ಪಣಿಯಮ್ಮ ವಿಧಿವಶ

ತೀರ್ಥಹಳ್ಳಿ ತಾಲೂಕು ತಟ್ಟಾಪುರ ಪಣಿಯಮ್ಮ (87) ತೀವ್ರ ಅನಾರೋಗ್ಯದಿಂದ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಶುಕ್ರವಾರ ಮಧ್ಯಾಹ್ನ ಕೊನೆ ಉಸಿರೆಳೆದಿದ್ದಾರೆ.
ತಟ್ಟಾಪುರದ ಅವರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಇದ್ದು ಶನಿವಾರ ಬೆಳಗ್ಗೆ ಅಂತ್ಯ ಸಂಸ್ಕಾರ ನಡೆಯಲಿದೆ.
ಮೃತರು 3 ಗಂಡು, 4 ಹೆಣ್ಣು ಮಕ್ಕಳು, ಮೊಮ್ಮಕ್ಕಳು, ಮರಿ ಮಕ್ಕಳು, ಕುಟುಂಬವನ್ನು ಅಗಲಿದ್ದಾರೆ. ಪಣಿಯಮ್ಮ ನಮ್ಮೂರ್ ಎಕ್ಸ್‌ಪ್ರೆಸ್ ಪ್ರಧಾನ ಸಂಪಾದಕ ತ.ರ. ರಾಘವೇಂದ್ರ ಅವರ ಅಜ್ಜಿ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post