ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ – ತೀರ್ಥಹಳ್ಳಿ ಘಟಕ

ಇಂದು ಲಯನ್ಸ್‌ ಭವನದಲ್ಲಿ ಪತ್ರಿಕಾ ದಿನಾಚರಣೆತೀರ್ಥಹಳ್ಳಿ ಪಟ್ಟಣದ ತುಂಗಾ ಕಾಮಾನು ಸೇತುವೆ ಸಮೀಪದಲ್ಲಿರುವ ಲಯನ್ಸ್‌ ಭವನದಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ತೀರ್ಥಹಳ್ಳಿ ಘಟಕದಿಂದ ಪತ್ರಿಕಾ ದಿನಾಚರಣೆ ಶನಿವಾರ ಸಂಜೆ 4.30ಕ್ಕೆ ನಡೆಯಲಿದೆ. ಸಾರ್ವಜನಿಕರು, ಹಿತೈಷಿಗಳು ಆಗಮಿಸುವಂತೆ ಸಂಘದ ಅಧ್ಯಕ್ಷ ಮೋಹನ್‌ ಮುನ್ನೂರು, ಉಪಾಧ್ಯಕ್ಷ ಸಂತೋಷ್‌ ಕುಮಾರ್‌ ಜಿ, ಸಹಕಾರ್ಯದರ್ಶಿ ಮನುಕುಮಾರ್‌, ಖಜಾಂಚಿ ಶ್ರೀಕಾಂತ್‌ ನಾಯಕ್‌ ಕೋರಿದ್ದಾರೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಗೃಹಸಚಿವ, ಹಾಲಿ ಶಾಸಕ ಆರಗ ಜ್ಞಾನೇಂದ್ರ ನೆರವೇರಿಸಲಿದ್ದಾರೆ. ದಿಕ್ಸೂಚಿ ಭಾಷಣವನ್ನು ವ್ಯಂಗ್ಯಚಿತ್ರಕಾರ ಪ್ರೊ. ನಟರಾಜ್‌ ಅರಳಸುರಳಿ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಮೋಹನ್‌ ಮುನ್ನೂರು ವಹಿಸಿಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಂಘದ ಅಧ್ಯಕ್ಷ ಶಿವಕುಮಾರ್‌, ಉಪಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ವಿ.ಟಿ. ಅರುಣ್‌, ಮಾಜಿ ಸಚಿವ ಕಿಮ್ಮನೆ ರತ್ನಾಕರ್‌, ಅಪೆಕ್ಸ್‌ ಬ್ಯಾಂಕ್‌ ಮಾಜಿ ಅಧ್ಯಕ್ಷ ಆರ್.‌ಎಂ. ಮಂಜುನಾಥ ಗೌಡ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಶೀಲ ಶೆಟ್ಟಿ, ಶ್ರೀ ನಾರಾಯಣಗುರು ವಿಚಾರ ವೇದಿಕೆ ರಾಜ್ಯ ಕಾರ್ಯಾಧ್ಯಕ್ಷ ಮುಡುಬ ರಾಘವೇಂದ್ರ, ಡಿವೈಎಸ್ಪಿ ಗಜಾನನ ವಾಮನ ಸುತಾರ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕುರಿಯಕೊಸ್‌, ಸಂಘದ ಜಿಲ್ಲಾ ಪ್ರತಿನಿಧಿಗಳಾದ ಟಿ.ಕೆ. ರಮೇಶ್‌ ಶೆಟ್ಟಿ, ಟಿ.ಜೆ. ಅನಿಲ್‌, ತಾಲ್ಲೂಕು ಸಂಘದ ಪ್ರಧಾನ ಕಾರ್ಯದರ್ಶಿ ಮುರುಘರಾಜ್‌ ಕೋಣಂದೂರು ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ ನಡೆಯಲಿದೆ. ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಜಿ.ಎಸ್.‌ ನಾರಾಯಣರಾವ್‌, ಆಜಾದ್‌ ಇನ್ಸ್‌ಟ್ಯೂಟ್‌ ಆಫ್‌ ಟೆಕ್ನಾಲಜಿ ನಿರ್ದೇಶಕ ಮಹಮದ್‌ ಶಫಿ, ವಾಹನ ಚಾಲನ ಕ್ಷೇತ್ರದಿಂದ ಬಿ. ಮಂಜುನಾಥ ಶೆಟ್ಟಿ, ಪ್ರಗತಿಪರ ಕೃಷಿಕ ವಿಶ್ವನಾಥ ಡಿ.ಪಿ., ಹಿರಿಯ ರಂಗಕರ್ಮಿ ಮ್ಯಾಥ್ಯೂ ಸುರಾನಿ, ಹಿರಿಯ ಯಕ್ಷಗಾನ ಕಲಾವಿದ ಕೊಕ್ಕೋಡ್ತಿ ಕೃಷ್ಣಮೂರ್ತಿ, ಸಮಾಜ ಸೇವಕ ಗೋಪಾಲ ಪೂಜಾರಿ, ಆರೋಗ್ಯ ಕ್ಷೇತ್ರದಿಂದ ಡಾ.ಅನುಪಮ ಡಿ.ಎಸ್.‌, ಗಾಯಕ ರಮೇಶ್‌ ಗಾಂವಸ್ಕರ್‌ ಅವರಿಗೆ ಸನ್ಮಾನಿಸಲಾಗುತ್ತದೆ.
ವಿಧಾತ ದಿನಪತ್ರಿಕೆಯ ಸಂಪಾದಕಿ ಭಾಗ್ಯ ಅನಿಲ್‌, ಹಿರಿಯ ಪತ್ರಕರ್ತ ಪ್ರವೀಣ್‌ ಭಟ್‌, ವ್ಯಂಗ್ಯಚಿತ್ರಕಾರ ರಾಮಚಂದ್ರ ಕೊಪ್ಪಲು, ನಮ್ಮೂರು ಎಕ್ಸ್‌ಪ್ರೆಸ್‌ ಪ್ರಧಾನ ಸಂಪಾದಕ ತ.ರ. ರಾಘವೇಂದ್ರ, ಮುದ್ರಣ ಕ್ಷೇತ್ರದಲ್ಲಿ ಪಾರ್ಥಿಬನ್‌, ಎಂಎಸ್ಸಿಯಲ್ಲಿ 4ನೇ ರ್ಯಾಂಕ್‌ ಪಡೆದ ಕು. ಸಿಂಚನಾ ಮುರುಘರಾಜ್‌, ಪಿಯುಸಿಯಲ್ಲಿ ಶೇಕಡಾ 92 ಅಂಕ ಪಡೆದ ಕು.ಪ್ರಣತಿ, ಪತ್ರಿಕಾ ವಿತರಕ ಸಂದೇಶ್‌, ಯುವ ಪ್ರತಿಭೆ ನವ ಎಸ್.‌ ನಾಯಕ್‌ ಅವರಿಗೆ ಪತ್ರಕರ್ತರ ವಿಶೇಷ ಸನ್ಮಾನ ನಡೆಯಲಿದೆ.
ಕಾರ್ಯಕ್ರಮ ಸರಿಯಾದ ಸಮಯಕ್ಕೆ ಆರಂಭಗೊಳ್ಳಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ಹಿತೈಷಿಗಳು ಭಾಗವಹಿಸಬೇಕು ಎಂದು ಎಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಕೋರಿದ್ದಾರೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post