ಗ್ರಾ.ಪಂ. ಸದಸ್ಯನ ವಿರುದ್ಧ ಬೇಲಿ ಸುತ್ತಿ ಆರೋಪ

ಬಿಎಸ್‌ಎನ್‌ಎಲ್‌ ಟವರ್‌ ಎಂದು ಸುಳ್ಳು ಹೇಳಿ ಜಾಗ ಕಬಳಿಕೆ
ತೆರವುಗೊಳಿಸದಿದ್ದರೆ ಹೋರಾಟದ ಎಚ್ಚರಿಕೆ ನೀಡಿದ ಗ್ರಾಮಸ್ಥರು

ತೀರ್ಥಹಳ್ಳಿ ತಾಲ್ಲೂಕಿನ ಗಡಿ ಗ್ರಾಮವಾದ ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುರುಳಿ ಗ್ರಾಮದ ಬೊಬ್ಬಿ ಮಜಿರೆ ಗ್ರಾಮದಲ್ಲಿ ಬಿಎಸ್‌ಎನ್‌ಎಲ್‌ ನಿರ್ಮಾಣಕ್ಕೆ ಎಂದು ಮಂಕುಬೂದಿ ಎರಚಿ ಗ್ರಾ.ಪಂ. ಸದಸ್ಯನೊಬ್ಬ ಜಾಗ ಕಬಳಿಕೆ ಮಾಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.

ಟವರ್‌ಗಾಗಿ ನಿಗಧಿಪಡಿಸಿದ ಜಾಗವನ್ನು ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಅಕ್ರಮವಾಗಿ ವಶಪಡಿಸಿಕೊಂಡಿದಲ್ಲದೇ ತಂತಿ ಬೇಲಿ ಸುತ್ತಿರುವುದು ಅಕ್ರಮ ಎಂದು ಅಲ್ಲಿನ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮಸ್ಥರು ಲಗಾಯ್ತಿನಿಂದಲೂ ಸೊಪ್ಪು, ದರಗು ಇತ್ಯಾದಿ ಕೃಷಿ ಚಟುವಟಿಕೆಗಳಿಗಾಗಿ ರೂಢಿಸಿಕೊಂಡಿದ್ದ ಈ ಸ್ಥಳದಲ್ಲಿ ಕೆಲವು ಸಮಯದ ಹಿಂದೆ ಜೆಸಿಬಿ ಯಂತ್ರದ ಮೂಲಕ ಸಮತಟ್ಟು ಕೆಲಸ ಮಾಡಿಸಲಾಗಿದ್ದು ವಿಚಾರಿಸಿದಾಗ ಬಿಎಸ್‌ಎನ್‌ಎಲ್‌ ಟವರ್‌ ನಿರ್ಮಾಣಕ್ಕಾಗಿ ಕೆಲಸ ಮಾಡಲಾಗುತ್ತಿದೆ ಎಂಬ ಸಬೂಬು ದೊರೆತಿತ್ತು. ಆದರೆ ಈಗ ಇದಕ್ಕೂ ನಮಗೂ ಸಂಬಂಧ ಇಲ್ಲವೆಂದು ಬಿಎಸ್‌ಎನ್‌ಎಲ್‌ ಅಧಿಕಾರಿ ಹೇಳಿದರೆ ವಿಚಾರ ತಿಳಿದಿದ್ದೂ ಕೂಡ ಮೌನಕ್ಕೆ ಶರಣಾಗಿರುವ ಅರಣ್ಯ ಇಲಾಖೆ ಇದರ ಒಳಗುಟ್ಟು ಏನೆಂದು ಸಾರ್ವಜನಿಕರಿಗೆ ತಿಳಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post