ಮಾಳೂರಿನಲ್ಲಿ 200 ಗ್ರಾಂ ಗಾಂಜಾ ವಶ

ತೀರ್ಥಹಳ್ಳಿಯಲ್ಲಿ ಮತ್ತೊಂದು ಪ್ರಕರಣ
ಫಾರ್ಚುನರ್‌ ಕಾರಿನಲ್ಲಿ ಬಂತೂ ಗಾಂಜಾ

ತೀರ್ಥಹಳ್ಳಿ ತಾಲ್ಲೂಕಿನ ಮಾಳೂರಿನಲ್ಲಿ ಫಾರ್ಚುನರ್‌ ಕಾರಿನಲ್ಲಿ ಸಾಗಿಸುತ್ತಿದ್ದ 200 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಗಾಂಜಾ ಸಾಗಿಸಲಾಗುತ್ತಿದ್ದು. ಕೆಎ 04 ಎಲ್‌ಸಿ 1205 ಸಂಖ್ಯೆಯ ಫಾರ್ಚುನರ್ ಕಾರಿನಲ್ಲಿ ಗಾಂಜಾ ಲಭಿಸಿದೆ ಎಂದು ಮೂಲಗಳು ತಿಳಿಸಿವೆ. ಈಚೆಗೆ ಕೋಣಂದೂರು ಸಮೀಪ ಅಡಿಕೆ ತೋಟದಲ್ಲಿ ಗಾಂಜಾ ಬೆಳೆದ ಪ್ರಕರಣ ದಾಖಲಾಗಿತ್ತು. ಆರೋಪಿಗಳಾದ ಯೂನಸ್‌, ಲತೀಫ್‌, ಮನೋಜ್‌ ಎಂಬುವವರು ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದರು ಎನ್ನಲಾಗಿದೆ.

ತೀರ್ಥಹಳ್ಳಿಯಲ್ಲಿ ಗಾಂಜಾ ವಿಪರೀತ ಪ್ರಮಾಣದಲ್ಲಿ ಬಳಕೆಯಾಗುತ್ತಿದ್ದು ಪೊಲೀಸರು ವಿಶೇಷ ತನಿಖೆ ನಡೆಸಲು ಮುಂದಾಗಿದ್ದಾರೆ. ಕೋಣಂದೂರಿನಲ್ಲಿ ತೋಟವೊಂದರಲ್ಲಿ ಬೆಳೆದಿದ್ದ ಪ್ರಕರಣ ಇತ್ತೀಚೆಗೆ ವರದಿಯಾಗಿತ್ತು. ಇದೀಗ ಮಾಳೂರಿನಲ್ಲಿ ತನಿಖೆ ವೇಳೆ ಗಾಂಜಾ ಸಾಗಿಸುತ್ತಿದ್ದ ಪ್ರಕರಣ ದಾಖಲಾಗಿದೆ. ಪೊಲೀಸರ ಕೆಲಸದ ಕುರಿತು ಸಾರ್ವಜನಿಕವಾಗಿ ಪ್ರಶಂಸೆ ವ್ಯಕ್ತವಾಗುತ್ತಿದೆ.

ಡಿವೈಎಸ್‌ಪಿ ಗಜಾನನ ವಾಮನ ಸುತರ ನೇತೃತ್ವದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಮಾಳೂರು ಎಸ್‌ಐ ನವೀನ್‌ ಮಠಪತಿ, ಎಎಸ್‌ಐ ಶಿವಾನಂದ, ಧರಣಯ್ಯ ಸಿಬ್ಬಂದಿಗಳಾದ ಸುರಕ್ಷಿತ್‌, ಸಂತೋಷ್‌, ವಿವೇಕ್‌, ರಾಮಣ್ಣ ಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post