ಮಂಡಗದ್ದೆ ರೈತ ಉತ್ಪಾದಕರ ಕಂಪನಿಗೆ ಆರಗ ಚಾಲನೆ

ರೈತರ ಕೈಯಲ್ಲಿ ಮಾರುಕಟ್ಟೆ ಇರಬೇಕು: ಆರಗ ಜ್ಞಾನೇಂದ್ರ

ಗ್ರಾಹಕರು ಬೆಳೆಗಾರರ ನಡುವಿನ ಅಂತರ ಕಡಿಮೆ ಮಾಡಿ ಮಾರುಕಟ್ಟೆ ರೈತರ ಕೈಯಲ್ಲಿ ಇರುವಂತೆ ಮಾಡಬೇಕಾದ ತುರ್ತು ಅಗತ್ಯವಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಅಭಿಪ್ರಾಯಪಟ್ಟರು.

ಮಂಗಳವಾರ ತಾಲ್ಲೂಕಿನ ಬೆಜ್ಜವಳ್ಳಿಯಲ್ಲಿ ಮಂಡಗದ್ದೆ ತೋಟಗಾರಿಕಾ ರೈತ ಉತ್ಪಾದಕರ ಕಂಪನಿ, ನೂತನ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು.

ರೈತರ ಪಾಲಿಗೆ ಈ ಸಂಸ್ಥೆ ಬಹಳ ವಿಶೇಷವಾಗಿ ಸಿದ್ದಗೊಂಡಿದೆ. ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಪ್ರಯತ್ನಿಸುವ ಕಂಪನಿ ಹೊಸ  ಪ್ರಯೋಗಗಳನ್ನು ಮಾಡಿ ಸ್ಥಳೀಯ ರೈತರಿಗೆ ನೆರವಾಗಲು ಪ್ರಯತ್ನಿಸಲಿದೆ. ರೈತರು ಈ ಸಂಸ್ಥೆಯ ಸದುಪಯೋಗವನ್ನು ಪಡೆದುಕೊಳ್ಳುವ ಮೂಲಕ ಸದೃಢರಾಗಬೇಕು ಎಂದರು.

ರೈತರು ಪರಸ್ಪರ ಸಹಕಾರ ನೀಡುವ ಮೂಲಕ ತಮ್ಮ ಉತ್ಪನ್ನಗಳನ್ನು ರಾಷ್ಟ್ರ, ಅಂತರರಾಷ್ಟ್ರೀಯ ಮಾರುಕಟ್ಟೆಗೆ ಪರಿಚಯಿಸುವ ಕ್ರಾಂತಿಕಾರಕ ಬದಲಾವಣೆಗೆ ನಾಂದಿ ಹಾಡಬೇಕು. ಈಗಾಗಲೇ ತಾಲ್ಲೂಕಿನಲ್ಲಿ ಅನೇಕ ರೈತ ಉತ್ಪಾದಕ ಸಂಸ್ಥೆಗಳು ಸೃಷ್ಠಿಯಾಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದರು.

ಮಂಡಗದ್ದೆ ತೋಟಗಾರಿಕಾ ರೈತ ಉತ್ಪಾದಕರ ಕಂಪನಿಯ ಅಧ್ಯಕ್ಷ ಬೇಗುವಳ್ಳಿ ಸತೀಶ್ ಪ್ರಸ್ತಾವಿಕವಾಗಿ ಮಾತನಾಡಿ, ರೈತರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದ್ದು ರೈತರು ಬೆಳೆದ ಬೆಳೆಗೆ ಉತ್ತಮ ಧಾರಣೆ ಲಭಿಸುವ ಹಾಗೆ ನೋಡಿಕೊಳ್ಳಲಾಗುವುದು ಮದ್ಯವರ್ತಿಗಳ ಹಾವಳಿಯನ್ನು ತಪ್ಪಿಸಲಾಗುವುದು ಎಂದರು.  ಅಡಿಕೆ ಉತ್ಪಾದನೆಯ ಪ್ರಮಾಣದಷ್ಟೇ ಅಡಿಕೆ ಸಿಪ್ಪೆ ಲಭ್ಯವಾಗುತ್ತಿದ್ದು ಅಡಿಕೆ ಸಿಪ್ಪೆಯಿಂದ ಸಾವಯವ ಗೊಬ್ಬರವನ್ನು ತಯಾರಿಸಲು ಚಿಂತಿಸಲಾಗಿದೆ.
ಅಡಿಕೆ ಹಾಳೆಯಿಂದ ತಟ್ಟೆ, ದೊನ್ನೆ ಸೇರಿದಂತೆ ಹಲವು ಉತ್ಪನ್ನಗಳಿಗೆ ಉತ್ತೇಜಿಸಲಾಗುವುದು. ದೊಡ್ಡ ಮಟ್ಟದ ಸಂಗ್ರಹ ಕೇಂದ್ರಗಳನ್ನು ತೆರೆಯುವುದರಿಂದ ಅಡಿಕೆ ಬೆಳೆಯ ಜೊತೆಗೆ ಉಪ ಉತ್ಪನ್ನದ ಆದಾಯ ರೈತರಿಗೆ ಸಿಗುವಂತೆ ಮಾಡಲಾಗುವುದು ಎಂದರು.

ಮ್ಯಾಮ್ಕೋಸ್ ಉಪಾಧ್ಯಕ್ಷ ಹಲ್ಕುಳಿ ಮಹೇಶ್, ಟಿಎಪಿಸಿಎಂಎಸ್ ಅಧ್ಯಕ್ಷ ನಾಗರಾಜಶೆಟ್ಟಿ, ಸರಸ್ವತಿ ಸೌಹಾರ್ಧ ಸಹಕಾರ ಸಂಘದ ಅಧ್ಯಕ್ಷ ಬಾಳೇಬೈಲು ರಾಘವೇಂದ್ರ, ಬೆಜ್ಜವಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ದಬ್ಬಣಗದ್ದೆ ಪ್ರಶಾಂತ್, ಮಂಡಗದ್ದೆ ತೋಟಗಾರಿಕಾ ರೈತ ಉತ್ಪಾದಕರ ಕಂಪನಿ ಉಪಾಧ್ಯಕ್ಷ ಸಾಲೇಕೊಪ್ಪ ರಾಮಚಂದ್ರ ಮಾತನಾಡಿದರು.

ವೇದಿಕೆಯಲ್ಲಿ ಮಂಡಗದ್ದೆ ರೈತ ಉತ್ಪಾದಕ ಕಂಪನಿಯ ನಿರ್ದೇಶಕರಾದ ಬೇಗುವಳ್ಳಿ ಕವಿರಾಜ್, ಕೆ.ಕೆ.ನಾಗರಾಜ್, ಹೊನಾಸಗದ್ದೆ ಮಂಜುನಾಥ್, ಮಾಜಿ ಜಿ.ಪಂ. ಸದಸ್ಯ ಕಾಸರವಳ್ಳಿ ಶ್ರೀನಿವಾಸ್, ಬಗರ್ ಹುಕುಂ ಸಮಿತಿ ಮಾಜಿ ಸದಸ್ಯೆ ಪದ್ಮಾ ನವೀನ್, ಕೃಷಿ ಅಧಿಕಾರಿ ಪ್ರವೀಣ್ ಇತರರು ಇದ್ದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post