ತಾಲ್ಲೂಕು, ಜಿಲ್ಲಾ ಪಂಚಾಯಿತಿ ಕ್ಷೇತ್ರ ಪುನರ್‌ ವಿಂಗಡಣೆಗೆ ಮನವಿ

ಸಚಿವರಾದ ಪ್ರಿಯಾಂಕ ಖರ್ಗೆ, ಮಧು ಬಂಗಾರಪ್ಪ ಭೇಟಿಯಾದ ಆರ್‌ಎಂಎಂ

ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಸೀಮಾ ಆಯೋಗದ ಆದೇಶದಂತೆ ಕ್ಷೇತ್ರಗಳನ್ನು ನಿಗಧಿಪಡಿಸುವ ಆದೇಶವನ್ನು ಇತ್ತೀಚೆಗೆ ಹೊರಡಿಸಲಾಗಿದೆ. ಆದೇಶದ ಪ್ರಕಾರ ಉತ್ತರ ಕನ್ನಡ, ಕೊಡಗು, ಭಾಗಶಃ ಚಿಕ್ಕಮಗಳೂರು ಜಿಲ್ಲೆಯ ಪ್ರತಿ ಜಿಲ್ಲಾ ಪಂಚಾಯಿತಿ ಕ್ಷೇತ್ರಕ್ಕೆ 21 ಸಾವಿರ ಜನಸಂಖ್ಯೆಗೆ ಸೀಮಾ ಕ್ಷೇತ್ರ ನಿಗಧಿಪಡಿಸಲಾಗಿರುತ್ತದೆ. ಅದೇ ರೀತಿ ಶಿವಮೊಗ್ಗ ಜಿಲ್ಲೆಯೂ ಕೂಡ ದೇಶದಲ್ಲಿಯೇ ಅತೀ ಹೆಚ್ಚು ಮಳೆ ಬೀಳುವ ಪ್ರದೇಶವಾಗಿದ್ದು ಲಿಂಗನಮಕ್ಕಿ, ಚಕ್ರ, ವರಾಹಿ, ಸಾವೇಹಕ್ಲು ಮತ್ತು ತುಂಗಾಭದ್ರಾ ಯೋಜನೆಗಳಿಂದ ಮುಳುಗಡೆಯಾಗಿ ಚದುರಿದಂತೆ ಜನವಸತಿ ಪ್ರದೇಶವಿದೆ. ಕರ್ನಾಟಕ ಪಂಚಾಯತ್‌ ರಾಜ್‌ ಜುಲೈ 15ರ ನಡವಳಿಯಂತೆ ಉತ್ತರಕನ್ನಡ, ಕೊಡಗು ಮತ್ತು ಭಾಗಶಃ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿಗಧಿಪಡಿಸಿದ ಮಾದರಿಯಂತೆ ಶಿವಮೊಗ್ಗ ಜಿಲ್ಲೆಯನ್ನು ಸಹ ಪರಿಗಣಿಸುವುದು. ಹಾಗೂ 2011ರ ಜನಗಣತಿ ಪ್ರಕಾರ ಕ್ಷೇತ್ರ ವಿಂಗಡಣೆ ಮಾಡಲಾಗಿರುತ್ತದೆ. ಆದರೆ 2021ರ ಜನಗಣತಿ ವರದಿ ಬಂದಿರುವುದಿಲ್ಲ. ಅದರಂತೆ 2021ರ ವರದಿ ಬಂದರೆ ಜನಸಂಖ್ಯೆ ಹೆಚ್ಚಳವಾಗಿರುತ್ತದೆ. ಆದ್ದರಿಂದ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳನ್ನು ಮರುವಿಂಗಡಣೆ ಮಾಡುವಂತೆ ಕೋರಿ ತೀರ್ಥಹಳ್ಳಿ ತಾಲ್ಲೂಕು ಕಾಂಗ್ರೆಸ್‌ ಮುಖಂಡರು, ರಾಜ್ಯ ಕಾಂಗ್ರೆಸ್‌ ಸಹಕಾರ ವಿಭಾಗದ ಸಂಚಾಲಕ ಆರ್.ಎಂ. ಮಂಜುನಾಥ ಗೌಡ ಗುರುವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.


ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post