ಇ-ಗ್ರಾಮ ಸ್ವರಾಜ್ ಮೂಲಕ 15 ನೇ ಹಣಕಾಸು ಕ್ರೀಯಾಯೋಜನೆ ಅವಕಾಶ

ಒಕ್ಕೂಟದಿಂದ ಸಿಇಓ-ಇಓಗೆ ಅಭಿನಂದನೆ
ಕೇಂದ್ರ ಸರ್ಕಾರದ ವತಿಯಿಂದ ನೀಡಲಾಗುವ 15ನೇ ಹಣಕಾಸು ಯೋಜನೆಯಡಿ ಕ್ರಿಯಾಯೋಜನೆ ಅನುಮೋದನೆಗೆ ಸಮಕ್ಷಮ ಪ್ರಾಧಿಕಾರ ಅಂದರೆ ಜಿಲ್ಲಾ ಪಂಚಾಯತಿಯಿಂದ ಅನುಮೋದನೆ ಪಡೆಯಬೇಕೆಂದು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಮೌಖಿಕ ಆದೇಶವನ್ನು ಹೊರಡಿಸಿರುವುದನ್ನು ಖಂಡಿಸಿ ಹೇಳಿಕೆ ನೀಡಲಾಗಿತ್ತು.
ಅಧ್ಯಕ್ಷರ ಅಧಿಕಾರವನ್ನು ಮೊಟಕುಗೊಳಿಸುವ ಹುನ್ನಾರ ಇದಾಗಿದ್ದೆಂದು ಕೂಡಲೇ ಇ-ಗ್ರಾಮ ಸ್ವರಾಜ್ ಪೋರ್ಟ್ ಎಂದಿನಂತೆ ಅಪ್ ಲೋಡ್ ಮಾಡಿ ಕಾಮಗಾರಿ ನಿರ್ವಹಿಸಲು ಅವಕಾಶ ಕಲ್ಪಿಸಲಿದ್ದರೆ ಹೋರಾಟ ನಡೆಸುವುದಾಗಿ ಎಚ್ಚರಿಸಲಾಗಿತ್ತು.
ಇದೀಗ ತಾಲೂಕು ಕಾರ್ಯ ನಿರ್ವಹಣಾಧಿಕಾರಿ ಎನ್ ಶೈಲಾರವರು ತಾಲೂಕಿನ ಎಲ್ಲಾ ಅಭಿವೃದ್ಧಿ ಅಧಿಕಾರಿಗಳಿಗೆ ನಿಯಮಾನುಸಾರ ಇ-ಗ್ರಾಮ್ ಸ್ವರಾಜ್ ಪೋರ್ಟ್ ಮೂಲಕ ಕ್ರೀಯಾಯೋಜನೆ ಅಪ್ ಲೋಡ್ ಮಾಡಿ ಕಾಮಗಾರಿಯನ್ನು ಆರಂಭಿಸುವಂತೆ ಸೂಚಿಸಿದ್ದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ನೆಹಲ್ ಸುಧಾಕರ್ ಲೋಖಂಡೆ ಹಾಗೂ ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ಶೈಲಾರವರಿಗೆ ಗ್ರಾಮಪಂಚಾಯತಿ  ಅಧ್ಯಕ್ಷ /ಉಪಾಧ್ಯಕ್ಷರುಗಳ ಒಕ್ಕೂಟದ ಅಧ್ಯಕ್ಷ ಅನಿಲ್ ಅಭಿನಂದನೆ ಸಲ್ಲಿಸಿದ್ದಾರೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post