ಅ.29ಕ್ಕೆ ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ರಕ್ತದಾನ ಶಿಬಿರ

ಪುನೀತ್ ಬ್ರಿಗೇಡ್ ತೀರ್ಥಹಳ್ಳಿ, ಶ್ರೀ ನಾರಾಯಣ ಗುರು ವಿಚಾರ ವೇದಿಕೆ, ವಿಶ್ವ ಮಾನವ ಕನ್ನಡ ವೇದಿಕೆ ಆಯೋಜನೆ ಸಮಸ್ತ ಜನತೆಗೆ ರಕ್ತದಾನ ಮಾಡಲು ಅವಕಾಶ

ಕನ್ನಡದ ಖ್ಯಾತ ನಟ, ತಮ್ಮ ಸಮಾಜ ಸೇವೆ ಮೂಲಕ ಎಲ್ಲರಿಗೂ ಮಾದರಿಯಾಗಿದ್ದ ನಟ ಪುನೀತ್ ರಾಜ್‍ಕುಮಾರ್ ಸ್ಮರಣಾರ್ಥ ಅಕ್ಟೋಬರ್ 29ರಂದು ಅವರ ಮಾದರಿಯಲ್ಲಿ ಸಾಮಾಜಿಕ ಸೇವೆ ಮುಂದುವರಿಸುವ ಸಲುವಾಗಿ ಪುನೀತ್ ಬ್ರಿಗೇಡ್ ತೀರ್ಥಹಳ್ಳಿ, ಶ್ರೀ ನಾರಾಯಣ ಗುರು ವಿಚಾರ ವೇದಿಕೆ, ವಿಶ್ವ ಮಾನವ ಕನ್ನಡ ವೇದಿಕೆ, ಕುಪ್ಪಳಿ ಕಲ್ಲುಕೊಡಿಗೆ ಇವರ ಸಹಯೋಗದಲ್ಲಿ ರೋಟರಿ ಬ್ಲಡ್ ಬ್ಯಾಂಕ್ ತೀರ್ಥಹಳ್ಳಿ ಇವರ ಆಶ್ರಯದಲ್ಲಿ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ.

ಭಾನುವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ತೀರ್ಥಹಳ್ಳಿ ರೋಟರಿ ಬ್ಲಡ್ ಬ್ಯಾಂಕ್, ವೆಂಕಟೇಶ್ವರ ಚಿತ್ರಮಂದಿರ ಎದುರು, ತೀರ್ಥಹಳ್ಳಿ ಇಲ್ಲಿ ರಕ್ತದಾನ ಶಿಬಿರ ನಡೆಯಲಿದೆ. ಸಮಸ್ತ ಪುನೀತ್ ಅಭಿಮಾನಿಗಳು, ರಕ್ತದಾನಿಗಳು, ಸಾರ್ವಜನಿಕರು ರಕ್ತದಾನ ಮಾಡಬಹುದು.

ಸರ್ವರೂ ಆಗಮಿಸಿ ರಕ್ತದಾನ ಮಾಡಿ, ಇನ್ನೊಬ್ಬರ ಜೀವ ಉಳಿಸೋಣ. ಪುನೀತ್ ಅವರ ಸೇವೆಯನ್ನು ಅವರ ಸ್ಮರಣಾರ್ಥ ಮುಂದುವರಿಸೋಣ ಎಂದು ಆಯೋಜಕರು ಕರೆ ನೀಡಿದ್ದಾರೆ.

ರಕ್ತದಾನದ ಬಳಿಕ ಅಲ್ಲೇ ಪಕ್ಕದಲ್ಲಿರುವ ರೋಟರಿ ಸಮುದಾಯ ಭವನದಲ್ಲಿ ಪುನೀತ್ ನಮನ ಕಾರ್ಯಕ್ರಮ ನಡೆಯಲಿದ್ದು, ತೀರ್ಥಹಳ್ಳಿಯ ಪ್ರತಿಭೆಗಳಿಗೆ ಗೌರವ ಸಮರ್ಪಣೆ ನಡೆಯಲಿದೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post