಿರೆ ಗ್ರಾಮದಲ್ಲಿ ಕುಡಿಯುವ ನೀರಿಗೆ ತೀವ್ರ ಕುಡಿಯುವ ನೀರಿಗೆ ಸಮಸ್ಯೆ ಎದುರಾಗಿದೆ. ಇಂತಹ ಅನಾವೃಷ್ಟಿ ಕಾಲದಲ್ಲೂ ಗ್ರಾಮ, ತಾಲ್ಲೂಕು ಆಡಳಿತ ತಲೆಕೆಡಿಸಿಕೊಂಡಂತೆ ಕಾಣಿಸುತ್ತಿಲ್ಲ.

ಗ್ರಾಮಸ್ಥರು ಹಲವು ತಿಂಗಳಿನಿಂದ ದೂರು ಸಲ್ಲಿಸುತ್ತಿದ್ದರು ಇಲ್ಲಿಯವರೆಗೆ ಆಡಳಿತ ಸ್ಪಂದಿಸುತ್ತಿಲ್ಲ. ಆಗುಂಬೆಯ ರಸ್ತೆಯ ಮಧ್ಯೆಯೇ ಪೈಪ್‌ ಒಡೆದು ನೀರು ಅನಾವಶ್ಯಕ ಪೋಲಾಗುತ್ತಿದೆ. ವಿಶೇಷವೆಂದರೆ ಆಗುಂಬೆ, ಶೃಂಗೇರಿ, ಉಡುಪಿ ಮಾರ್ಗ ಸಂಪರ್ಕಿಸುವ ಕೂಡ ರಸ್ತೆ ಹಾಗೂ ಆಗುಂಬೆ ಗ್ರಾಮ ಪಂಚಾಯಿತಿ ಮುಂಭಾಗದಲ್ಲೇ ರಸ್ತೆಯ ಮಧ್ಯೆ ನೀರು ನಿಲ್ಲುತ್ತಿದೆ. ಸುಗಮ ಸಂಚಾರಕ್ಕೂ ಇದು ತೊಂದರೆ ನೀಡುತ್ತಿದ್ದು ಆಡಳಿತ ಮಾತ್ರ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ದೂರುತ್ತಿದ್ದಾರೆ.

ರಸ್ತೆಯ ನಡುವೆ ಆಗಿದ್ದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅನುಮತಿ ಕೂಡ ಬೇಕಾಗಿದ್ದು ಆಡಳಿತ ಯಂತ್ರ ಮಾತ್ರ ತಟಸ್ಥ ನಿಲುವು ಹೊಂದಿದಂತಿದೆ. ಆಗುಂಬೆ ಸುತ್ತಮುತ್ತಲು ಅತೀ ಹೆಚ್ಚು ಮಳೆಯಾಗುತ್ತಿದ್ದರು ಅಂತರ್ಜಲ ಪ್ರಮಾಣ ವೃದ್ಧಿಯಾಗುತ್ತಿಲ್ಲ. ಇದರಿಂದಾಗಿ ಗ್ರಾಮದಲ್ಲಿ ನೀರಿಗೆ ಆಹಾಕಾರ ಎದುರಾಗಿದೆ. ಆಗುಂಬೆ ಪರಿಸರ ಅತ್ಯಂತ ಸೂಕ್ಷ ವಲಯವಾಗಿದ್ದರು ಪ್ರಕೃತಿ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿದಂತೆ ಕಾಣಿಸುತ್ತಿಲ್ಲ. ಗುಡ್ಡ ಜರಿತ, ಕಾಡುನಾಶ, ಅಭಿವೃದ್ಧಿ ಕಾಮಗಾರಿಗಳಿಂದ ಪರಿಸರಕ್ಕೆ ಹಾನಿ ಮುಂತಾದ ಸಮಸ್ಯೆಗಳಿದ್ದರು ಕ್ರಮ ವಹಿಸದಿರುವುದು ಹಲವು ಅನುಮಾನಕ್ಕೆ ಕಾರಣವಾದಂತಿದೆ.



ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post