ಸಕಾಲದ ಮಾರ್ಗದರ್ಶನ ಭವಿಷ್ಯದ ಪ್ರಗತಿಗೆ ಸಹಕಾರಿ

7.45 ಲಕ್ಷ ಮೌಲ್ಯದ ವಿದ್ಯಾರ್ಥಿ ವೇತನ ಪುರಸ್ಕಾರ
ನ್ಯಾಷನಲ್‌ ಸಮೂಹ ಸಂಸ್ಥೆಯ ಕಾರ್ಯಕ್ಕೆ ಮೆಚ್ಚುಗೆ

ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಸೂಕ್ತ ವೇದಿಕೆ ಕಲ್ಪಿಸುವುದು ಸಮಾಜದ ಕರ್ತವ್ಯವಾಗಿದೆ. ಸಕಾಲದ ಮಾರ್ಗದರ್ಶನ ಮಕ್ಕಳ ಭವಿಷ್ಯ ನಿರ್ಮಾಣಕ್ಕೆ ಸಹಕಾರಿಯಾಗಿದೆ ಎಂದು ಕೆನರಾ ಬ್ಯಾಂಕ್‌ ಜನರಲ್‌ ಮ್ಯಾನೇಜರ್‌ ಜಿ.ಕೆ. ಪಂಡಿತ್‌ ಭಾನುವಾರ ವಿದ್ಯಾಧಿರಾಜ ಸಭಾಭವನದಲ್ಲಿ ಹಾಜಿ ಶೇಖ್‌ ಅಹಮದ್‌ ಚಾರಿಟೇಬಲ್‌ ಟ್ರಸ್ಟ್‌ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತೀರ್ಥಹಳ್ಳಿಯ ಸುಪ್ರಸಿದ್ದ ನ್ಯಾಷನಲ್ ಗೋಲ್ಡ್ ಆಂಡ್ ಡೈಮಂಡ್ಸ್ ಸಂಸ್ಥೆಯ ವತಿಯಿಂದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ತರಗತಿಗಳಲ್ಲಿ ಶೇ. 85 ಕ್ಕೂ ಹೆಚ್ಚು ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಿದ ಅವರು ಶೈಕ್ಷಣಿಕ ಬದುಕಿನಲ್ಲಿ ಯಶಸ್ಸು ಸಾಧಿಸಲು ಓದು ಬಹಳ ಮುಖ್ಯವಾಗಿದೆ. ಪಠ್ಯೇತರ ಚಟುವಟಿಕೆ ಓದಿಗೆ ತಕ್ಕಂತೆ ಜ್ಞಾನ ಸಂಪಾದನೆಗೆ ಅನುಕೂಲ ಮಾಡುತ್ತದೆ. ಬಡ ವಿದ್ಯಾರ್ಥಿಗಳಿಗಾಗಿ ಕೆನರಾ ಬ್ಯಾಂಕ್‌ ₹4 ಲಕ್ಷ ಭದ್ರತೆ ಇಲ್ಲದೆ ಶೈಕ್ಷಣಿಕ ಸಾಲ ನೀಡುತ್ತಿದೆ. ವಿದ್ಯಾರ್ಥಿಗಳು ಸಾಲ ಸೌಲಭ್ಯ ಬಳಸಿಕೊಳ್ಳುತ್ತಿಲ್ಲ ಎಂದು ವಿಷಾಧ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಜೊತೆಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು. ದೂರದೃಷ್ಟಿಯ ಚಿಂತನೆ ರೂಪಿಸಿಕೊಂಡಾಗ ಸಾಧನೆ ಸಾಧ್ಯ.‌ ಸಮಾಜಮುಖಿ ಕೆಲಸಗಳನ್ನು ಮುಕ್ತವಾಗಿ ಮಾಡಿದರೆ ಮಾತ್ರ ಫಲ ಸಿಗುತ್ತದೆ ಎಂದು ನ್ಯಾಷನಲ್‌ ಗೋಲ್ಡ್ ಅಂಡ್‌ ಡೈಮಂಡ್‌ ಪಾಲುದಾರ ಯೂಸೂಫ್‌ ಹೈದರ್‌ ಅಭಿಪ್ರಾಯಿಸಿದರು.

ಕಾರ್ಯಕ್ರಮದಲ್ಲಿ ಟ್ರಸ್ಟ್‌ ವತಿಯಿಂದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ 543 ವಿದ್ಯಾರ್ಥಿಗಳಿಗೆ ₹7.45 ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ನೀಡಲಾಯಿತು.

ವೇದಿಕೆಯಲ್ಲಿ ನ್ಯಾಷನಲ್‌ ಸಮೂಹ ಸಂಸ್ಥೆಯ ಇಬ್ರಾಹಿಂ ಷರೀಫ್‌ ಅಧ್ಯಕ್ಷತೆ ವಹಿಸಿದ್ದರು. ಅಬ್ದುಲ್‌ ರೆಹಮಾನ್‌, ಅಬ್ದುಲ್‌ ಕಲಾಂ ಆಜಾದ್‌, ಸುಲೇಮಾನ್‌, ಕಬೀರ್‌ ಇದ್ದರು.






ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post