ಬಂಗಾರಪ್ಪ, ಪುನೀತ್‌ ರಾಜ್‌ಕುಮಾರ್‌ ಪುತ್ಥಳಿ ಅನಾವರಣ

ಈಡಿಗ ಸಮುದಾಯದ ವಿದ್ಯಾರ್ಥಿನಿಲಯ ಉದ್ಘಾಟನೆ
ಸೆಪ್ಟೆಂಬರ್ 17ಕ್ಕೆ‌ ತೀರ್ಥಹಳ್ಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಆಗಮನ


ಈಡಿಗ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗೆ ಉತ್ತೇಜನ ನೀಡುವ ಮಹತ್ವದ ತೀರ್ಮಾನದಡಿ ಕೋಳಿಕಾಲುಗುಡ್ಡದಲ್ಲಿ ಹೊಸದಾಗಿ ವಿದ್ಯಾರ್ಥಿನಿಲಯ ಸ್ಥಾಪಿಸಲಾಗಿದೆ. ಸೆಪ್ಟೆಂಬರ್‌ 17 ರಂದು ನೂತನ ಕಟ್ಟಡ ಉದ್ಘಾಟನೆ ಹಾಗೂ ಮಾಜಿ ಮುಖ್ಯಮಂತ್ರಿ ಎಸ್‌.ಬಂಗಾರಪ್ಪ, ಚಿತ್ರನಟ ಪುನೀತ್‌ರಾಜ್‌ಕುಮಾರ್‌ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಆರ್ಯ ಈಡಿಗರ ಸಂಘದ ಅಧ್ಯಕ್ಷ ಮಟ್ಟಿನಮನೆ ರಾಮಚಂದ್ರ ಗುರುವಾರ ಕೋಳಿಕಾಲುಗುಡ್ಡದ ಆರ್ಯಈಡಿಗರ ಸಮುದಾಯ ಭವನದಲ್ಲಿ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.

ಮದ್ಯಾಹ್ನ 2 ಗಂಟೆಗೆ  ಗರ್ತಿಕೆರೆ ಬ್ರಹ್ಮಶ್ರೀ ನಾರಾಯಣಗುರು ಮಹಾಸಂಸ್ಥಾನದ ರೇಣುಕಾನಂದ ಸ್ವಾಮೀಜಿ ಸಾನಿಧ್ಯದಲ್ಲಿ ವಿಧಾನಸಭೆ ಮಾಜಿ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ, ಶ್ರೀಕ್ಷೇತ್ರ ಸಿಗಂದೂರು ಧರ್ಮದರ್ಶಿ ರಾಮಪ್ಪ ಪುತ್ಥಳಿ ಅನಾವರಣ ಮಾಡಲಿದ್ದಾರೆಶಿಕ್ಷಣ ಸಚಿವ ಮಧುಬಂಗಾರಪ್ಪ ವಿದ್ಯಾರ್ಥಿ ನಿಲಯ ಕಟ್ಟಡವನ್ನು, ಸಂಸದ ಬಿ.ವೈ. ರಾಘವೇಂದ್ರ ಕಾರ್ಯಕ್ರಮವನ್ನು, ಶಾಸಕ ಆರಗಜ್ಞಾನೇಂದ್ರ ನೂತನ ಕಚೇರಿ ಉದ್ಘಾಟಿಸಲಿದ್ದಾರೆ. ಸಭೆಗೆ ಶಾಸಕರಾದ ಬೇಳೂರು ಗೋಪಾಲಕೃಷ್ಣ, ಭೀಮಣ್ಣನಾಯ್ಕ್‌, ರಾಜ್ಯ ಆರ್ಯ ಈಡಿಗರ ಸಂಘದ ಅಧ್ಯಕ್ಷ ಡಾ.ತಿಮ್ಮೇಗೌಡ, ಜಿ.ಪಿ. ನಾರಾಯಣಸ್ವಾಮಿ ಗ್ರೂಪ್‌ ಚೇರ್ಮನ್‌ ಜೆ.ಪಿ.ಸುಧಾಕರ್‌, ಮಾಜಿ ಸಚಿವ ಕಿಮ್ಮನೆರತ್ನಾಕರ್‌, ರಾಜ್ಯ ಅಪೆಕ್ಸ್ ಬ್ಯಾಂಕ್‌ ಮಾಜಿ ಅಧ್ಯಕ್ಷ ಆರ್‌.ಎಂ. ಮಂಜುನಾಥಗೌಡ, ನಿವೃತ್ತ ಪೊಲೀಸ್‌ ಅಧೀಕ್ಷಕ ಎಂ.ಜಿ.ಸುಬ್ರಮಣ್ಯ ಭಾಗವಹಿಸಲಿದ್ದಾರೆ ಎಂದರು.

ತಾಲೂಕು ಆರ್ಯ ಈಡಿಗರ ಸಂಘದ ಉಪಾಧ್ಯಕ್ಷ ಮುಡುಬ ರಾಘವೇಂದ್ರ ಮಾತನಾಡಿ, ಸುಮಾರು 35 ವರ್ಷಗಳ ಹಿಂದೆ ಬಂಗಾರಪ್ಪ ಅವರು ವಿದ್ಯಾರ್ಥಿ ನಿಲಯ ಆರಂಭಕ್ಕೆ ನೆರವು ನೀಡಿದ್ದರು. ಕಟ್ಟಡ ಶಿಥಿಲಾವಸ್ಥೆ ತಲುಪಿದ ಹಿನ್ನೆಲೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಆರಗ ಜ್ಞಾನೇಂದ್ರ ಅವರ ಸಹಕಾರದಲ್ಲಿ ಹೊಸ ವಿದ್ಯಾರ್ಥಿ ನಿಲಯ ಕಟ್ಟಡ ನಿರ್ಮಿಸಲಾಗಿದೆ ಎಂದು ತಿಳಿಸಿದರು.

ತಾಲೂಕು ಆರ್ಯ ಈಡಿಗರ ಸಂಘದ ಪ್ರಧಾನ ಕಾರ್ಯದರ್ಶಿ ಚಿಪ್ಪಿನಕೊಡಿಗೆ ವೆಂಕಟೇಶ್‌ ಮಾತನಾಡಿ, ವಿದ್ಯಾರ್ಥಿ ನಿಲಯದಲ್ಲಿ 60 ವಿದ್ಯಾರ್ಥಿಗಳ ವಾಸ್ತವ್ಯಕ್ಕೆ ಅವಕಾಶ ಇದೆ. ಕಟ್ಟಡ ನಿರ್ಮಾಣಕ್ಕೆ ಡಿಸಿಸಿ ಬ್ಯಾಂಕ್‌ನಲ್ಲಿ 40 ಲಕ್ಷರೂ ಸಾಲ ಪಡೆಯಲಾಗಿದೆ. ಈಡಿಗ ಸಮುದಾಯದ ದಾನಿಗಳು ಸುಮಾರು 15 ಲಕ್ಷ ರೂ ದೇಣಿಗೆ ನೀಡಿದ್ದಾರೆ. ಸರ್ಕಾರ 69 ಲಕ್ಷ ರೂ ಅನುದಾನ ಒದಗಿಸಿದೆ. ತಾಲೂಕು ಆರ್ಯ ಈಡಿಗರ ಸಂಘ ಕಠಿಣ ಶ್ರಮವಹಿಸಿ ನಿಲಯದ ಕಟ್ಟಡ ನಿರ್ಮಿಸಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಉಪಾಧ್ಯಕ್ಷ ಹೊದಲ ಶಿವಮೂರ್ತಿ, ಸಹ ಕಾರ್ಯದರ್ಶಿ ಕುರುವಳ್ಳಿ‌ ನಾಗರಾಜ್‌, ನಿರ್ದೇಶಕರಾದ ಡಿ.ಲಕ್ಷ್ಮಣ್‌, ಈರೇಗೋಡು ಶ್ರೀಧರ್‌ಮೂರ್ತಿ, ಕೆ.ವಿನಯ್‌, ಚಂದ್ರಶೇಖರ್‌ ಮರಹಳ್ಳಿ, ಹಾಲೇಸರ ಚೂಡಾಮಣಿ, ಗಂಗಾಧರ ತಲವಡಗ, ವಿನಂತಿ ಕರ್ಕಿ ಇದ್ದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post