ಸಿದ್ದರಾಮಯ್ಯ- ಆರಗ ಟ್ವೀಟರ್ WAR

ಆರಗ ಜ್ಞಾನೇಂದ್ರ ಕೂಡಲೇ ರಾಜೀನಾಮೆ ನೀಡಬೇಕು
ಸಾಮೂಹಿಕ ಅತ್ಯಾಚಾರಿಗಳಿಗೆ, ರೌಡಿ ಶೀಟರ್, ಕೊಲೆಗಡುಕರಿಗೆ ಬಿಜೆಪಿ ರತ್ನಗಂಬಳಿ
ಕಂಬಳಿಹುಳ ಬಿಟ್ಟಂತೆ ಎಗರುತ್ತಿದ್ದ ಅಸಮರ್ಥ ಗೃಹಸಚಿವ ಆರಗ ಜ್ಞಾನೇಂದ್ರ - ಸಿದ್ದರಾಮಯ್ಯ
ರಾಜಕೀಯ ದುರುದ್ದೇಶಕ್ಕೆ 30 ಸಾವಿರ ಜನರ ಮೇಲೆ‌‌ ರೌಡಿಶೀಟರ್ ಹಾಕಿಸಿದವರಿಗೆ ನನ್ನ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ- ಆರಗ

ಬೆಂಗಳೂರಿನಲ್ಲಿ ಒಂದು ವಾರದ ಅಂತರದಲ್ಲಿ  ಎರಡು ಸಾಮೂಹಿಕ ಅತ್ಯಾಚಾರ ಪ್ರಕರಣ ವರದಿಯಾಗಿದೆ. ಚುನಾವಣೆಯ ನೀತಿ ಸಂಹಿತೆಯಿಂದ ಚೆಕ್ ಪೋಸ್ಟ್, ಭದ್ರತೆ ಹೆಚ್ಚಿದ್ದರು ಸುಮಾರು 60 ಕಿಲೋ ಮೀಟರ್ ಚಲಿಸಿದ ವಾಹನದಲ್ಲಿ ಅತ್ಯಾಚಾರ ನಡೆದಿದೆ. ಇದನ್ನು ಪ್ರಶ್ನಿಸಿ ರಾಜ್ಯಾದ್ಯಂತ ದೊಡ್ಡ ಧ್ವನಿ ಕೇಳಿಬಂದಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿಯೇ ಇದೆ ಎಂದು ನಿರಂತರ ಬೆನ್ನುತಟ್ಟಿಕೊಂಡು ಬರುತ್ತಿದ್ದ ತೀರ್ಥಹಳ್ಳಿಯ ಶಾಸಕ, ರಾಜ್ಯ ಸರ್ಕಾರದ ಗೃಹಸಚಿವ ಆರಗ ಜ್ಞಾನೇಂದ್ರರ ಕಾರ್ಯವೈಖರಿ ಪ್ರಶ್ನಿಸಿ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟರ್ ಸಮರಕ್ಕೆ ಇಳಿದಿದ್ದಾರೆ.

ಸಾಮೂಹಿಕ ಅತ್ಯಾಚಾರಗಳ ಕುರಿತು ಆತಂಕ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಟ್ವಿಟ್ಟರ್​ ಖಾತೆಯಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು. ಚುನಾವಣೆಯ ಹಿನ್ನಲೆಯಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ನಿಷ್ಕ್ರೀಯತೆ ಅತ್ಯಂತ ಅಪಾಯಕಾರಿ. ಚುನಾವಣಾ ಆಯೋಗ ಪೊಲೀಸ್ ಇಲಾಖೆಯ ಮೇಲೆ ಹೆಚ್ಚಿನ ನಿಗಾ ಇಡಬೇಕು ಎಂದು ಆಗ್ರಹಿಸಿದ್ದಾರೆ.

ಈ ಪ್ರಶ್ನೆಗಳಿಗೆ ಪ್ರತ್ಯುತ್ತರ ನೀಡಿರುವ ಆರಗ ಜ್ಞಾನೇಂದ್ರ ಸಿದ್ದರಾಮಯ್ಯ ಅವಧಿಯಲ್ಲಿ, ನಿಸ್ಪೃಹ ಹಾಗೂ ದಕ್ಷ ಪೊಲೀಸ್ ಅಧಿಕಾರಿಗಳ ನೈತಿಕ ಸ್ಥೈರ್ಯ ಕುಸಿಯುವಂತೆ ಮಾಡಲಾಗಿತ್ತು. ಡಿವೈಎಸ್ಪಿ ಗಣಪತಿ, ಕಲ್ಲಪ್ಪ ಹಂಡಿಬಾಗ್, ಮಲ್ಲಿಕಾರ್ಜುನ್ ಬಂಡೆಯವರಂತಹ ದಕ್ಷ ಅಧಿಕಾರಿಗಳನ್ನು ಕಳೆದುಕೊಂಡ ಬಗ್ಗೆ ಚಕಾರವೆತ್ತದ ನಿಮಗೆ, ಮತ್ತೊಬ್ಬರ ವಿರುದ್ಧ ಬೆರಳು ತೋರಿಸುವ ವ್ಯರ್ಥ ಪ್ರಯತ್ನ ಯಾಕೆ? ರಾಜಕೀಯ ಲಾಭಕ್ಕಾಗಿ ಸುಮಾರು 30 ಸಾವಿರ ಅಮಾಯಕರನ್ನು ರೌಡಿ ಶೀಟರ್ ಪಟ್ಟಿಗೆ ಸೇರಿಸಿ, ಕಿರುಕುಳ ನೀಡಿದ್ದನ್ನು ನೆನಪಿಸಿಕೊಳ್ಳಿ ಎಂದು ಕಿಡಿ ಕಾರಿದ್ದಾರೆ.


ಇಬ್ಬರ ಟ್ವೀಟರ್ ಸಂಭಾಷಣೆ ಈ ಕೆಳಗಿನಂತಿದೆ.

1/5 ಬೆಂಗಳೂರಿನ ಕಗ್ಗಲೀಪುರದ ಬಾಲಕಿಯ ಅತ್ಯಾಚಾರ ಪ್ರಕರಣ ನಡೆದು ವಾರ ಕಳೆದಿಲ್ಲ ಅಷ್ಟರಲ್ಲೇ ಕೋರಮಂಗಲದ ಯುವತಿಯನ್ನು ನಾಲ್ವರು ರಾಕ್ಷಸರು ಅತ್ಯಾಚಾರಗೈದು ಅಟ್ಟಹಾಸ ಮೆರೆದಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಜೀವಂತವಾಗಿದೆ ಎಂಬ ನಂಬಿಕೆಯನ್ನೇ ಜನ ಕಳೆದುಕೊಂಡಿದ್ದಾರೆ.

2/5 ದುಷ್ಟರನ್ನು, ಸಮಾಜಘಾತುಕರನ್ನು ಹಿಡಿದು ಸದೆಬಡಿಯಬೇಕಿದ್ದ @BJP4Karnataka ಸರ್ಕಾರ, ಬದಲಿಗೆ ರೌಡಿ ಶೀಟರ್ ಗಳು, ಕೊಲೆಗಡುಕರನ್ನು ರತ್ನಗಂಬಳಿ ಹಾಸಿ, ಸನ್ಮಾನಿಸಿ ಪಕ್ಷಕ್ಕೆ ಸೇರಿಸಿಕೊಂಡಿದ್ದರ ಫಲವನ್ನು ಜನಸಾಮಾನ್ಯರು ಉಣ್ಣಬೇಕಿದೆ.

#LawAndOrder

3/5 ರಾಜ್ಯದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆ ಬಗ್ಗೆ ಸದನದಲ್ಲಿ ಪ್ರಶ್ನೆ ಮಾಡಿದಾಗ ಮೈಮೇಲೆ ಕಂಬಳಿಹುಳ ಬಿದ್ದವರಂತೆ ಕುಣಿದಾಡಿ, ಎಗರಾಡಿದ ಗೃಹ ಸಚಿವ @JnanendraAraga ಅವರ ಅಸಾಮರ್ಥ್ಯವೇ ಈ ಎಲ್ಲಾ ದೌರ್ಜನ್ಯಗಳಿಗೆ ಕಾರಣ.

#LawAndOrder

4/5 ಕಠಿಣ ಕ್ರಮದ ಭರವಸೆ ನೀಡುವ ಗೃಹಸಚಿವರು ಸ್ಯಾಂಟ್ರೋ ರವಿ ಹೇಳುವ ವರ್ಗಾವಣೆ ಮಾಡಿಸಲಷ್ಟೇ ಶಕ್ತರು ಎಂಬ ಜನರ ಮಾತು ನಿಜವಾಗಿದೆ.

ಸಾಮರ್ಥ್ಯ, ನೈತಿಕತೆ ಈ ಯಾವುದೂ ಇಲ್ಲದೆ ಕುರ್ಚಿಗೆ ಅಂಟಿಕೊಂಡು ಕೂತಿರುವ @JnanendraAraga ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸುತ್ತೇನೆ.

#LawAndOrder

5/5 ಗೃಹ ಸಚಿವ @JnanendraAraga ಅವರ ಅದಕ್ಷತೆಯಿಂದಾಗಿ ರಾಜ್ಯದ ಪೊಲೀಸ್ ಇಲಾಖೆ ಸಂಪೂರ್ಣವಾಗಿ ಹಾದಿ ತಪ್ಪಿದೆ. ಚುನಾವಣಾ ಕಾಲದಲ್ಲಿ ಈ ರೀತಿಯ ಪೊಲೀಸ್ ನಿಷ್ಕ್ರಿಯತೆ ಅಪಾಯಕಾರಿಯಾದುದು. ಆದ್ದರಿಂದ

ಚುನಾವಣಾ ಆಯೋಗ ಪೊಲೀಸ್  ಇಲಾಖೆಯ‌ ಕಾರ್ಯನಿರ್ವಹಣೆಯ ಮೇಲೆ ನಿಗಾ ಇಡಬೇಕು ಎಂದು ಮನವಿ‌ ಮಾಡುತ್ತೇನೆ.

#LawAndOrder

ಮಾನ್ಯ @siddaramaiah ನವರು ಮುಖ್ಯಮಂತ್ರಿಯಾಗಿದ್ದಾಗ, ಗೃಹ ಸಚಿವರನ್ನು ಕೇವಲ ಹೆಸರಿಗಾಗಿ ಇರಿಸಿ, ಕಾನೂನುಬಾಹಿರವಾಗಿ ಗೃಹ ಇಲಾಖೆಯ ಉಸ್ತುವಾರಿಯನ್ನು ಸ್ವಯಂ ನಿವೃತ್ತಿ ಹೊಂದಿದವರ ಕೈಗೆ ಹಸ್ತಾಂತರಿಸಿದ್ದರು. ಇಂತಹವರಿಗೆ ನನ್ನ ಕಾರ್ಯವೈಖರಿ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ.@BSBommai @BJP4Karnataka @DKShivakumar

ಪೊಲೀಸ್ ಇಲಾಖೆಯ ಹುದ್ದೆಗಳನ್ನು ಕೇವಲ ಹಣವಂತರ ಕೈಗೆಟುಕುವಂತೆ ರೂಪಿಸಿದ್ದ ಅನಿಷ್ಟ ಪದ್ಧತಿಗೆ ಕೊಡಲಿಯೇಟು ನೀಡಿದ ನಮ್ಮ ಬಿಜೆಪಿ ಸರ್ಕಾರದ ಬಗ್ಗೆ ಶ್ರೀ ಸಿದ್ದರಾಮಯ್ಯನವರಿಗೆ ಕೋಪ ಬರುವುದು ಸಹಜ‌.

@kharge @INCKarnataka

ಶ್ರೀ ಸಿದ್ದರಾಮಯ್ಯವರ ಅವಧಿಯಲ್ಲಿ, ನಿಸ್ಪೃಹ ಹಾಗೂ ದಕ್ಷ ಪೊಲೀಸ್ ಅಧಿಕಾರಿಗಳ ನೈತಿಕ ಸ್ಥೈರ್ಯ ಕುಸಿಯುವಂತೆ ಮಾಡಲಾಗಿತ್ತು.

ಡಿವೈಎಸ್ಪಿ ಗಣಪತಿ, ಕಲ್ಲಪ್ಪ ಹಂಡಿಬಾಗ್, ಮಲ್ಲಿಕಾರ್ಜುನ್ ಬಂಡೆಯವರಂತಹ ದಕ್ಷ ಅಧಿಕಾರಿಗಳನ್ನು ಕಳೆದುಕೊಂಡ ಬಗ್ಗೆ ಚಕಾರವೆತ್ತದ ನಿಮಗೆ, ಮತ್ತೊಬ್ಬರ ವಿರುದ್ಧ ಬೆರಳು ತೋರಿಸುವ ವ್ಯರ್ಥ ಪ್ರಯತ್ನ ಯಾಕೆ?

ಸಚಿವರೇ ಅತ್ಯಾಚಾರ ಆರೋಪಕ್ಕೆ ಗುರಿಯಾಗಿ ರಾಜೀನಾಮೆ ನೀಡಿದ ಬಗ್ಗೆ ತುಟಿ ಬಿಚ್ಚದ ಇವರಿಗೆ ನನ್ನ ರಾಜೀನಾಮೆ ಕೇಳಲು ನಾಚಿಕೆಯಾಗಬೇಕು.

ನಮ್ಮ ಸರ್ಕಾರದ ಮೇಲೆ ಗೂಬೆ ಕೂರಿಸುವ ಮೊದಲು, ರಾಜಕೀಯ ಲಾಭಕ್ಕಾಗಿ ಸುಮಾರು 30 ಸಾವಿರ ಅಮಾಯಕರನ್ನು ರೌಡಿ ಶೀಟರ್ ಪಟ್ಟಿಗೆ ಸೇರಿಸಿ, ಕಿರುಕುಳ ನೀಡಿದ್ದನ್ನು ನೆನಪಿಸಿಕೊಳ್ಳಿ.

ಯಾರದೋ ತುಷ್ಟೀಕರಣಕ್ಕೆ ಟಿಪ್ಪು ಜಯಂತಿ ಆಚರಣೆಯನ್ನು ಬಲವಂತವಾಗಿ ಹೇರಿ, ಹಲವರ ಸಾವಿಗೆ ಹಾಗೂ ಅಶಾಂತಿಗೆ ಕಾರಣರಾದ ಶ್ರೀ ಸಿದ್ದರಾಮಯ್ಯನವರು ಕೇವಲ ರಾಜಕೀಯ ದುರುದ್ದೇಶದಿಂದ ಕಾನೂನು ಸುವ್ಯವಸ್ಥೆ ಬಗ್ಗೆ ಮಾತನಾಡಿದ್ದಾರೆ.


ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post