ತೀರ್ಥಹಳ್ಳಿಯಲ್ಲಿ ಗುರುವಾರ ಸೇವಾ ಪಾಕ್ಷಿಕ ಅಭಿಯಾನ

ಉಚಿತ ಆರೋಗ್ಯ ತಪಾಸಣಾ ಶಿಬಿರ
ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆಪಿ ನಿರ್ಮಾತೃ ಪಂಡಿತ್ ದೀನದಯಾಳ್ ಉಪಾಧ್ಯಾಯ ಜಯಂತಿ ಪ್ರಯುಕ್ತ ಸೆಪ್ಟೆಂಬರ್ 28ರ ಗುರುವಾರ ಬೆಳಿಗ್ಗೆ 10 ಗಂಟೆಗೆ ತೀರ್ಥಹಳ್ಳಿಯ ಸುವರ್ಣ ಸಹಕಾರ ಭವನದಲ್ಲಿ (ಟಿಎಪಿಸಿಎಂಎಸ್) ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಮಂಡಲ ಬಿಜೆಪಿ ರೈತ ಮೋರ್ಚಾ, ಓಬಿಸಿ ಮೋರ್ಚಾ ಹಾಗೂ ವೈದ್ಯಕೀಯ ಪ್ರಕೋಷ್ಠದ ವತಿಯಿಂದ ಆಯೋಜಿಸಲಾಗಿದೆ. ಶಿವಮೊಗ್ಗದ ಪ್ರತಿಷ್ಠಿತ ಸರ್ಜಿ ಆಸ್ಪತ್ರೆಯ ತಜ್ಞ ವೈದ್ಯರು ಈ ಶಿಬಿರದಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಿದ್ದಾರೆ.

ಇದೇ ತಪಾಸಣಾ ಶಿಬಿರದಲ್ಲಿ ಉಚಿತವಾಗಿ ಆರೋಗ್ಯ ಕಾರ್ಡ್ ನೋಂದಣಿ ಮಾಡುವ ಸೌಲಭ್ಯವನ್ನೂ ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಈ ಸೇವಾ ಪಾಕ್ಷಿಕ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕಾಗಿ ತಾಲ್ಲೂಕು ಬಿಜೆಪಿ ವಿನಂತಿಸಿಕೊಂಡಿದೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post