ಅಪರೂಪದ ಅಧಿಕಾರಿ ಪ್ರವೀಣ್‌ ನೀಲಮ್ಮನವರ್‌ ವರ್ಗಾವಣೆ

ಮಾನವೀಯ ಮೌಲ್ಯಗಳ ಜೊತೆ ಕಾನೂನು ಸೇವೆ
ಪೊಲೀಸ್‌ ಇಲಾಖೆ ಗೌರವ ಹೆಚ್ಚಿಸಿದ ಅಧಿಕಾರಿ

ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸರ್ಕಲ್‌ ಇನ್‌ಸ್ಪೆಕ್ಟರ್‌ ಆಗಿ ಕರ್ತವ್ಯ ನಿರ್ವಹಿಸಿದ್ದ ಪ್ರವೀಣ್‌ ನೀಲಮ್ಮನವರ್‌ ಹುಬ್ಬಳ್ಳಿಯ ಗೋಕುಲ್‌ ಪೊಲೀಸ್‌ ಠಾಣೆಗೆ ಪೊಲೀಸ್‌ ಇನ್ಸ್‌ಪೆಕ್ಟರ್‌ ಆಗಿ ವರ್ಗಾವಣೆಯಾಗಿದ್ದಾರೆ.

ತೀರ್ಥಹಳ್ಳಿ, ಆಗುಂಬೆ ಠಾಣೆಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜನರೊಂದಿಗೆ ಉತ್ತಮ ಒಡನಾಟ ಇಟ್ಟುಕೊಂಡು ಸುತ್ತಮುತ್ತಲು ನಡೆಯುವ ಘಟನೆಗಳ ಬಗ್ಗೆ ಕಣ್ಗಾವಲು ವಹಿಸುತ್ತಿದ್ದರು. ಗ್ರಾಮೀಣ ಭಾಗದ ಜನರೊಂದಿಗೆ ಉತ್ತಮ ವಿಶ್ವಾಸ ಹೊಂದಿದ್ದ ಇವರು ಸರಳತೆ, ಪ್ರಾಮಾಣಿಕತೆ, ಉತ್ತಮ ನಡವಳಿಕೆಯಿಂದ ಜನಾನುರಾಗಿದ್ದರು.

ಸಮಸ್ಯೆಗಳು ಎದುರಾದಂತಹ ಸಂದರ್ಭದಲ್ಲಿ ಜನರಿಗೆ ಉತ್ತಮ ಸಲಹೆ, ಸಹಕಾರಗಳನ್ನು ನೀಡುವ ಮೂಲಕ ಸ್ಥಳದಲ್ಲಿಯೇ ಪ್ರಕರಣ ಇತ್ಯರ್ಥಕ್ಕೆ ಕ್ರಮ ವಹಿಸುತ್ತಿದ್ದರು. ಅಧಿಕಾರಿಯಾಗಿ ಜನರೊಂದಿಗೆ ಉತ್ತಮ ಸಂವಾದ ಮಾಡುವ ಮೂಲಕ ಜನಸ್ನೇಹಿ ವ್ಯವಸ್ಥೆಯನ್ನು ಕಲ್ಪಿಸುತ್ತಿದ್ದರು. ಕೊರೋನಾ ಸಂದರ್ಭದಲ್ಲಿ ಬಡವರು, ಕಾರ್ಮಿಕರು ಹಾಗೂ ಅನೇಕರಿಗೆ ಆಹಾರದ ಕಿಟ್‌ಗಳನ್ನು ನೀಡಿದ್ದಾರೆ. ಅಲ್ಲದೇ ಬಸವಾನಿ ವೃದ್ಧಾಶ್ರಮಕ್ಕೆ ತಮ್ಮದೇ ಆದಂತಹ ಸಹಕಾರವನ್ನು ನೀಡುವ ಮೂಲಕ ಮಾನವೀಯತೆ ಮೆರೆದಿದ್ದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post