ಬಿಜೆಪಿಗೆ ಬಿಸಿ ಮುಟ್ಟಿಸಿದ ಬಂಡೆ

ರೋಚಕ ಗೆಲುವು ದಾಖಲಿಸಿದ ಯು.ಡಿ. ವೆಂಕಟೇಶ್‌
ಮೇಲಿನ ಕುರುವಳ್ಳಿ ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೇರಿದ ಪ್ರಭಾವಿ ಮುಖಂಡ

ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿಗೆ ಎರಡನೇ ಅವಧಿಗೆ ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್‌ ಬೆಂಬಲಿತ ಸದಸ್ಯ ಯು.ಡಿ. ವೆಂಕಟೇಶ್‌, ಉಪಾಧ್ಯಕ್ಷರಾಗಿ ಅನಿತಾ ಪ್ರವೀಣ್‌ ಆಯ್ಕೆಯಾಗಿದ್ದಾರೆ.

ಒಟ್ಟು 15 ಸದಸ್ಯ ಬಲವಿದ್ದ ಪಂಚಾಯಿತಿಯ ಮೇಲಿನಕುರುವಳ್ಳಿ ಗ್ರಾಮ ಪಂಚಾಯಿತಿಯಲ್ಲಿ 1 ಪಕ್ಷೇತರ, 8 ಕಾಂಗ್ರೆಸ್‌, 6 ಬಿಜೆಪಿ ಬೆಂಬಲಿತ ಸದಸ್ಯರಿದ್ದರು. ಬಿಸಿಎಂ ಬಿ ವರ್ಗಕ್ಕೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಯು.ಡಿ. ವೆಂಕಟೇಶ್‌ 12 ಮತಗಳನ್ನು ಪಡೆದುಕೊಂಡರೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶೋಭಾ ದಿನೇಶ್‌ 3ತಕ್ಕೆ ಖುಷಿ ಪಡಬೇಕಾದ ಅನಿವಾರ್ಯ ಸೃಷ್ಟಿಯಾಗಿದೆ. ಸಾಮಾನ್ಯ ಮಹಿಳಾ ವರ್ಗಕ್ಕೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಅನಿತಾ ಪ್ರವೀಣ್‌ 9 ಮತ ಪಡೆದರೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಧಾ ಕೃಷ್ಣಕುಮಾರ್‌ 6 ಮತ ಪಡೆದಿದ್ದಾರೆ.

ಸೋಲಿಲ್ಲದ ಸರದಾರ ಎಂದೇ ಹೆಗ್ಗಳಿಕೆ ಗಳಿಸಿರುವ ಅತ್ಯಂತ ಪ್ರಭಾವಿ ನಾಯಕ ಬಂಡೆ ವೆಂಕಟೇಶ್‌ ಬಿಜೆಪಿ ಬುಟ್ಟಿಯಲ್ಲಿದ್ದ 3 ಮತಗಳನ್ನು ತಮಗೆ ಬರುವಂತೆ ರಾಜಕೀಯ ಚಾಣಾಕ್ಷತನ ಪ್ರದರ್ಶಿಸಿದ್ದಾರೆ. ಬಿಜೆಪಿ ವಲಯದಲ್ಲಿ 3 ಮತಗಳನ್ನು ಕಾಂಗ್ರೆಸ್‌ಗೆ ನೀಡಿದ ವ್ಯಕ್ತಿಗಳು ಯಾರು ಎಂಬ ಬಗ್ಗೆ ಚರ್ಚೆಗಳು ಆರಂಭಗೊಂಡಿದೆ. ಪಕ್ಷೇತರ ಅಭ್ಯರ್ಥಿಯಾಗಿ ಗುರುತಿಸಿಕೊಂಡಿದ್ದ ಸದಸ್ಯ ನಿಶ್ಚಲ್‌ ಜಾದೂಗಾರ್‌ ಕಾಂಗ್ರೆಸ್‌ ಪಾಳಯದಲ್ಲಿ ಗುರುತಿಸಿಕೊಂಡು ಬಿಜೆಪಿ ಅನೇಕ ಮುಖಂಡರಿಗೆ ಶಾಕ್‌ ನೀಡಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೆಸ್ತೂರು ಮಂಜುನಾಥ್‌, ಪ್ರಚಾರ ಸಮಿತಿ ಅಧ್ಯಕ್ಷ ಡಿ.ಎಸ್.‌ ವಿಶ್ವನಾಥ ಶೆಟ್ಟಿ, ಯುವ ಕಾಂಗ್ರೆಸ್‌ ಅಧ್ಯಕ್ಷ ಅಮರನಾಥ ಶೆಟ್ಟಿ, ಮುಖಂಡರಾದ ಅಮ್ರಪಾಲಿ ಸುರೇಶ್‌, ಹೊರಬೈಲು ಪ್ರಭಾಕರ್‌, ನಿಶ್ಚಲ್‌ ಜಾದೂಗಾರ್‌ ಇದ್ದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post