ಗ್ರಾಮ ಪಂಚಾಯಿತಿ ಅಧ್ಯಕ್ಷರ ಅಧಿಕಾರ ಮೊಟಕು ಪ್ರಯತ್ನ

15 ನೇ ಹಣಕಾಸು ಕ್ರೀಯಾಯೋಜನೆ ಮಂಜೂರಾತಿಗೆ ಅಡ್ಡಿ
ಗ್ರಾ.ಪಂ. ಒಕ್ಕೂಟದ ಅಧ್ಯಕ್ಷ ಅನಿಲ್ ಖಂಡನೆ

ತೀರ್ಥಹಳ್ಳಿ : ಸರ್ಕಾರ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆಯ ಅಧಿಕಾರಿಗಳು ಹಂತಹಂತವಾಗಿ ಗ್ರಾಮ ಪಂಚಾಯತಿ ಅಧ್ಯಕ್ಷರುಗಳ ಅಧಿಕಾರವನ್ನು ಮೊಟಕುಗೊಳಿಸಲು ಪ್ರಯತನಿಸುತ್ತಿದ್ದಾರೆ. ಇದೀಗ ಹದಿನೈದನೇ ಹಣಕಾಸು ಕ್ರೀಯಾ ಯೋಜನೆಯ ಮಂಜೂರಾತಿಗೆ ಅಡ್ಡಿ ಪಡಿಸುವ ಮೂಲಕ ಕೇಂದ್ರ ಸರ್ಕಾರ ನೀಡುತ್ತಿರುವ ಅನುದಾನದಲ್ಲಿ ಕಾಮಗಾರಿಗಳನ್ನು ಮಾಡಲು ಅಡಚಣೆಯನ್ನುಂಟು ಮಾಡುತ್ತಿರುವುದು ಖಂಡನೀಯ ಎಂದು ಗ್ರಾಮ ಪಂಚಾಯತಿ ಒಕ್ಕೂಟದ ಅಧ್ಯಕ್ಷ ಅನಿಲ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಗ್ರಾಮ ಪಂಚಾಯತಿಗಳಿಗೆ ಬಿಡುಗಡೆ ಮಾಡುವ ಹದಿನೈದನೇ ಹಣಕಾಸಿಗೆ ಗ್ರಾಮ ಪಂಚಾಯತಿಯಲ್ಲಿ ನಿಯಮಾನುಸಾರ ಕ್ರೀಯಾಯೋಜನೆ ತಯಾರಿಸಿ ಇ-ಗ್ರಾಮ್ ಸ್ವರಾಜ್‌ಗೆ ಆನ್‌ಲೈನ್‌ನಲ್ಲಿ  ಅಪ್‌ಲೋಡ್ ಮಾಡುವ ಮೂಲಕ ಅಧ್ಯಕ್ಷರು ಹಾಗೂ ಅಭಿವೃದ್ಧಿ ಅಧಿಕಾರಿಗಳೇ ಕಾಮಗಾರಿಗಳಿಗೆ ಅನುಮೋದನೆ ನೀಡುವಂತಹ ಅವಕಾಶವಿದೆ. ಆದರೆ ಇದೀಗ ಕ್ರೀಯಾ ಯೋಜನೆ ತಯಾರಿಸಿ ಅನುಮೋದನೆಗಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಕಳುಹಿಸಬೇಕೆಂದು ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ ಮೌಖಿಕವಾಗಿ ತಿಳಿಸಿದ್ದಾರೆ ಎಂದು ಅಭಿವೃದ್ಧಿ ಅಧಿಕಾರಿಗಳು ತಾಲೂಕಿನ ಎಲ್ಲಾ ಪಂಚಾಯತಿಯ ಕ್ರೀಯಾ ಯೋಜನೆ ಮಂಜೂರಾತಿಗೆ ಅಡ್ಡಿ ಪಡಿಸುತ್ತಿದ್ದು ಕಳೆದ ಮೂರ್ನಾಲ್ಕು ತಿಂಗಳ ಹಿಂದೆಯೇ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಹದಿನೈದನೇ ಹಣಕಾಸಿನ ಹಣಕ್ಕೆ ಕ್ರೀಯಾಯೋಜನೆ ತಯಾರಿಸಿದ್ದರೂ ಕಾಮಗಾರಿ ಮಾಡಿಸದಂತಾಗಿದೆ.

ಮಳೆಗಾಲದ ಆರಂಭದಲ್ಲೇ ಹಲವು ಗ್ರಾಮ ಪಂಚಾಯತಿಗಳಲ್ಲಿ ಕ್ರೀಯಾ ಯೋಜನೆ ತಯಾರಾಗಿದ್ದರೂ ಮೇಲಧಿಕಾರಿಗಳ ಮೌಖಿಕ ಆದೇಶವನ್ನು ಪಾಲಿಸಬೇಕೆಂದು ಅಭಿವೃದ್ಧಿ ಅಧಿಕಾರಿಗಳು ಕೆಲಸ ನಿರ್ವಹಿಸಲು ಬಿಡ್ತುತಿಲ್ಲ. ಕ್ರೀಯಾ ಯೋಜನೆಯನ್ನು ತಾಲೂಕು ಪಂಚಾಯತಿಗೆ ಕಳುಹಿಸಲಾಗಿದೆ ಜಿಲ್ಲಾ ಪಂಚಾಯತ್ ನಿಂದ ಆನುಮೋದನೆ ಆಗಿಲ್ಲ ಎಂದು ಅಬಿವೃದ್ದಿ ಅಧಿಕಾರಿಗಳು ಸಬೂಬು ಹೇಳುತ್ತಿದ್ದಾರೆ, ಜಿಲ್ಲಾ ಪಂಚಾಯತ್‌ನಲ್ಲಿ ಆದಕ್ಕೆ ಸಂಭಂದಿಸಿದ ಕೇಸ್ ವರ್ಕರ್ ಇಲ್ಲ ಎಂಬುದಾಗಿ  ಗ್ರಾಮ ಪಂಚಾಯತಿಯ ಅಧ್ಯಕ್ಷರುಗಳು ಆರೋಪಿಸುತ್ತಿದ್ದು, ಪಂಚಾಯಿತಿಯಲ್ಲಿ 15ನೇ ಹಣಕಾಸು ಯೋಜನೆಯಡಿ ಹಣವಿದ್ದರೂ ಕಾಮಗಾರಿ ನಿರ್ವಹಿಸದಂತಾಗಿದ್ದು, ಅಭಿವೃದ್ದಿ ಕುಂಟಿತವಾಗಿದೆ. ಯಾವೂದೇ ಜಿಲ್ಲೆಯಲ್ಲೂ ಕಾರ್ಯರೂಪದಲ್ಲಿ ಇಲ್ಲದ ನಿಯಮವನ್ನು ಜಾರಿಗೊಳಿಸಲು ಮೌಖಿಕ ಆದೇಶವನ್ನು ನೀಡಿರುವ ಸಿಇಓ ಸ್ನೇಹಲ್ ಸುಧಾಕರ್ ಆದನ್ನು ಹಿಂಪಡೆಯ ಬೇಕಿದೆ.

ನಿಯಮಾನುಸಾರ ಅಧ್ಯಕ್ಷರು ಹಾಗೂ ಅಭಿವೃದ್ಧಿ ಅಧಿಕಾರಿಗಳೇ ಹದಿನೈದನೇ ಹಣಕಾಸು ಯೋಜನೆಯ ಕಾಮಗಾರಿಗಳ ಅನುಮೋದನೆಗೆ ಕ್ರಮ ಕೈಗೊಳ್ಳಬೇಕಾಗಿದ್ದರೂ ವಿನಾಕಾರಣ ಮಂಜೂರಾತಿಗಾಗಿ ಜಿಲ್ಲಾ ಪಂಚಾಯತ್‌ಗೆ ಕಳುಹಿಸಿ ಎಂದು ಹೇಳಿರುವುದು ಖಂಡನೀಯವಾಗಿದ್ದು ಯಾವುದೇ ಲಿಖಿತ ಆದೇಶವಿಲ್ಲದೆ ಅಭಿವೃದ್ಧಿ ಅಧಿಕಾರಿಗಳಿಗೆ ಈ ರೀತಿ ಸೂಚನೆ ನೀಡಿರುವುದು ಸಮಂಜಸವಲ್ಲ. (ಒಂದು ವೇಳೆ ಸರ್ಕಾರದ ಆದೇಶವಿದ್ದರು ಅದು ಅವೈಜ್ಞಾನಿಕ) ಇದರಿಂದ ಕಾಮಗಾರಿ ನಿರ್ವಹಿಸಲು ಸಾಕಷ್ಟು ವಿಳಂಬವಾಗುತ್ತಿರುವುದಲ್ಲದೆ ಅಡಚಣೆಯೂ ಉಂಟಾಗಿದೆ. ಜೊತೆಗೆ ಈ ರೀತಿ ಅನುಮೋದನೆ ಜಿಲ್ಲಾ ಪಂಚಾಯತ್‌ಗೆ ಕಳುಹಿಸಿ ಎನ್ನುವ ಮೂಲಕ ಗ್ರಾಮ ಪಂಚಾಯತಿಯ ಅಧ್ಯಕ್ಷರುಗಳ ಅಧಿಕಾರವನ್ನು ಮೊಟಕುಗೊಳಿಸುವ ಹುನ್ನಾರವೂ ಇದಾಗಿದೆಯೆಂದು ತಿಳಿಸಿರುವ ಒಕ್ಕೂಟದ ಅಧ್ಯಕ್ಷರಾದ ಅನಿಲ್ ಕೂಡಲೇ ಎಲ್ಲಾ ಗ್ರಾಮ ಪಂಚಾಯತಿಯ ಅಭಿವೃದ್ದಿ ಅಧಿಕಾರಿಗಳಿಗೆ ಹಿಂದಿನಂತೆ ಕ್ರೀಯಾ ಯೋಜನೆಯ ಮಂಜೂರಾತಿಗೆ ಅನುಮೋದನೆ ನೀಡುವಂತೆ ಮಾಡಿ ಕಾಮಗಾರಿಗಳನ್ನು ನಡೆಸಲು ಕ್ರಮ  ಕೈಗೊಳ್ಳುವಂತೆ ಆದೇಶ ಹೊರಡಿಸಬೆಕಿದೆ ಎಂದು ಅವರು ಒತ್ತಾಯಿಸಿದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post