ಖರ್ಗೆ ವಿರುದ್ಧ ಅವಹೇಳನ ಹೇಳಿಕೆ

ಆರಗ ಜ್ಞಾನೇಂದ್ರ ಮೇಲೆ ಕಲಬುರಗಿಯಲ್ಲಿ ಎಫ್‌ಐಆರ್‌
ಬೆಂಗಳೂರು ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ದೂರು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಹಿನ್ನಲೆಯಲ್ಲಿ ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ವಿರುದ್ಧ ಕಲಬುರಗಿಯ ಅಶೋಕನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಪಾಲಿಕೆ ಮಾಜಿ ಸದಸ್ಯ ರಾಜು ಜಾನೆ ನೀಡಿದ ದೂರಿನ ಮೇರೆಗೆ ಪೊಲೀಸರು ಐಪಿಸಿ ಕಲಂ 504 ಅಡಿಯಲ್ಲಿ ಆರಗ ಜ್ಞಾನೇಂದ್ರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಸ್ತೂರಿ ರಂಗನ್‌ ವರದಿ ಜಾರಿ ವಿರೋಧಿಸಿ ತೀರ್ಥಹಳ್ಳಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಖರ್ಗೆ ವಿರುದ್ಧ ಆರಗ ಜ್ಞಾನೇಂದ್ರ ಮಾತನಾಡಿದ್ದರು. ಈ ವೇಳೆ ಖರ್ಗೆ ಮೈಬಣ್ಣದ ಕುರಿತು ಅವಹೇಳನ ಮಾಡಿದ್ದಾರೆ ಎಂದು ಅರೋಪಿಸಲಾಗಿದೆ.

ಮಲ್ಲಿಕಾರ್ಜುನ ಖರ್ಗೆ ಹಾಗೂ ಈಶ್ವರವ ಖಂಡ್ರೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಲ್ಲಿ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಅಖಿಲ ಭಾರತ ವೀರಶೈವ ಮಹಾಸಭಾದಿಂದ ದೂರು ದಾಖಲಿಸಲಾಗಿದ್ದು ವರ್ಣಬೇಧ, ಜನಾಂಗೀಯ ನಿಂದನೆ ಆರೋಪದಡಿ ದೂರು ನೀಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದವರು ಸುಟ್ಟು ಕರಕಲಿನಂತೆ ಇರುತ್ತಾರೆ. ಇದು ಖರ್ಗೆ ಅವರನ್ನು ನೋಡಿದರೆ ತಿಳಿಯುತ್ತದೆ. ಅರಣ್ಯ ಮಂತಿಗಳಾದ ಈಶ್ವರ ಖಂಡ್ರೆ ಅವರ ತಲೆಮೇಲೆ ಕೂದಲು ಮುಚ್ಚಿಕೊಂಡಿರುವುದರಿಂದ ಕರಕಲಾಗದಂತೆ ಉಳಿದುಕೊಂಡಿದೆ ಎಂದು ಹೇಳಿಕೆ ನೀಡಿದ್ದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post