ಹಾರೋಗೊಳಿಗೆ ಗ್ರಾ.ಪಂ. ಅಧ್ಯಕ್ಷರಾಗಿ ಭಾರತಿ ಆಯ್ಕೆ

ಉಪಾಧ್ಯಕ್ಷರಾಗಿ ಮೈಯದ್ಧಿ ಆಯ್ಕೆ

ತೀರ್ಥಹಳ್ಳಿ ತಾಲ್ಲೂಕಿನ ಹಾರೋಗೊಳಿಗೆ ಗ್ರಾ.ಪಂ. ಅಧ್ಯಕ್ಷರಾಗಿ ಕಾಂಗ್ರೆಸ್‌ ಬೆಂಬಲಿತ ಸದಸ್ಯೆ ಭಾರತಿ ಹೆಚ್‌ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 6 ಜನ ಸದಸ್ಯರನ್ನು ಹೊಂದಿದ್ದ ಹಾರೋಗೊಳಿಗೆ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ಬಿಸಿಎಂ ಎ ಮಹಿಳೆಗೆ ಮೀಸಲಾಗಿತ್ತು. ಸಾಮಾಜಿಕ ಕಳಕಳಿ ಹೊಂದಿರುವ ಚುರುಕಿನ ಕ್ರಿಯಾಶೀಲ ಮಹಿಳೆ ಭಾರತಿ ಹೆಚ್ ಕಸಬಾ ವ್ಯವಸಾಯ ಸೇವಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋಹನೇಶ್‌ರವರ ಪತ್ನಿ.

ಉಪಾಧ್ಯಕ್ಷರಾಗಿ ಕಾಂಗ್ರೆಸ್‌ ಬೆಂಬಲಿತ ಸದಸ್ಯ ಮೈಯದ್ಧಿ ಆಯ್ಕೆಯಾಗಿದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post