ವಿಧ್ಯಾರ್ಥಿಗಳು ಸೋಲು ಗೆಲುವನ್ನು ಸಮಾನಾಗಿ ಸ್ವೀಕರಿಸಿ

ಅಥ್ಲೆಟಿಕ್ಸ್ ಕ್ರೀಡಾಕೂಟ ಉದ್ಘಾಟಿಸಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಗೀತಾ ರಮೇಶ್
ತಾಲ್ಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರ ಕ್ರೀಡಾಕೂಟ

ತೀರ್ಥಹಳ್ಳಿ: ಕ್ರೀಡೆಯಲ್ಲಿ ಮಕ್ಕಳ ಭಾಗವಹಿಸುವಿಕೆ ಅತಿ ಮುಖ್ಯ.ವಿಧ್ಯಾರ್ಥಿಗಳು ಕ್ರೀಡೆಯಲ್ಲಿ ಸೋಲು,ಗೆಲುವನ್ನು ಸಮನಾಗಿ ಸ್ವೀಕರಿಸಬೇಕು ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಗೀತಾ ರಮೇಶ್ ಮಾತನಾಡಿದರು.

ಪಟ್ಟಣದ ಡಾ.ಯು.ಆರ್.ಅನಂತಮೂರ್ತಿ .ಪ್ರೌ.ಶಾಲಾ ಕ್ರೀಡಾಂಗಣದಲ್ಲಿ ನೆಡೆದ ತೀರ್ಥಹಳ್ಳಿ ತಾಲೂಕಿನ ವಲಯ, ತಾಲೂಕು ಮಟ್ಟದ ಬಾಲಕ, ಬಾಲಕಿಯ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.

ಸೋಲು ಗೆಲುವನ್ನು ಮಕ್ಕಳು ಸಮಾನ ಚಿತ್ತದಿಂದ ಸ್ವೀಕರಿಸಿದಾಗ ಮಾತ್ರ ಭವಿಷ್ಯದಲ್ಲಿ ಎದುರಾಗುವ ಯಾವುದೇ ಸಮಸ್ಯೆಗಳನ್ನು ಎದುರಿಸಲು ಸಾಧ್ಯ, ಕ್ರೀಡೆಯಿಂದ ದೈಹಿಕ, ಮಾನಸಿಕ ಸ್ಥೆರ್ಯ ಹೆಚ್ಚಾಗುತ್ತದೆ. ಮಕ್ಕಳು ಕ್ರೀಡಾಕೂಟದಲ್ಲಿ ಹೆಚ್ಚಿನ ಸಾಧನೆ ಮಾಡಿ. ಹಾಗೂ ರಾಜ್ಯ ವಾಲಿಬಾಲ್ ತಂಡವನ್ನು ಪ್ರತಿನಿಧಿಸಿರುವ ಆಗುಂಬೆ ಶಾಲೆಯ ತೀರ್ಥಹಳ್ಳಿ ತಾಲೂಕಿನ ಇಬ್ಬರು ವಿಧ್ಯಾರ್ಥಿಗಳ ಸಮಿತ್ ಮತ್ತು ಆರ್ಯನ್ ಸಾಧನೆ ಬಗ್ಗೆ ಶುಭ ಹಾರೈಸಿದರು.

ಮುಖ್ಯ ಅತಿಥಿ .ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ರತ್ನಾಕರ್ ಶೆಟ್ಟಿ ಮಾತನಾಡಿ ನಾನು ಒಬ್ಬ ಕ್ರೀಡಾಪಟುವಾಗಿ ಮೈದಾನದಲ್ಲಿ ಆಡಿದ್ದೇನೆ, ನನ್ನ ಶಾಲಾ ದಿನಗಳಲ್ಲಿ ಅಥ್ಲೆಟಿಕ್ಸ್ ವಿಭಾಗದ 1500ಮೀಟರ್‌ನಲ್ಲಿ ಓಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದೆ. ಮಕ್ಕಳು ಕ್ರೀಡೆಯಲ್ಲಿ ಶ್ರಮದಿಂದ ಆಡಿದರೆ ಸಾಧನೆ ಸಾಧ್ಯ. ಶಿಕ್ಷಕರು, ಪೋಷಕರು ಮಕ್ಕಳಿಗೆ ಪ್ರೋತ್ಸಾಹಿಸಬೇಕು ಎಂದರು.

ಕ್ರೀಡಾಕೂಟದ ಧ್ವಜಾರೋಹಣವನ್ನು ಸರ್ಕಾರಿ .ಪೂ. ಕಾಲೇಜಿನ ಪ್ರಾಂಶುಪಾಲೆ ಸುಧಾ.ವೈ.ಎಂ.ನೆರವೇರಿಸಿ ಶುಭಹಾರೈಸಿದರುಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ರಾಂಚಂದ್ರ ಕೊಪ್ಪಲು ವಹಿಸಿದ್ದರು.

ವೇದಿಕೆಯಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ಕೆ.ಗಿರಿರಾಜ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಮು.ಬಿ, ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ರಮೇಶ್ ಕೆ.ವಿ., ಎಸ್.ಡಿ.ಎಂ.ಸಿ. ಸದಸ್ಯರಾದ ವಿನಯ್ ಕುಮಾರ್, ರವಿಕಮಲ್, ಕಿರಣ್ ಆಲ್ಬನ್ ಓಲಿವರ್, ಪ್ರಕಾಶ್, ಸುಪ್ರೀತಾ, ಪುಷ್ಪಲತಾ, ಭವ್ಯ, ಪ್ರಾಂಶುಪಾಲ ದೇವೇಂದ್ರ ನಾಯ್ಕ್ ಮುಂತಾದವರಿದ್ದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post